ಪ್ರತ್ಯೇಕ ಬಸ್ ಪಥದಲ್ಲಿ ಸಂಚರಿಸಿದರೆ ದಂಡ ಕಟ್ಟಬೇಕು
ಬೆಂಗಳೂರು, ನವೆಂಬರ್ 20 : ಬೆಂಗಳೂರಿನಲ್ಲಿ ಬಿಎಂಟಿಸಿ ಬಸ್‌ಗಳ ಸಂಚಾರಕ್ಕೆ ಪ್ರತ್ಯೇಕ ಪಥವನ್ನು ನಿರ್ಮಾಣ ಮಾಡಲಾಗಿದೆ. ಬಸ್ ಪಥದಲ್ಲಿ ಬೇರೆ ವಾಹನಗಳು ಸಂಚಾರ ನಡೆಸಿದರೆ ದಂಡ ವಿಧಿಸಲಾಗುತ್ತದೆ ಎಂದು ಬಿಎಂಟಿಸಿ ಎಚ್ಚರಿಕೆ ನೀಡಿದೆ.
Recommended Video
ಬೆಂಗಳೂರಿನ ಹೊರ ವರ್ತುಲ ರಸ್ತೆ ಸೆಂಟ್ರಲ್ ಸಿಲ್ಕ್ ಬೋರ್ಡ್‌ನಿಂದ ಕೆ. ಆರ್. ಪುರಂ ರೈಲ್ವೆ ನಿಲ್ದಾಣ ಹಾಗೂ ಬೈಯಪ್ಪನಹಳ್ಳಿ ತನಕ ರಸ್ತೆಯ ಎರಡೂ ಬದಿಯಲ್ಲಿ ಪ್ರತ್ಯೇಕ ಬಸ್ ಪಥವನ್ನು ನಿರ್ಮಿಸಲಾಗಿದೆ. ಬಸ್ ಪಥದಲ್ಲಿ ಬೇರೆ ವಾಹನಗಳು ಬಾರದಂತೆ ಅರಿವು ಮೂಡಿಸಲಾಗುತ್ತಿದೆ.

ಪ್ರತ್ಯೇಕ ಬಸ್ ಪಥದಲ್ಲಿ ಮೊದಲ ಬಾರಿ ಪ್ರವೇಶ ಮಾಡಿದಲ್ಲಿ 500 ರೂ., ಮತ್ತೊಮ್ಮೆ ನಿಯಮ ಉಲ್ಲಂಘನೆ ಮಾಡಿದರೆ 1,000 ರೂ. ದಂಡ ವಿಧಿಸಲಾಗುತ್ತದೆ ಎಂದು ಬಿಎಂಟಿಸಿ ಎಚ್ಚರಿಕೆ ನೀಡಿದೆ. ಪ್ರತ್ಯೇಕ ಬಸ್ ಪಥದಲ್ಲಿ ಬೇರೆ ವಾಹನಗಳು ಸಂಚಾರ ನಡೆಸಬಾರದು ಎಂದು ಮನವಿ ಮಾಡಲಾಗಿದೆ.
ಪ್ರಾಯೋಗಿಕವಾಗಿ ಬಸ್ ಪಥವನ್ನು ನಗರದಲ್ಲಿ ನಿರ್ಮಾಣ ಮಾಡಲಾಗಿದೆ. ಈ ಪಥದಲ್ಲಿ 24 ಪ್ರಮುಖ ಬಸ್ ನಿಲ್ದಾಣಗಳಿವೆ. 5 ಪ್ರಮುಖ ಇಂಟರ್ ಸೆಕ್ಷನ್‌ಗಳಿವೆ. ಈ ಮಾರ್ಗದಲ್ಲಿ ಸಂಚಾರ ನಡೆಸುವ ಬಸ್‌ಗಳ ವೇಗ 10 ರಿಂದ 15 ಕಿ. ಮೀ.
ಪ್ರತ್ಯೇಕ ಬಸ್ ಪಥದಲ್ಲಿ ಕಾರು, ಬೈಕ್ ಸೇರಿದಂತೆ ಯಾವುದೇ ವಾಹನಗಳ ಸಂಚಾರಕ್ಕೆ ಅವಕಾಶವಿಲ್ಲ. ಅಗ್ನಿ ಶಾಮಕ ವಾಹನ, ಆಂಬ್ಯುಲೆನ್ಸ್‌ಗಳು ಮಾತ್ರ ಸಂಚಾರ ನಡೆಸಬಹುದಾಗಿದೆ. ಬೇರೆ ವಾಹನಗಳು ಸಂಚಾರ ನಡೆಸಿದರೆ ದಂಡ ವಿಧಿಸಲಾಗುತ್ತದೆ.












Click it and Unblock the Notifications