ಕೆಂಗೇರಿ ಮೆಟ್ರೋ ಪ್ರಯಾಣಿಕರಿಗೆ ಪ್ರತಿ 15 ನಿಮಿಷಕ್ಕೊಂದರಂತೆ ಬಿಎಂಟಿಸಿ ಫೀಡರ್ ಬಸ್ ಸೇವೆ
ಬೆಂಗಳೂರು, ಆಗಸ್ಟ್ 26: ಕೆಂಗೇರಿ ನಮ್ಮ ಮೆಟ್ರೋ ಪ್ರಯಾಣಿಕರಿಗೆ ಪ್ರತಿ 15 ನಿಮಿಷಕ್ಕೊಂದರಂತೆ ಬಿಎಂಟಿಸಿಯು ಫೀಡರ್ ಬಸ್ ಸೇವೆ ಒದಗಿಸಲಿದೆ.
ಒಟ್ಟು 3 ಕಡೆಗಳಿಂದ ಒಟ್ಟು 10 ಮಾರ್ಗಗಳಲ್ಲಿ 42 ಬಸ್‌ಗಳು ಕಾರ್ಯಾಚರಿಸಲಿವೆ. ಆರ್‌ಆರ್ ಗೇಟ್, ಬೆಂಗಳೂರು ಯೂನಿವರ್ಸಿಟಿ ಹಾಗೂ ಕೆಂಗೇರಿ ಟಿಟಿಎಂಸಿಯಿಂದ ಫೀಡರ್ ಬಸ್ ಸೇವೆ ಸಿಗಲಿದೆ.
ಫೀಡರ್ ಬಸ್‌ಗಳು ಆರ್‌ಆರ್ ಗೇಟ್, ಪೂರ್ಣಪ್ರಜ್ಞ ಲೇಔಟ್, ಗಣಕಲ್, ರಾಮಸಂದ್ರ, ಉಳ್ಳಾಲ ಸ್ಯಾಟಲೈಟ್ ಟೌನ್, ತಾವರೆಕೆರೆ, ರಘುವನಹಳ್ಳಿ, ಬಿಡದಿ ಹಾಗೂ ತಲಘಟ್ಟಪುರ ಸುತ್ತಮುತ್ತಲಿನ ಪ್ರದೇಶಗಳಿಗೆ ಬಸ್ ಸೇವೆ ಇದೆ.

ಫೀಡರ್ ಬಸ್ ಜತೆಜೆತೆಗೇ ಸಾಮಾನ್ಯ ಬಸ್‌ಗಳ ಸಂಚಾರವೂ ಇರಲಿದೆ. ರಾಜರಾಜೇಶ್ವರಿನಗರ, ಬೆಂಗಳೂರು ಯೂನಿವರ್ಸಿಟಿ, ಕೆಂಗೇರಿ, ಉತ್ತರ ಹಳ್ಳಿ, ಬನಶಂಕರಿ, ಕೆಂಗೇರಿ, ಸುಮನಹಳ್ಳಿ, ಬಿಡದಿಗೆ ಬಸ್‌ಗಳು ಸಂಚರಿಸಲಿವೆ.
ಬಹು ನಿರೀಕ್ಷಿತ ನಮ್ಮ ಮೆಟ್ರೋದ ಮೈಸೂರು ರಸ್ತೆ - ಕೆಂಗೇರಿ ವಿಸ್ತರಿತ ಮಾರ್ಗಕ್ಕೆ ಆಗಸ್ಟ್ 29 ರಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಕೇಂದ್ರ ನಗರಾಭಿವೃದ್ಧಿ ಸಚಿವ ಹರ್ದೀಪ್ ಸಿಂಗ್ ಪುರಿ ಅವರು ಚಾಲನೆ ನೀಡಲಿದ್ದಾರೆ.
ಆಗಸ್ಟ್ 29 ರಂದು ಭಾನುವಾರ ಮಧ್ಯಾಹ್ನ 12ಕ್ಕೆ ಸಿಎಂ ಬೊಮ್ಮಾಯಿ ಹಾಗೂ ಕೇಂದ್ರ ಸಚಿವರು ಮೈಸೂರು ರಸ್ತೆ-ಕೆಂಗೇರಿ ಮೆಟ್ರೋಗೆ ಚಾಲನೆ ನೀಡಲಿದ್ದಾರೆ ಎಂದು ಬಿಎಂಆರ್ ಸಿಎಲ್ ವ್ಯವಸ್ಥಾಪಕ ನಿರ್ದೇಶಕ ಅಂಜುಮ್ ಪರ್ವೇಜ್ ಅವರು ತಿಳಿಸಿದ್ದಾರೆ.
ಈಗಾಗಲೇ ರೈಲ್ವೆ ಸುರಕ್ಷತಾ ಆಯುಕ್ತರು ಮಾರ್ಗವನ್ನು ಪರಿಶೀಲನೆ ನಡೆಸಿ, ವಾಣಿಜ್ಯ ಸಂಚಾರಕ್ಕೆ ಒಪ್ಪಿಗೆ ನೀಡಿದ್ದಾರೆ. ಮೈಸೂರು ರಸ್ತೆ-ಕೆಂಗೇರಿ ತನಕ ಮೆಟ್ರೋ ಕಾಮಗಾರಿ ಸಂಪೂರ್ಣ ಪೂರ್ಣಗೊಂಡಿದೆ.
