ಬೆಂಗಳೂರಿನ ಪ್ರಥಮ ಪ್ರಜೆಯಾಗಿ ಮಂಜುನಾಥ ರೆಡ್ಡಿ ಆಯ್ಕೆ
ಬೆಂಗಳೂರು, ಸೆ.11 : ಬಿಟಿಎಂ ಲೇಔಟ್ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಮಡಿವಾಳ ವಾರ್ಡ್ ಕಾಂಗ್ರೆಸ್ ಸದಸ್ಯ ಮತ್ತು ಸಚಿವ ರಾಮಲಿಂಗಾ ರೆಡ್ಡಿ ಅವರ ಪರಮಾಪ್ತರಾದ ಬಿ.ಎನ್.ಮಂಜುನಾಥ ರೆಡ್ಡಿ ಅವರು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ನೂತನ ಮೇಯರ್ ಆಗಿ ಆಯ್ಕೆಯಾಗಿದ್ದಾರೆ.
ಶುಕ್ರವಾರ ಬಿಬಿಎಂಪಿ ಪಾಲಿಕೆ ಸಭಾಂಗಣದಲ್ಲಿ ಪ್ರಾದೇಶಿಕ ಆಯುಕ್ತೆ ಎಂ.ವಿ.ಜಯಂತಿ, ಬಿಬಿಎಂಪಿ ಆಯುಕ್ತ ಕುಮಾರ್ ನಾಯಕ್, ಬೆಂಗಳೂರು ನಗರ ಜಿಲ್ಲಾಧಿಕಾರಿ ವಿ.ಶಂಕರ್ ನೇತೃತ್ವದಲ್ಲಿ ನಡೆದ ಚುನಾವಣಾ ಪ್ರಕ್ರಿಯೆಯಲ್ಲಿ 131 ಮತಗಳನ್ನು ಪಡೆದ ಮಂಜುನಾಥ ರೆಡ್ಡಿ ಅವರು ಮೇಯರ್ ಚುನಾವಣೆಯಲ್ಲಿ ಜಯಗಳಿಸಿದರು. [ಮೇಯರ್ ಚುನಾವಣೆ ಕ್ಷಣ-ಕ್ಷಣದ ಮಾಹಿತಿ]

1996, 2010 ಮತ್ತು 2015ರಲ್ಲಿ ಸೇರಿ ಒಟ್ಟು ಮೂರು ಬಾರಿ ಬಿಬಿಎಂಪಿ ಸದಸ್ಯರಾಗಿ ಆಯ್ಕೆಯಾಗಿರುವ ಬಿ.ಎನ್.ಮಂಜುನಾಥ ರೆಡ್ಡಿ ಅವರು ಬೆಂಗಳೂರು ನಗರ ಜಿಲ್ಲಾ ಉಸ್ತುವಾರಿ ಸಚಿವ ರಾಮಲಿಂಗಾ ರೆಡ್ಡಿ ಅವರ ಪರಮಾಪ್ತರು. ಬಿಬಿಎಂಪಿಯಲ್ಲಿ ವಿರೋಧ ಪಕ್ಷದ ನಾಯಕರಾಗಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. [ಮಂಜುನಾಥ ರೆಡ್ಡಿ ಸಂಕ್ಷಿಪ್ತ ಪರಿಚಯ]
ಬಿಜೆಪಿ ಪರವಾಗಿ ಕಾಡು ಮಲ್ಲೇಶ್ವರ ವಾರ್ಡ್ ಬಿಜೆಪಿ ಸದಸ್ಯ ಮಂಜುನಾಥ ರಾಜು ಅವರು ಮೇಯರ್ ಹುದ್ದೆಗೆ ನಾಮಪತ್ರ ಸಲ್ಲಿಸಿದ್ದರು. ಒಟ್ಟು 260 ಸದಸ್ಯರಿಗೆ ಬಿಬಿಎಂಪಿ ಮೇಯರ್ ಆಯ್ಕೆ ಚುನಾವಣೆಯಲ್ಲಿ ಮತದಾನ ಮಾಡಲು ಅವಕಾಶವಿತ್ತು. ರಾಜ್ಯಸಭಾ ಸದಸ್ಯ ವಿಜಯ್ ಮಲ್ಯ ಹೊರತುಪಡಿಸಿ 259 ಸದಸ್ಯರು ಇಂದಿನ ಚುನಾವಣೆಯಲ್ಲಿ ಪಾಲ್ಗೊಂಡಿದ್ದರು.
2015ರ ಚುನಾವಣೆಯಲ್ಲಿ ಬಿ.ಎನ್.ಮಂಜುನಾಥ ರೆಡ್ಡಿ ಅವರು ಮಡಿವಾಳ ವಾರ್ಡ್‌ನಲ್ಲಿ 6573 ಮತಗಳನ್ನು ಪಡೆದು ಬಿಜೆಪಿಯ ಬಾಬು ಅವರ ವಿರುದ್ಧ ಜಯಗಳಿಸಿದ್ದರು. 2010ರ ಚುನಾವಣೆಯಲ್ಲಿಯೂ ಇದೇ ಕ್ಷೇತ್ರದಲ್ಲಿ ಅವರು ಗೆಲುವು ಸಾಧಿಸಿದ್ದರು.
-
SWR: ಏಪ್ರಿಲ್ 2-5 ಬೆಂಗಳೂರು, ಹುಬ್ಬಳ್ಳಿಯಿಂದ ವಿಶೇಷ ಎಕ್ಸ್ಪ್ರೆಸ್ ರೈಲು ಕಾರ್ಯಾಚರಣೆ, ವೇಳಾಪಟ್ಟಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Karnataka Rains: ಬೆಂಗಳೂರು ಸೇರಿ ರಾಜ್ಯದ ಹಲವು ಜಿಲ್ಲೆಗಳಿಗೆ ಮುಂದಿನ ಮೂರು ಗಂಟೆಗಳಲ್ಲಿ ಭಾರೀ ಮಳೆ ಮುನ್ಸೂಚನೆ -
Hindi Language: ಹಿಂದಿ ಭಾಷೆ ರದ್ದು, ಎಸ್ಎಸ್ಎಲ್ಸಿ ಮಕ್ಕಳ ಬದುಕಿಗೆ ಕಲ್ಲು:ಆರ್ ಅಶೋಕ್ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
ಪಾರದರ್ಶಕ ನೇಮಕಾತಿಗಾಗಿ ಪ್ರತಿಷ್ಠಿತ 'ಸ್ಕಾಚ್ ರಾಷ್ಟ್ರೀಯ ಪ್ರಶಸ್ತಿ' ಮುಡಿಗೇರಿಸಿಕೊಂಡ KSRTC -
ಕನ್ನಡತಿ ಶ್ರೇಯಾಂಕಾ ಪಾಟೀಲ್, ಮಂಧಾನ ಜೊತೆ ಆರ್ಸಿಬಿ ಪಂದ್ಯ ವೀಕ್ಷಣೆ: ಕ್ರೀಡಾ ಸ್ಪೂರ್ತಿ ಮೆರೆದ ಜೆಮಿಮಾ ರೊಡ್ರಿಗಸ್ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ











Click it and Unblock the Notifications