ಬೆಂಗಳೂರಿನಲ್ಲಿ ಬಾಯ್ಲರ್ ಸ್ಪೋಟ್: ಮೂವರು ಕಾರ್ಮಿಕರಿಗೆ ಗಂಭೀರ ಗಾಯ!
ಬೆಂಗಳೂರಿನ ಬೊಮ್ಮಸಂದ್ರದಲ್ಲಿರುವ ಬಾಲ್ ಫಾರ್ಮ್ ಕಂಪನಿಯಲ್ಲಿ ಬಾಯ್ಲರ್ ಸ್ಪೋಟಗೊಂಡ ಘಟನೆ ನಡೆದಿದೆ.
ಬೆಂಗಳೂರು ಮಾರ್ಚ್ 2: ಬಾಲ್ ಫಾರ್ಮ್ ಕಂಪನಿಯಲ್ಲಿ ಬಾಯ್ಲರ್ ಸ್ಪೋಟಗೊಂಡು ಮೂವರು ಕಾರ್ಮಿಕರು ಗಂಭೀರವಾಗಿ ಗಾಯಗೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಸ್ಪೋಟದ ಭಾರೀ ಶಬ್ದಕ್ಕೆ ನಗರದ ಬೊಮ್ಮಸಂದ್ರದಲ್ಲಿ ಆತಂಕ ಸೃಷ್ಟಿಯಾಗಿದೆ. ಸ್ಪೋಟದಿಂದ ಕೆಮಿಕಲ್ ಸಿಡಿದು ಮೂವರು ಕಾರ್ಮಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಗಾಯಾಳುಗಳನ್ನು ಪ್ರದೀಪ್, ಮುರುಗನ್, ಕಿರಣ್ ಎಂದು ಗುರುತಿಸಲಾಗಿದೆ. ಗಾಯಾಳುಗಳಿಗೆ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಸ್ಪೋಟದ ತೀವ್ರತೆಗೆ ಬಾಯ್ಲರ್ ಛಿದ್ರವಾಗಿ ಹೋಗಿದೆ. ಜೊತೆಗೆ ಸ್ಥಳದಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕರು ಕೆಲ ಅಡಿ ದೂರದಲ್ಲಿ ಹಾರಿ ಬಿದ್ದಿದ್ದಾರೆ. ಬಾಯ್ಲರ್ ಸ್ಪೋಟದ ಶಬ್ದಕ್ಕೆ ಕೆಲ ಕಾಲ ಸ್ಥಳದಲ್ಲಿ ಭಯದ ವಾತಾವರಣ ಸೃಷ್ಟಿಯಾಗಿತ್ತು.
ಸ್ಥಳಕ್ಕೆ ರಕ್ಷಣ ಸಿಬ್ಬಂದ ಹಾಗೂ ಪೊಳೀಸರು ಆಗಮಿಸಿದ್ದು ತನಿಖೆ ನಡೆಸಿದ್ದಾರೆ. ಬಾಯ್ಲರ್ ಸ್ಪೋಟಕ್ಕೆ ಕಾರಣ ಇನ್ನೂ ತಿಳಿದು ಬಂದಿಲ್ಲ. ಕಂಪನಿ ಮಾಲೀಕರ ವಿಚಾರಣೆಯನ್ನು ಮಾಡಲಾಗುತ್ತಿದೆ.












Click it and Unblock the Notifications