5,8 ಮತ್ತು 9ನೇ ತರಗತಿಗೆ ಬೋರ್ಡ್ ಪರೀಕ್ಷೆ: ಇಂದು ಹೈಕೋರ್ಟ್‌ನಿಂದ ಮಹತ್ವ ತೀರ್ಪು

ಬೆಂಗಳೂರು, ಮಾರ್ಚ್ 14: ತೀವ್ರ ವಿವಾದಕ್ಕೆ ಮತ್ತು ಗೊಂದಲಕ್ಕೆ ಕಾರಣವಾಗಿರುವ 5,8 ಮತ್ತು 9ನೇ ತರಗತಿಗಳ ಬೋರ್ಡ್ ಪರೀಕ್ಷೆ ಕುರಿತು ಇಂದು ಅಂತಿಮ ತೀರ್ಮಾನ ಹೈಕೋರ್ಟ್‌ನಿಂದ ಹೊರ ಬೀಳುವ ಸಾಧ್ಯತೆ ಇದೆ.

ಬುಧವಾರ ಸರ್ಕಾರದ ಮೇಲ್ಮನವಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೆ.ಸೋಮಶೇಖರ್ ಮತ್ತು ರಾಜೇಶ್ ಕೆ ರೈ ಅವರಿದ್ದ ನ್ಯಾಯಪೀಠ ವಿಚಾರಣೆ ನಡೆಸಿತು. ಕೆಲ ಕಾಲ ವಾದ ಆಲಿಸಿದ ವಿಚಾರಣೆಯನ್ನು ಇಂದು ಮತ್ತೆ ಮುಂದುವರಿಸುವುದಾಗಿ ಹೇಳಿದೆ.

Board Exams For 5 8 And 9 Standard High Court Will Likely To Take Final Call Today

ರಾಜ್ಯದ ಎಲ್ಲ ಶಾಲೆಗಳಲ್ಲಿ ಏಕರೂಪದ ಶಿಕ್ಷಣ ವ್ಯವಸ್ಥೆ ಜಾರಿ ಮಾಡುವ ಸಲುವಾಗಿ ಶಿಕ್ಷಣ ಇಲಾಖೆ 5,8 ಮತ್ತು 9ನೇ ತರಗತಿಗಳಿಗೆ ಬೋರ್ಡ್ ಮಟ್ಟದ ಮೌಲ್ಯಾಂಕನ ಪರೀಕ್ಷೆಯನ್ನು ನಡೆಸಲು ಮುಂದಾಗಿರುವುದಾಗಿ ರಾಜ್ಯ ಸರ್ಕಾರ ಹೈಕೋರ್ಟ್‌ಗೆ ವಿವರಿಸಿದೆ.

ರಾಜ್ಯ ಪಠ್ಯ ಕ್ರಮ ಅಳವಡಿಸಿಕೊಂಡಿರು5,8 ಮತ್ತು 9ನೇ ತರಗತಿಗಳಿಗೆ ಬೋರ್ಡ್ ಮಟ್ಟದ ಮೌಲ್ಯಾಂಕನ ಪರೀಕ್ಷೆಗಳನ್ನು ನಡೆಸುವ ಸಂಬಂಧ ರಾಜ್ಯ ಸರ್ಕಾರ ಹೊರಡಿಸಿದ್ದ ಎರಡು ಸುತ್ತೋಲೆಗಳನ್ನು ರದ್ದು ಪಡಿಸಿದ್ದ ಏಕ ಸದಸ್ಯ ಪೀಠದ ಆದೇಶ ಪ್ರಶ್ನಿಸಿ ರಾಜ್ಯ ಸರ್ಕಾರ ಮೇಲ್ಮನವಿ ಸಲ್ಲಿಸಿತ್ತು.

