BMTC: ಮೊಬೈಲ್ ಅಪ್ಲಿಕೇಶನ್ ಮೂಲಕ ಬಿಎಂಟಿಸಿ ಪಾಸು ಪಡೆಯುವುದು ಹೇಗೆ?

ಬೆಂಗಳೂರು, ಆಗಸ್ಟ್ 31: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ಪ್ರಯಾಣಿಕರಿಗೆ ಮಹತ್ವದ ಮಾಹಿಯೊಂದನ್ನು ನೀಡಿದೆ. ಸೆಪ್ಟೆಂಬರ್ 15ರಿಂದ ದೈನಂದಿನ, ಸಾಪ್ತಾಹಿಕ ಹಾಗೂ ಮಾಸಿಕ ಪಾಸುಗಳನ್ನು ಡಿಜಿಟಲ್ ವ್ಯವಸ್ಥೆಯಲ್ಲಿ ಮೊಬೈಲ್ ಅಪ್ಲಿಕೇಶನ್ ಮೂಲಕ ವಿತರಣೆ ಮಾಡಲಿದೆ. ಮೊಬೈಲ್ ಮೂಲಕ ಪಾಸು ಪಡೆಯುವುದು ಹೇಗೆ? ಎಂಬ ಮಾಹಿತಿಯನ್ನು ನೀಡಲಾಗಿದೆ.

ಬಿಎಂಟಿಸಿ ಪ್ರಯಾಣಿಕರ ಅನುಕೂಲಕ್ಕಾಗಿ ದೈನಿಕ, ಸಾಪ್ತಾಹಿಕ (ವಾರ) ಹಾಗೂ ಮಾಸಿಕ ಪಾಸುಗಳನ್ನು ಪೂರ್ವ ಮುದ್ರಿತ ಮಾದರಿಯಲ್ಲಿ ಮತ್ತು ಡಿಜಿಟಲ್ ಮಾದರಿಯಲ್ಲಿ ವಿತರಣೆ ಮಾಡುತ್ತಿದೆ. ಪ್ರಸ್ತುತ ಸಂಸ್ಥೆಯು ದೈನಿಕ, ಸಾಪ್ತಾಹಿಕ ಹಾಗೂ ಮಾಸಿಕ ಪಾಸುಗಳು ಸಾರ್ವಜನಿಕ ಪ್ರಯಾಣಿಕರಿಗೆ ಸುಲಭವಾಗಿ ದೊರೆಯಲು ಹಾಗೂ ನಗದು ರಹಿತ, ಕಾಗದ ರಹಿತ ಮತ್ತು ಸಂಪರ್ಕ ರಹಿತ ವಹಿವಾಟಿಗಾಗಿ, ಪಾಸುಗಳನ್ನು ಡಿಜಿಟಲ್ ವ್ಯವಸ್ಥೆಯಲ್ಲಿ ವಿತರಿಸಲಿದೆ.

BMTC To Issue Daily Weekly And Monthly Passes Only Through Tummoc App From September 15

ದಿನಾಂಕ 15.09.2024 ರಿಂದ ಅನ್ವಯವಾಗುವಂತೆ ಡಿಜಿಟಲ್ ವ್ಯವಸ್ಥೆಯಲ್ಲಿ ಮೊಬೈಲ್ ಅಪ್ಲಿಕೇಶನ್ ಮುಖಾಂತರ ಪಾಸು ವಿತರಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಬಿಎಂಟಿಸಿ ಹೇಳಿದೆ. ಪ್ರಯಾಣಿಕರು ತಮ್ಮ ಮೊಬೈಲ್‌ನಲ್ಲಿ ಡಿಜಿಟಲ್ ಪಾಸು ಪಡೆಯುವ ವಿಧಾನವನ್ನು ಸಂಸ್ಥೆ ವಿವರಿಸಿದೆ. ಇದಕ್ಕಾಗಿ ಜನರು ಪ್ಲೇ-ಸ್ಟೋರ್‌ನಲ್ಲಿ ಟುಮ್ಯಾಕ್ ಅಪ್ಲಿಕೇಶನ್‌ ಅನ್ನು (Tummoc app) ಡೌನ್‌ಲೋಡ್ ಮಾಡಿಕೊಂಡು ನೋಂದಣಿ ಮಾಡಿಕೊಳ್ಳಬೇಕು. ಜನರು ಬಸ್ ನಿಲ್ದಾಣದಲ್ಲಿಯೂ ಸಹ ಪಾಸು ಪಡೆಯುವ ವ್ಯವಸ್ಥೆ ಇರಲಿದೆ ಎಂದು ಬಿಎಂಟಿಸಿ ಸ್ಪಷ್ಟಪಡಿಸಿದೆ.

ಪಾಸು ಪಡೆಯುವುದು ಹೇಗೆ?; ಪಾಸುಗಳನ್ನು ಪಡೆದು ನೋಂದಣಿ ಮಾಡಿಕೊಂಡ ಬಳಿಕ ದೈನಿಕ/ ಸಾಪ್ತಾಹಿಕ/ ಮಾಸಿಕ ಪಾಸ್‌ ಅನ್ನು ಆಯ್ಕೆ ಮಾಡಿಕೊಂಡು ವಿವರಗಳನ್ನು ಭರ್ತಿ ಮಾಡಿ, ಭಾವಚಿತ್ರವನ್ನು ಕ್ಲಿಕ್ಕಿಸಬೇಕು.

