BMTC: ಕಚೇರಿಯಲ್ಲೇ ಆತ್ಮಹತ್ಯೆ ಮಾಡಿಕೊಂಡ ಬಿಎಂಟಿಸಿ ಸಿಬ್ಬಂದಿ!
ಬೆಂಗಳೂರು ಜುಲೈ 16: ಬೆಂಗಳೂರಿನಲ್ಲಿ ಬಿಎಂಟಿಸಿ ನೌಕಕರು ಸಂಕಷ್ಟದಲ್ಲಿ ಇದ್ದಾರೆ ಎನ್ನುವುದಕ್ಕೆ ಸಾಕ್ಷಿಯಾಗಿ ಮತ್ತೊಂದು ಸುದ್ದಿ ಹೊರಬಿದ್ದಿದೆ. ಬಿಎಂಟಿಸಿ ಸಿಬ್ಬಂದಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬೆಂಗಳೂರಿನ ಇಡಿ ಕಚೇರಿ ಪಕ್ಕದಲ್ಲಿರುವ ಬಿಎಂಟಿಸಿ ಕಚೇರಿಯಲ್ಲಿ ಈ ದುರ್ಘಟನೆ ನಡೆದಿದೆ.
ಬೆಂಗಳೂರಿನ ಶಾಂತಿನಗರ ಬಸ್ ನಿಲ್ದಾಣದ ಬಿಎಂಟಿಸಿ ಕೇಂದ್ರ ಕಚೇರಿಯಲ್ಲಿಯೇ ಸಿಬ್ಬಂದಿ ಒಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಹೇಶ್ (42) ಎಂಬ ಸಿಬ್ಬಂದಿ ಆತ್ಮಹತ್ಯೆಗೆ ಶರಣಾದವರು. ಇವರ ಆತ್ಮಹತ್ಯೆಗೆ ಕಾರಣ ಏನು ಎಂದು ಈವರೆಗೂ ತಿಳಿದು ಬಂದಿಲ್ಲ.

ಆತ್ಮಹತ್ಯೆ ಮಾಡಿಕೊಂಡ ಮಹೇಶ್ ಬೆಳಗಾವಿ ಜಿಲ್ಲೆಯ ಅಥಣಿ ಮೂಲದವರು. ನಿನ್ನೆ ಬೆಳಗ್ಗೆಯಿಂದ ಮಹೇಶ್ ಕೆಲಸದಲ್ಲಿ ಲವಲವಿಕೆಯಿಂದ ಇರುವುದು ಕಂಡು ಬಂದಿರಲಿಲ್ಲ. ಅವರು ತುಂಬಾ ಬೇಸರದಲ್ಲಿದ್ದರು ಎಂದು ತಿಳಿದು ಬಂದಿದೆ.
ಕಳೆದ ದಿನ ಬೆಳಿಗ್ಗೆ ಸೆಕ್ಯೂರಿಟಿ ಗಾರ್ಡ್ ಹತ್ತಿರ ರೆಕಾರ್ಡ್ಸ್ ರೂಮಿನ ಕೀಯನ್ನು ಪಡೆದುಕೊಂಡಿದ್ದರು. ಕುಟುಂಬದಲ್ಲಿ ಸಮಸ್ಯೆಗಳಿತ್ತಾ ಅಥವಾ ಕಚೇರಿ ಕೆಲಸದಲ್ಲಿ ಏನಾದರೂ ತೊಂದರೆಗಳಿತ್ತಾ ಎನ್ನುವ ಬಗ್ಗೆ ಪೊಲೀಸರು ವಿಚಾರಣೆ ನಡೆಸಿದ್ದಾರೆ.
ನಿನ್ನೆ ಸಂಜೆ ಅವರು ಇದೇ ರೂಮಿನಲ್ಲಿ ನೇಣಿಗೆ ಶರಣಾಗಿದ್ದಾರೆ. ಸ್ಥಳಕ್ಕೆ ಭೇಟಿ ನೀಡದ ಪೊಲಿಸರು ವಿಚಾರಣೆ ನಡೆಸಿದ್ದಾರೆ. ಆತ್ಮಹತ್ಯೆ ಕುರಿತು ಪೊಲೀಸರು ಕುಟುಂಬಸ್ಥರಿಗೆ ಮಾಹಿತಿ ರವಾನಿಸಿದ್ದಾರೆ.
Helplines: COOJ Mental Health Foundation (COOJ)- 0832-2252525, ಪರಿವರ್ತನ್- +91 7676 602 602, Connecting Trust- +91 992 200 1122/+91-992 200 4305 or Sahai- 080-25497777/ [email protected]
ನಿಮ್ಹಾನ್ಸ್, ರೋಟರಿ ಸಂಸ್ಥೆ ಹಾಗೂ ಮೆಡಿಕೊ ಪ್ಯಾಸ್ಟೊರಾಲ್ ಅಸೋಸಿಯೇಷನ್ ನೆರವಿನಿಂದ ಆತ್ಮಹತ್ಯೆ ತಡೆಗಟ್ಟಲು, ಮಾನಸಿಕ ಖಿನ್ನತೆಯಿಂದ ಬಳಲುವವರಿಗಾಗಿ ಸ್ನೇಹಾ ಫೌಂಡೇಷನ್ ಸಹಾಯವಾಣಿ ಇಂತಿದೆ: 04424640050, ಟಾಟಾ ಇನ್ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸ್ 02225521111ಗೆ ಕರೆ ಮಾಡಬಹುದು.












Click it and Unblock the Notifications