ಸರ್ಕಾರದ ಪರವಾಗಿ ವಾದ ಮಂಡಿಸಿದ್ದ ಹೆಚ್ಚುವರಿ ಅಡ್ವೋಕೇಟ್ ಜನರಲ್ ವಿಕ್ರಮ್ ಹುಯಿಲಗೋಳ, ರಾಜ್ಯ ಪಠ್ಯ ಕ್ರಮ ಅಳವಡಿಸಿರುವ ಎಲ್ಲ ಮಕ್ಕಳಿಗೂ ಸಮಾನ ಶಿಕ್ಷಣ ವ್ಯವಸ್ಥೆ ಬೇಕಾಗಿದೆ. ಆದ್ದರಿಂದ ಶಿಕ್ಷಣ ಇಲಾಖೆ ಬೋರ್ಡ್ ಪರೀಕ್ಷೆಗೆ ಮುಂದಾಗಿದೆ ಎಂದರು.

ಅಲ್ಲದೆ, ಪರೀಕ್ಷೆಗಳು ತಮಾಷೆಯಲ್ಲ. ಮಕ್ಕಳು ಹಲವು ದಿನಗಳಿಂದ ಸಿದ್ದತೆ ಮಾಡಿಕೊಂಡಿರುತ್ತಾರೆ. ಆದರೆ, ಪರೀಕ್ಷಾ ದಿನಾಂಕಗಳನ್ನು ಮತ್ತೆ ಮತ್ತೆ ಬದಲಾವಣೆ ಮಾಡುವುದರಿಂದ ವಿದ್ಯಾರ್ಥಿಗಳಿಗೆ ತೀವ್ರ ತರದ ಗೊಂದಲಗಳಿಗೆ ಕಾರಣವಾಗುತ್ತಿದೆ. ಜತೆಗೆ ರಾಜ್ಯ ಶಿಕ್ಷಣ ಇಲಾಖೆಗೆ ಆರ್ ಟಿಐ ಕಾಯಿದೆಯಡಿ ಪರೀಕ್ಷೆಗಳನ್ನು ಮಾಡುವುದಕ್ಕೆ ಅವಕಾಶ ಮಾಡಿಕೊಡಲಾಗಿದೆ. ಕಳೆದ ವರ್ಷವೂ ಆರ್ಟಿಐ ಕಾಯಿದೆಯಡಿ ಸುತ್ತೋಲೆ ಹೊರಡಿಸಿ ಪರೀಕ್ಷೆಗಳನ್ನು ಹಮ್ಮಿಕೊಳ್ಳಲಾಗಿತ್ತು ಎಂದು ವಿವರಿಸಿದರು ವಿವರಣೆ ನೀಡಿದರು.

ವಿಭಾಗೀಯ ಪೀಠ ಅನುಮತಿ

ರಾಜ್ಯ ಪಠ್ಯಕ್ರಮದ ಸರ್ಕಾರಿ, ಅನುದಾನಿತ ಹಾಗೂ ಅನುದಾನರಹಿತ ಶಾಲೆಗಳ 5, 8, 9ನೇ ತರಗತಿ ಹಾಗೂ ಪ್ರಥಮ ಪಿಯುಸಿಗೆ (11ನೇ ತರಗತಿ)

ರಾಜ್ಯಮಟ್ಟದ ಬೋರ್ಡ್ (ಪಬ್ಲಿಕ್‌) ಪರೀಕ್ಷೆ ನಿಗದಿಯಂತೆ ನಡೆಸಲು ಹೈಕೋರ್ಟ್ ವಿಭಾಗೀಯಪೀಠ ಪರೀಕ್ಷೆಗೆ ಅನುಮತಿ ನೀಡಿದೆ.

ಹಾಗಾಗಿ ಪರೀಕ್ಷೆ ನಡೆಸುವ ಸಂಬಂಧ ರಾಜ್ಯ ಸರ್ಕಾರ ಹೊರಡಿಸಿದ್ದ ಎರಡು ಪ್ರತ್ಯೇಕ ಸುತ್ತೋಲೆಗಳನ್ನು ರದ್ದುಪಡಿಸಿ ಹೈಕೋರ್ಟ್ ಏಕ ಸದಸ್ಯ ನ್ಯಾಯಪೀಠ ಹೊರಡಿಸಿದ್ದ ತೀರ್ಪಿಗೆ ವಿಭಾಗೀಯ ಪೀಠ ಗುರುವಾರ ಮಾ.7 ತಡೆಯಾಜ್ಞೆ ನೀಡಿದೆ.

