ಬೆಂಗಳೂರು ವಿಮಾನ ನಿಲ್ದಾಣಕ್ಕೆ ಹುಸಿ ಬೆದರಿಕೆ ಕರೆ
ಬೆಂಗಳೂರು, ಸೆ. 05: ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಸೇರಿದಂತೆ ದೇಶದ ಪ್ರಮುಖ ವಿಮಾನ ನಿಲ್ದಾಣಗಳಿಗೆ ಬೆದರಿಕೆ ಕರೆ ಬಂದಿರುವ ಹಿನ್ನಲೆಯಲ್ಲಿ ಬಿಗಿ ಭದ್ರತೆ ಒದಗಿಸಲಾಗಿತ್ತು. ಆದರೆ, ಇದೊಂದು ಹುಸಿ ಬೆದರಿಕೆ ಕರೆ ಎಂದು ಘೋಷಿಸಲಾಗಿದೆ.
ಬೆಂಗಳೂರು, ನವದೆಹಲಿ ಸೇರಿದಂತೆ ಮೂರು ವಿಮಾನ ನಿಲ್ದಾಣದಲ್ಲಿರುವ ವಿಮಾನಗಳಿಗೆ ಬಾಂಬ್ ಬೆದರಿಕೆ ಕರೆ ಬಂದಿತ್ತು.ನಂತರ ವಿಮಾನ ನಿಲ್ದಾಣಗಳಲ್ಲಿ ತೀವ್ರ ತಪಾಸಣೆ ನಡೆಸಲಾಯಿತು. ನಂತರ ಬಾಂಬ್ ಬೆದರಿಕೆ ಕರೆ ಹುಸಿ ಎಂದು ತಿಳಿದು ಬಂದಿದೆ.

ಬೆಂಗಳೂರು ವಿಮಾನ ನಿಲ್ದಾಣಕ್ಕೆ ಶುಕ್ರವಾರ ಮಧ್ಯರಾತ್ರಿ ಕರೆ ಮಾಡಿದ ದುರ್ಷರ್ವಿುಗಳು ಏರ್ ಅರೇಬಿಯಾ ವಿಮಾನದಲ್ಲಿ ಬಾಂಬ್ ಇರುವುದಾಗಿ ಹೇಳಿದ್ದರು. ಈ ವಿಮಾನದಲ್ಲಿ ಸುಮಾರು 350 ಜನರು ಹಜ್ ಯಾತ್ರೆಗೆ ತೆರಳುತ್ತಿದ್ದರು. ಬಾಂಬ್ ಬೆದರಿಕೆ ಬಂದ ನಂತರ ಸಿಐಎಸ್ಎಫ್ ಸಿಬ್ಬಂದಿ ವಿಮಾನ ಮತ್ತು ವಿಮಾನ ನಿಲ್ದಾಣದ ತಪಾಸಣೆ ನಡೆಸಿದರು. ಬೆದರಿಕೆ ಕರೆ ಹುಸಿ ಎಂದು ದೃಢಪಟ್ಟ ಮೇಲೆ ಶನಿವಾರ ಬೆಳಗ್ಗೆ 5.30 ಕ್ಕೆ ವಿಮಾನವು ಪ್ರಯಾಣ ಬೆಳೆಸಿದೆ.
ದೆಹಲಿ ವಿಮಾನ ನಿಲ್ದಾಣದಲ್ಲಿ ಭಾರಿ ತಪಾಸಣೆ ನಡೆಸಿ ಬೆದರಿಕೆ ಕರೆಯ ಸತ್ಯಾಸತ್ಯತೆ ಕಂಡುಕೊಳ್ಳಲಾಗಿದೆ. ದೆಹಲಿಯ ಯಾವುದೇ ವಿಮಾನ ನಿಲ್ದಾಣದಲ್ಲಿ ಸ್ಫೋಟಕಗಳು ಪತ್ತೆಯಾಗಿಲ್ಲ. ಇದೊಂದು ಹುಸಿ ಕರೆ ಎಂದು ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಅಧಿಕಾರಿಗಳು ಹೇಳಿದ್ದಾರೆ.
More From
-
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ -
ಐಪಿಎಲ್ಗೂ ಮುನ್ನ ಆರ್ಸಿಬಿ ಹೊಸ ದಾಖಲೆ: 16,000 ಕೋಟಿಗೆ ಆದಿತ್ಯ ಬಿರ್ಲಾ ಗ್ರೂಪ್ ಪಾಲಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು -
IPL 2026 RCB: ಹ್ಯಾಜಲ್ವುಡ್, ಯಶ್ ದಯಾಳ್ ಅಲಭ್ಯರಾದ್ರೆ ಆರ್ಸಿಬಿ ಮುಂದಿರುವ 'ಪ್ಲಾನ್ ಬಿ' ಏನು? -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು











Click it and Unblock the Notifications