ಪಾಸು ಪಡೆಯಲು ದೃಢೀಕರಿಸಿ, ಪಾಸಿನ ಮೊತ್ತವನ್ನು ಪಾವತಿಸಿದ ನಂತರ ಪಾಸು ಲಭ್ಯವಾಗುತ್ತದೆ.
ಡಿಜಿಟಲ್ ಪಾಸಿನೊಂದಿಗೆ ಆಯ್ಕೆ ಮಾಡಿದ ಗುರುತಿನ ಚೀಟಿಯನ್ನು ಹೊಂದಿ ಪಯಾಣಿಸುವುದು ಹಾಗೂ ವಾಹನಗಳಲ್ಲಿ ಅಂಟಿಸಿರುವ ಕ್ಯೂ ಆರ್ ಕೋಡ್ ಅನ್ನು ಮೊಬೈಲ್ ಮೂಲಕ ಸ್ಕ್ಯಾನ್ ಮಾಡಿ, ಪಾಸಿನ ಮಾನ್ಯತೆಯನ್ನು ಚಾಲನಾ ಸಿಬ್ಬಂದಿಗಳಿಗೆ ತೋರಿಸಬೇಕಿದೆ.

ಪ್ರಯಾಣಿಕರು ಹೆಚ್ಚಿನ ಮಾಹಿತಿಗಾಗಿ https://mybmtc.karnataka.gov.in ವೆಬ್‌ಸೈಟ್‌ಗೆ ಭೇಟಿ ನೀಡಬಹುದು.

ಬಿಎಂಟಿಸಿ ಪ್ರಯಾಣಿಕರ ಅನುಕೂಲಕ್ಕಾಗಿ ಸಾಮಾನ್ಯ, ಎಸಿ, ವಿಮಾನ ನಿಲ್ದಾಣದ ವಾಯುವಜ್ರ, ನೈಸ್ ರಸ್ತೆಯಲ್ಲಿ ಬಸ್‌ಗಳನ್ನು ಓಡಿಸುತ್ತದೆ. ಪ್ರತಿದಿನ ಬಸ್‌ನಲ್ಲಿ ಸಂಚಾರ ನಡೆಸುವ ಜನರಿಗಾಗಿ ಮಾಸಿಕ ಪಾಸಿ, ಪ್ರತಿದಿನದ ಪಾಸು, ಸಾಪ್ತಾಹಿಕ ಪಾಸುಗಳನ್ನು ವಿವಿಧ ದರಗಳಲ್ಲಿ ಪರಿಚಯಿಸಿದೆ.

ಪಾಸುಗಳನ್ನು ಬಿಎಂಟಿಸಿಯ ಟಿಟಿಎಂಸಿ ನಿಲ್ದಾಣಗಳಲ್ಲಿ, ಬಸ್ ನಿಲ್ದಾಣದಲ್ಲಿ ನಿರ್ವಾಹಕರ ಬಳಿಕ ಪಡೆಯಬಹುದಾಗಿತ್ತು. ಆದರೆ ಈಗ ಪಾಸು ಪಡೆಯುವುದನ್ನು ಸಂಪೂರ್ಣ ಡಿಜಿಟಲೀಕರಣ ಮಾಡಲು ಬಿಎಂಟಿಸಿ ಮುಂದಾಗಿದೆ. ನಗದು ರಹಿತವಾಗಿ, ಡಿಜಿಟಲ್ ಪಾವತಿ ಮೂಲಕ ಮೊಬೈಲ್ ಅಪ್ಲಿಕೇಶನ್ ಮೂಲಕವೇ ಪಾಸುಗಳನ್ನು ಪಡೆಯಬಹುದಾಗಿದೆ.

ಇದರಿಂದಾಗಿ ಜನರ ಸಮಯ ಉಳಿತಾಯವಾಗಲಿದೆ. ಟಿಟಿಎಂಸಿಯಲ್ಲಿ ಕೌಂಟರ್ ಮುಂದೆ ಸಾಲುಗಟ್ಟಿ ನಿಲ್ಲುವುದು ತಪ್ಪಲಿದೆ. ಅಲ್ಲದೇ ಪಾಸಿನ ಮೊತ್ತಕ್ಕೆ ಚಿಲ್ಲರೆ ಹಣವನ್ನು ಹೊಂದಿಸುವ ಸಮಸ್ಯೆಗೆ ಪರಿಹಾರ ಸಿಗಲಿದೆ. ಕೈಯಲ್ಲಿರುವ ಮೊಬೈಲ್ ಮೂಲಕ ಡಿಜಿಟಲ್ ಪೇಮೆಂಟ್ ಮಾಡಿ, ದಾಖಲೆಗಳನ್ನು ಅಪ್‌ಲೋಡ್ ಮಾಡಿ, ಬೆರಳ ತುದಿಯಲ್ಲಿಯೇ ಬಸ್ ಪಾಸುಗಳನ್ನು ಇನ್ನು ಮುಂದೆ ಪಡೆಯಬಹುದು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+