ಬೋರ್ಡ್ ಪರೀಕ್ಷೆ ನಡೆಸುವ ಸಂಬಂಧ 2023ರ ಅ.6 ಮತ್ತು 9ರಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹೊರಡಿಸಿದ್ದ ಸುತ್ತೋಲೆಗಳನ್ನು ಪ್ರಶ್ನಿಸಿ 'ನೋಂದಾಯಿತ ಅನುದಾನರಹಿತ ಖಾಸಗಿ ಶಾಲೆಗಳ ಆಡಳಿತ ಮಂಡಳಿಗಳ ಸಂಘ'(ರುಪ್ಸಾ) ಹಾಗೂ 'ಅನುದಾನ ರಹಿತ ಮಾನ್ಯತೆ ಪಡೆದ ಶಾಲೆಗಳ ಸಂಘಟನೆ'(ಅವರ್‌ ಸ್ಕೂಲ್ಸ್‌) ಸಲ್ಲಿಸಿದ್ದ ಪ್ರತ್ಯೇಕ ತಕರಾರು ಅರ್ಜಿ ಸಲ್ಲಿಸಿದ್ದವು. ಅವುಗಳನ್ನು ಪುರಸ್ಕರಿಸಿದ್ದ ನ್ಯಾಯಮೂರ್ತಿ ರವಿ ವಿ. ಹೊಸಮನಿ ಅವರ, ಸರ್ಕಾರದ ಸುತ್ತೋಲೆಗಳನ್ನು ರದ್ದುಪಡಿಸಿ ಬುಧವಾರ ಆದೇಶಿಸಿತ್ತು.

ಈ ಆದೇಶ ಪ್ರಶ್ನಿಸಿ ರಾಜ್ಯ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿ ಸಂಬಂಧ ನ್ಯಾಯಮೂರ್ತಿ ಕೆ.ಸೋಮಶೇಖರ್‌ ಅವರ ನೇತೃತ್ವದ ವಿಭಾಗೀಯ ಪೀಠವು ವಾದ-ಪ್ರತಿವಾದ ಆಲಿಸಿತು. ಬಳಿಕ ಏಕ ಸದಸ್ಯ ನ್ಯಾಯಪೀಠದ ತೀರ್ಪಿಗೆ ತಡೆಯಾಜ್ಞೆ ನೀಡಿ ಮಧ್ಯಂತರ ತೀರ್ಪು ಪ್ರಕಟಿಸಿತು. ಆ ಮೂಲಕ ಬೋರ್ಡ್‌ ಪರೀಕ್ಷೆಗೆ ಹಸಿರು ನಿಶಾನೆ ತೋರಿತು.

ಪೂರ್ವ ನಿಗದಿಯಂತೆ 5, 8, 9ನೇ ತರಗತಿಗಳಿಗೆ ಮಾ.11ರಿಂದ ಪರೀಕ್ಷೆಗಳು ಆರಂಭವಾಗಿದ್ದವು. ಆದರೆ ಮತ್ತೆ ಶಾಲಾ ಸಂಘಟನೆಗಳು ಸುಪ್ರೀಂಕೋರ್ಟ್ ಮೊರೆ ಹೋದ ಹಿನ್ನೆಲೆಯಲ್ಲಿ ಸುಪ್ರೀಂಕೋರ್ಟ್ ಮಂಗಳವಾರ ವಿಭಾಗೀಯಪೀಠದ ಆದೇಶಕ್ಕೆ ತಡೆ ನೀಡಿತಲ್ಲದೆ, ಪರೀಕ್ಷೆಯನ್ನು ಮಧ್ಯಕ್ಕೆ ನಿಲ್ಲಿಸಿದಂತಾಗಿದೆ.

42,255 ಸರ್ಕಾರಿ ಶಾಲೆಗಳು, 2,656 ಅನುದಾನಿತ ಶಾಲೆಗಳು ಸೇರಿದಂತೆ ರಾಜ್ಯದಲ್ಲಿ ಒಟ್ಟು 53,680 ಶಾಲೆಗಳಿವೆ. ರಾಜ್ಯದ ಮಕ್ಕಳ ಹಿತದೃಷ್ಟಿಯಿಂದ ಬೋರ್ಡ್‌ ಪರೀಕ್ಷೆ ನಡೆಸಲಾಗುತ್ತಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+