ಬೆಂಗಳೂರು ಏರ್ ಶೋ 2023: BMTCಯಿಂದ ವಿಶೇಷ ಬಸ್‌ಗಳ ವ್ಯವಸ್ಥೆ; ಸಮಯ ಮತ್ತು ಮಾರ್ಗವನ್ನು ತಿಳಿಯಿರಿ
2023ರ ಏರ್ ಶೋಗೆ ಕ್ಷಣಗಣೆನೆ ಆರಂಭವಾಗಿದ್ದು, ಏರ್ ಶೋ ವೀಕ್ಷಣೆಗೆ ತೆರಳುವವರಿಗೆ ಬಿಎಂಟಿಸಿಯಿಂದ ವಿಶೇಷ ಬಸ್‌ಗಳನ್ನು ಬಿಡಲಾಗಿದೆ. ಹಾಗಾದ್ರೆ ಯಾವೆಲ್ಲ ಮಾರ್ಗಗಳಲ್ಲಿ ಬಿಎಂಟಿಸಿ ವಿಶೇಷ ಬಸ್‌ಗಳ ಸೌಲಭ್ಯ ಇರಲಿದೆ ಎನ್ನುವ ಮಾಹಿತಿಯನ್ನು ಇಲ್ಲಿ ತಿಳಿಯಿರಿ.
ಬೆಂಗಳೂರು, ಫೆಬ್ರವರಿ, 12: ಸಿಲಿಕಾನ್ ಸಿಟಿಯ ಹೊರವಲಯದಲ್ಲಿರುವ ಯಲಹಂಕದ ವಾಯುನೆಲೆಯಲ್ಲಿ ಸೋಮವಾರದಿಂದ (ಫೆಬ್ರವರಿ 13) 14ನೇ ಆವೃತ್ತಿಯ ಏರೋ ಇಂಡಿಯಾ ಏರ್ ಶೋ ನಡೆಯಲಿದೆ. ಹಾಗೆಯೇ ಏರ್ ಶೋಗೆ ಬಿಎಂಟಿಸಿಯಿಂದ ಹೆಚ್ಚುವರಿ ವಿಶೇಷ ಬಸ್ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ.
ಫೆಬ್ರವರಿ 13 ರಿಂದ 17 ರವರೆಗೆ ಏರ್ ಶೋ ನಡೆಯಲಿದ್ದು, ಏರ್ ಶೋ ವೀಕ್ಷಿಸಲು ಹೆಚ್ಚಿನ ಜನರ ದಂಡು ಕಿಕ್ಕಿರಿದು ಬರುವ ಹಿನ್ನೆಲೆಯಲ್ಲಿ ಹೆಚ್ಚುವರಿ ಬಸ್ ಬಿಡಲು ಬಿಎಂಟಿಸಿ ನಿರ್ಧರಿಸಿದೆ. ಸಾರ್ವಜನಿಕ ವೈಮಾನಿಕ ಪ್ರದರ್ಶನವು ಬೆಳಗ್ಗೆ 10 ರಿಂದ ಮಧ್ಯಾಹ್ನ 2 ಗಂಟೆವರೆಗೆ ನಡೆಯಲಿದ್ದು, ದಿನಾಂಕ 16 ಹಾಗೂ 17ರಂದು ಜನರ ಅನೂಕೂಲಕ್ಕಾಗಿ ನಗರದ ವಿವಿಧ ಭಾಗಗಳಿಂದ ಬಸ್‌ಗಳ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ.
BMTC special services to Bangalore Airshow -2023 , timings and route info as in below images pic.twitter.com/yntXl0z5dO
— BMTC (@BMTC_BENGALURU) February 11, 2023
ವಿಶೇಷ ಬಸ್‌ಗಳು ಎಲ್ಲಿಂದ ಆರಂಭ?
ಈ ವಿಶೇಷ ಬಸ್‌ಗಳನ್ನು ಮೆಜೆಸ್ಟಿಕ್, ಕೆ.ಆರ್ ಮಾರ್ಕೆಟ್, ಶಿವಾಜಿನಗರ, ಹೆಬ್ಬಾಳ, ಬನಶಂಕರಿ ಟಿಟಿಎಂಸಿ, ಯಲಹಂಕ ಎನ್‌ಇಎಸ್, ಕೆಂಗೇರಿ, ಟಿನ್ ಫ್ಯಾಕ್ಟರಿ ಹಾಗೂ ಯಶವಂತಪುರದಿಂದ ಬಿಡಲಾಗಿದೆ. ಏರ್ ಶೋಗೆ ಹೋಗುವವರು ಬಸ್ ನಿಲ್ದಾಣದವರೆಗೆ ತಮ್ಮ ಸ್ವಂತ ವಾಹನದಲ್ಲಿ ಆಗಮಿಸಬೇಕಾಗುತ್ತದೆ. ಅಲ್ಲಿಂದ ಬಸ್ನಲ್ಲಿ ಹೋಗವವರಿಗೆ ನಿಲ್ದಾಣದಲ್ಲಿ ಪಾರ್ಕಿಂಗ್ಗೆ ಪ್ರತ್ಯೇಕ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ. ಯಶವಂತಪುರ, ಶಾಂತಿನಗರ, ಜಯನಗರ, ಕೋರಮಂಗಲ, ಕೆಂಗೇರಿ ಬಸ್ ನಿಲ್ದಾಣದಲ್ಲಿ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದೆ. ಬಸ್ ನಿಲ್ದಾಣದಲ್ಲಿ ಸ್ವಂತ ವಾಹನ ಪಾರ್ಕಿಂಗ್ ಮಾಡಿ ಬಿಎಂಟಿಸಿ ಬಸ್ ಬಳಸುವಂತೆ ಸಾರ್ವಜನಿಕರಲ್ಲಿ ಸಂಸ್ಥೆ ಮನವಿ ಮಾಡಿಕೊಂಡಿದೆ.

