ಕೇರಳದಲ್ಲಿ ತಲೆಮರೆಸಿಕೊಂಡಿರುವ ಬಾಂಬ್ ನಾಗ?
ಬೆಂಗಳೂರು, ಏಪ್ರಿಲ್ 18: ಕೋಟ್ಯಾಂತರ ಹಣವನ್ನು ಅಡಗಿಸಿಟ್ಟಿದ್ದ ಆರೋಪದ ಹಿನ್ನೆಲೆಯಲ್ಲಿ ತನ್ನ ಮನೆಯ ಮೇಲೆ ಪೊಲೀಸ್ ದಾಳಿಯಾದ ಬೆನ್ನಲ್ಲೇ ತಲೆಮರೆಸಿಕೊಂಡಿರುವ ತಲೆಮರೆಸಿಕೊಂಡಿರುವ ಪಾಲಿಕೆ ಮಾಜಿ ಸದಸ್ಯ ವಿ.ನಾಗರಾಜ್ ಅಲಿಯಾಸ್ ಬಾಂಬ್ ನಾಗ ಹಾಗೂ ಆತನ ಇಬ್ಬರು ಮಕ್ಕಳು ಕೇರಳದಲ್ಲಿ ತಲೆ ಮರೆಸಿಕೊಂಡಿರುವ ಸಂಭವವಿರಬಹುದೆಂದು ಹೇಳಲಾಗಿದೆ.
ಈ ಬಗ್ಗೆ ಪೊಲೀಸರಿಗೆ ಕೆಲವಾರು ಸುಳಿವು ಸಿಕ್ಕಿದ್ದು, ಈ ಬಗ್ಗೆ ಹೆಚ್ಚಿನ ಮಾಹಿತಿಗಳನ್ನು ಕಲೆಹಾಕುವಲ್ಲಿ ಅವರು ನಿರತರಾಗಿದ್ದಾರೆಂದು ಹೇಳಲಾಗಿದೆ.

ಮತ್ತೊಂದು ಮೂಲದ ಪ್ರಕಾರ, ಪೊಲೀಸರಿಗೆ ನಾಗ, ತಮಿಳುನಾಡಿನಲ್ಲಿಯೂ ಇರಬಹುದಾದ ಬಗ್ಗೆ ಮಾಹಿತಿಗಳು ಲಭ್ಯವಾಗಿದ್ದು, ಆ ನಿಟ್ಟಿನಲ್ಲಿಯೂ ತನಿಖೆಯನ್ನು ಕೈಗೊಳ್ಳಲಾಗಿದೆ ಎಂದು ಹೇಳಲಾಗಿದೆ.












Click it and Unblock the Notifications