ಜಯನಗರ ಚುನಾವಣೆ : ನಾಮಪತ್ರ ಸಲ್ಲಿಸಿದ ಬಿ.ಎನ್.ಪ್ರಹ್ಲಾದ್

ಬೆಂಗಳೂರು, ಮೇ 25 : ಬೆಂಗಳೂರಿನ ಜಯನಗರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ.ಎನ್.ಪ್ರಹ್ಲಾದ್ ನಾಮಪತ್ರವನ್ನು ಸಲ್ಲಿಸಿದರು. ಜೂನ್ 11ರಂದು ಜಯನಗರ ಕ್ಷೇತ್ರದ ಚುನಾವಣೆ ನಡೆಯಲಿದ್ದು, ಜೂನ್ 16ರಂದು ಫಲಿತಾಂಶ ಪ್ರಕಟವಾಗಲಿದೆ.

ಶುಕ್ರವಾರ ಬಿ.ಎನ್.ಪ್ರಹ್ಲಾದ್ ಅವರು ಕೇಂದ್ರ ಸಚಿವ ಅನಂತ್ ಕುಮಾರ್, ಬಿಜೆಪಿ ರಾಜ್ಯ ಉಸ್ತುವಾರಿ ಮುರಳೀಧರರಾವ್ ಮುಂತಾದ ನಾಯಕರ ಜೊತೆ ಬಿಬಿಎಂಪಿ ಕಚೇರಿಗೆ ತೆರಳಿ ನಾಮಪತ್ರವನ್ನು ಸಲ್ಲಿಸಿದರು.

BN Prahlad files nomination from Jayanagar

ಜಯನಗರದ ಬಿಜೆಪಿ ಅಭ್ಯರ್ಥಿಯಾಗಿದ್ದ ಬಿ.ಎನ್.ವಿಜಯ್ ಕುಮಾರ್ ಅವರ ನಿಧನದಿಂದಾಗಿ ಜಯನಗರ ಕ್ಷೇತ್ರದ ಚುನಾವಣೆ ಮುಂದೂಡಲಾಗಿತ್ತು. ವಿಜಯ್ ಕುಮಾರ್ ಅವರ ಸಹೋದರ ಬಿ.ಎನ್.ಪ್ರಹ್ಲಾದ್ ಅವರಿಗೆ ಬಿಜೆಪಿ ಟಿಕೆಟ್ ನೀಡಿದೆ.

ಜೂನ್ 11ರಂದು ಜಯನಗರ ಕ್ಷೇತ್ರದ ಚುನಾವಣೆ ನಡೆಯಲಿದೆ. ಕಾಂಗ್ರೆಸ್‌ನಿಂದ ಸೌಮ್ಯಾ ರೆಡ್ಡಿ, ಜೆಡಿಎಸ್‌ನಿಂದ ಕಾಳೇಗೌಡ, ಪಕ್ಷೇತರ ಅಭ್ಯರ್ಥಿಯಾಗಿ ರವಿಕೃಷ್ಣಾ ರೆಡ್ಡಿ ಅವರು ಚುನಾವಣಾ ಕಣದಲ್ಲಿದ್ದಾರೆ.

ರಾಜ್ಯದಲ್ಲಿ ಕಾಂಗ್ರೆಸ್‌-ಜೆಡಿಎಸ್‌ ಸಮ್ಮಿಶ್ರ ಸರ್ಕಾರ ಅಸ್ತಿತ್ವಕ್ಕೆ ಬಂದ ಬಳಿಕ ನಡೆಯುತ್ತಿರುವ ಚುನಾವಣೆ ಇದಾಗಿದೆ. ಯಾವ ಪಕ್ಷದ ಅಭ್ಯರ್ಥಿ ಗೆಲ್ಲುತ್ತಾರೆ? ಎಂಬುದು ಕುತೂಹಲಕ್ಕೆ ಕಾರಣವಾಗಿದೆ.

 Jayanagar

ಮೇ 12ರಂದು ಬೆಂಗಳೂರಿನ ರಾಜರಾಜೇಶ್ವರಿ ನಗರ, ಜಯನಗರ ಕ್ಷೇತ್ರದ ಚುನಾವಣೆ ನಡೆದಿಲಲ್ಲ. ರಾಜರಾಜೇಶ್ವರಿ ನಗರದಲ್ಲಿ ಮೇ 28ರಂದು ಚುನಾವಣೆ ನಡೆಯಲಿದ್ದು, ಮೇ 31ರಂದು ಫಲಿತಾಂಶ ಪ್ರಕಟವಾಗಲಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+