ಪ್ರಯಾಣ ಮಾರ್ಗಗಳ ಮಾಹಿತಿ
ಏರ್ ಶೋ ಇರುವ ಹಿನ್ನೆಲೆಯಲ್ಲಿ ಹೆಬ್ಬಾಳ ಎಸ್ಟೀಮ್ ಮಾಲ್ ಫ್ಲೈ ಓವರ್‌ನಿಂದ ಯಲಹಂಕದವರೆಗೂ ಎಲಿವೇಟೆಡ್ ಫ್ಲೈ ಓವರ್ ಮೇಲೆ ವಾಹನ ಸಂಚಾರಕ್ಕೆ ನಿರ್ಬಂಧ ಹೇರಲಾಗಿದೆ. ಏರ್ ಶೋಗೆ ಹೋಗುವವರಿಗೆ ಮಾತ್ರ ನಿಗದಿತ ಪಾಸ್ ತೋರಿಸಿ ಎಲಿವೇಟೆಡ್ ಫ್ಲೈ ಓವರ್ ಸಂಚಾರಕ್ಕೆ ಅವಕಾಶವನ್ನು ಮಾಡಿಕೊಡಲಾಗುತ್ತದೆ ಎನ್ನುವ ಮಾಹಿತಿಯನ್ನು ನೀಡಿದೆ.

ಯಲಹಂಕ, ಕೋಡಿಗೆಹಳ್ಳಿ, ಬ್ಯಾಟರಾಯನಪುರ ಸುತ್ತಮುತ್ತಲಿನ ಪ್ರದೇಶದ ಸಾರ್ವಜನಿಕರು ಫ್ಲೈ ಓವರ್ ಪಕ್ಕದ ಸರ್ವಿಸ್ ರಸ್ತೆ ಬಳಸುವಂತೆ ಸೂಚನೆ ನೀಡಲಾಗಿದೆ. ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಹೋಗುವ ಪ್ರಯಾಣಿಕರು ಹೆಣ್ಣೂರು ಜಂಕ್ಷನ್ ಮುಖಾಂತರ ತೆರಳುವಂತೆ ಬೆಂಗಳೂರು ಸಂಚಾರ ಪೊಲೀಸರು ವಾಹನ ಸವಾರರಿಗೆ ಸೂಚನೆ ನೀಡಿದ್ದಾರೆ. ಹೀಗೆ 2023ರ ಏರ್ ಶೋಗೆ ವಿಶೇಷ ಬಸ್‌ಗಳ ವ್ಯವಸ್ಥೆಯನ್ನು ಮಾಡಲಾಗಿದ್ದು, ಹಾಗಯೇ ಪ್ರಯಾಣಿಕರ ಅನುಕೂಲಕ್ಕಾಗಿ ಕೆಲವೊಂದು ಮಾರ್ಗಗಳನ್ನು ಕೂಡ ಬದಲಾಯಿಸಲಾಗಿದೆ.
-
IPL 2026 RCB: ಹ್ಯಾಜಲ್ವುಡ್, ಯಶ್ ದಯಾಳ್ ಅಲಭ್ಯರಾದ್ರೆ ಆರ್ಸಿಬಿ ಮುಂದಿರುವ 'ಪ್ಲಾನ್ ಬಿ' ಏನು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ










Click it and Unblock the Notifications