ನೇರಳೆ ಮಾರ್ಗದ ವಿಸ್ತರಿತ ಮಾರ್ಗದಲ್ಲಿ ರೈಲು ಸಂಚಾರ ನಡೆಸುವುದರಿಂದ 75 ಸಾವಿರಕ್ಕೂ ಅಧಿಕ ಪ್ರಯಾಣಿಕರಿಗೆ ಅನುಕೂಲವಾಗಲಿದೆ ಎಂದು ಅಂದಾಜಿಸಲಾಗಿದೆ. ಆರ್. ಆರ್. ನಗರ ಸೇರಿದಂತೆ ಸುತ್ತಮತ್ತಲಿನ ಬಡಾವಣೆಗಳ ಜನರಿಗೆ ಮೆಟ್ರೋ ಸಂಪರ್ಕ ಸಿಗಲಿದೆ.
ಈ ವಿಸ್ತರಿತ ನೇರಳೆ ಮಾರ್ಗದಲ್ಲಿ ನಾಯಂಡಹಳ್ಳಿ, ರಾಜರಾಜೇಶ್ವರಿ ನಗರ, ಜ್ಞಾನ ಭಾರತಿ, ಪಟ್ಟಣಗೆರೆ, ಮೈಲಸಂದ್ರ ಮತ್ತು ಕೆಂಗೇರಿ ಬಸ್ ನಿಲ್ದಾಣ ಸೇರಿದಂತೆ ಒಟ್ಟು ಆರು ಮೆಟ್ರೋ ನಿಲ್ದಾಣಗಳು ಬರುತ್ತವೆ.
ಮೈಸೂರು ರಸ್ತೆಯ ಈ ಮಾರ್ಗದಲ್ಲಿ ಉಂಟಾಗುವ ಅತಿ ಹೆಚ್ಚು ಟ್ರಾಫಿಕ್ ದಟ್ಟಣೆಯಿಂದ ಜನರು ಪ್ರತಿನಿತ್ಯ ಹೈರಾಣುಗುತ್ತಿದ್ದಾರೆ. ಪ್ರತಿನಿತ್ಯ ಕಚೇರಿಗೆ ಓಡಾಡುವವರು ಇದರಿಂದ ಸಾಕಷ್ಟು ಸಮಸ್ಯೆ ಎದುರಿಸುತ್ತಿದ್ದರು. ಈಗ ಈ ಮೆಟ್ರೋ ಮಾರ್ಗದ ಮೂಲಕ ಈ ಭಾಗದ ಜನರು ಲಭ ಸಂಚಾರ ಮಾಡಬಹುದಾಗಿದ್ದು, ಟ್ರಾಫಿಕ್ ದಟ್ಟಣೆ ಕೂಡ ಕಡಿಮೆಯಾಗಲಿದೆ.
ಈ ವಿಸ್ತರಿತ ಮಾರ್ಗವು 2019ರ ಕೊನೆಯ ವೇಳೆಗೆ ಮುಕ್ತಾಯವಾಗಲಿದೆ ಎಂದು ಈ ಹಿಂದೆ ಹೇಳಲಾಗಿತ್ತು. ಆದರೆ, ಕೊರೋನಾ ಸೇರಿ ಹಲವು ಕಾರಣಗಳಿಂದ ಇದು ವಿಳಂಬವಾಗಿತ್ತು.
ಗುತ್ತಿಗೆದಾರರ ಬದಲಾವಣೆ, ಭೂಸ್ವಾಧೀನದಲ್ಲಾದ ವಿಳಂಬ ಮತ್ತು ನಂತರ ಕೊರೊನಾ ಸೋಂಕಿನ ಕಾರಣದಿಂದ ಈ ಮಾರ್ಗ ನಿರ್ಮಾಣ ನೆನೆಗುದಿಗೆ ಬಿದ್ದಿತ್ತು. ಆದರೆ ಇದೆಲ್ಲದಕ್ಕೂ ಈಗ ಕೊನೆ ಎಂಬಂತೆ ಈಗ ಕಾಮಗಾರಿ ಪೂರ್ಣ ಗೊಂಡಿದ್ದು ಸಾರ್ವಜನಿಕರ ಸೇವೆಗೆ ಲಭ್ಯವಾಗುತ್ತಿದೆ.
ಉದ್ಘಾಟನೆ ಬಳಿಕ ಅದೇ ರೈಲಿನಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಅದೇ ನಾಯಂಡಹಳ್ಳಿ ಮೆಟ್ರೋ ನಿಲ್ದಾಣದಿಂದ ಕೆಂಗೇರಿ ಮೆಟ್ರೋ ನಿಲ್ದಾಣಕ್ಕೆ ಪ್ರಯಾಣಿಸಲಿದ್ದಾರೆ. ಮೈಸೂರು ರಸ್ತೆಯ ನಾಯಂಡಹಳ್ಳಿಯಿಂದ ಕೆಂಗೇರಿವರೆಗಿನ 7. 50 ಕಿ.ಮೀ ಮೆಟ್ರೋ ಮಾರ್ಗ ಸುಗಮ ಸಂಚಾರಕ್ಕೆ ಲಭ್ಯವಾಗಲಿದ್ದು, ಇದರಿಂದ ಟ್ರಾಫಿಕ್ ದಟ್ಟಣೆ ಕಡಿಮೆಯಾಗಲಿದೆ.
-
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ?












Click it and Unblock the Notifications