Kempegowda Airport: ಬೆಂಗಳೂರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೂ ಬಾಂಬ್‌ ಬೆದರಿಕೆ ಕರೆ

Bengaluru Kempegowda International Airport: ಈಗಾಗಲೇ ದೇಶದಾದ್ಯಂತ ಹಲವು ವಿಮಾನ ನಿಲ್ದಾಣಗಳಿಗೆ, ವಿಮಾನಯಾನ ಸಂಸ್ಥೆಗಳಿಗೆ ಬಾಂಬ್‌ ಬೆದರಿಕೆ ಕರೆಗಳು ಬಂದಿವೆ. ಇನ್ನು ಇದೀಗ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೂ ಬಾಂಬ್‌ ಬೆದರಿಕೆ ಕರೆ ಬಂದಿದೆ ಎನ್ನುವ ಸ್ಫೋಟಕ ಮಾಹಿತಿಯೊಂದು ಲಭ್ಯವಾಗಿದೆ.

ಬೆಳಗಾವಿ ವಿಮಾನ ನಿಲ್ದಾಣಕ್ಕೂ ಬಾಂಬ್ ಬೆದರಿಕೆ ಹಾಕಲಾಗಿದ್ದು, ಇದರ ಮಧ್ಯ ಇದೀಗ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಕೂಡ ಬಾಂಬ್ ಬೆದರಿಕೆ ಕರೆ ಬಂದಿದೆ ಎಂದು ತಿಳಿದುಬಂದಿದೆ.

Bomb Threat Call to Bengaluru Kempegowda International Airport

ಟ್ವೀಟ್ ಮೂಲಕ ಕೆಂಪೇಗೌಡ ಏರ್ಪೋರ್‌ಗೆ ಬೆದರಿಕೆ ಹಾಕಿದ ಸಂದೇಶ ಬಂದಿದೆ. ಕಮಾಂಡ್‌ ಸೆಂಟರ್ ಸ್ಫೋಟಿಸುವುದಾಗಿ ಬೆದರಿಕೆ ಸಂದೇಶ ಬಂದಿದೆ. ಆರು ವಿಮಾನಗಳಲ್ಲಿ 12 ಬಾಂಬರ್‌ಗಳಿದ್ದಾರೆ ಎಂದು ಟ್ವೀಟ್ ಮಾಡಲಾಗಿದೆ.

ಇನ್ನು ಪ್ರತಿಯೊಂದು ವಿಮಾನದಲ್ಲಿ ಇಬ್ಬರು ಬಾಂಬರ್‌ಗಳಿದ್ದಾರೆ ಎಂದು ಟ್ವೀಟ್ ಮಾಡಲಾಗಿದೆ. ಅನಾಮಧಯ ಟ್ವಿಟರ್ ಖಾತೆಯಿಂದ ಈ ಸಂದೇಶ ಬಂದಿದೆ. ಮಂಗಳೂರು-ದುಬೈ ತಿರುವನಂತಪುರಂ-ಮಾಸ್ಕಟ್ ಸೇರಿದಂತೆ ವಿವಿಧ ವಿಮಾನಗಳಲ್ಲಿ ತೆರಳುವ ವಿಮಾನಗಳಲ್ಲಿ ಬಾಂಬರ್‌ಗಳಿದ್ದಾರೆ ಎಂದು ಟ್ವೀಟ್ ಮೂಲಕ ತಿಳಿದುಬಂದಿದೆ.

ಬೆಳಗಾವಿ ವಿಮಾನ ನಿಲ್ದಾಣಕ್ಕೂ ಬಾಂಬ್‌ ಬೆದರಿಕೆ ಕರೆ: ದೇಶಾದ್ಯಂತ ಹಲವು ವಿಮಾನ ನಿಲ್ದಾಣಗಳಿಗೆ. ಈಗಾಗಲೇ ಹಲವು ಬಾರಿ ಬಾಂಬ್ ಬೆದರಿಕೆ ಕರೆ ಬಂದಿದ್ದು, ಅದರಂತೆಯೇ ಇಂದು (ಅಕ್ಟೋಬರ್‌ 20) ಅಪರಿಚಿತರು ವಿಮಾನ ನಿಲ್ದಾಣ ಸ್ಪೋಟಿಸುವುದಾಗಿ ಬೆದರಿಕೆ ಹಾಕಿದ್ದು, ವಿಮಾನ ನಿಲ್ದಾಣದ‌ ನಿರ್ದೇಶಕ ತ್ಯಾಗರಾಜ್ ಅವರ ಇಮೇಲ್‌ಗೆ ಬೆದರಿಕೆ ಪತ್ರ ರವಾನಿಸಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಸದ್ಯ ಈ ಬಗ್ಗೆ ತ್ಯಾಗರಾಜ್ ಮಾರಿಹಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಚೆನ್ನೈನಿಂದ ಬಾಂಬ್ ಬೆದರಿಕೆ ಇಮೇಲ್ ಬಂದಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ಬಾಂಬ್ ಬೆದರಿಕೆ ಪತ್ರದ ಬೆನ್ನಲ್ಲೇ ವಿಮಾನ ನಿಲ್ದಾಣಕ್ಕೆ ಭದ್ರತೆ ಹೆಚ್ಚಳ ಮಾಡಲಾಗಿದ್ದು, ಶ್ವಾನ ದಳ, ಬಾಂಬ್ ಸ್ಕ್ವಾಡ್‌ನಿಂದ ವಿಮಾನ ನಿಲ್ದಾಣದಲ್ಲಿ ಪರಿಶೀಲನೆ ನಡೆಸಲಾಗಿದೆ.

70 ವಿಮಾನಯಾನ ಸಂಸ್ಥೆಗಳಿಗೆ ಬೆದರಿಕೆ: ಸೋಮವಾರದಿಂದ ಇಲ್ಲಿಯವರೆಗೂ, ಕನಿಷ್ಠ 70 ಭಾರತೀಯ ವಿಮಾನಯಾನ ಸಂಸ್ಥೆಗಳಿಗೆ ಬೆದರಿಕೆಗಳು ಬಂದಿವೆ. ಆದರೆ, ಶನಿವಾರ ಒಂದೇ ದಿನ ದೇಶದ 30ಕ್ಕೂ ಹೆಚ್ಚು ವಿಮಾನ ನಿಲ್ದಾಣಗಳಿಗೆ ಬಾಂಬ್‌ ಬೆದರಿಕೆ ಬಂದಿದೆ.

ದೇಶದ ವಿಮಾನ ನಿಲ್ದಾಣಗಳಿಗೆ ನಿರಂತರವಾಗಿ ಬಾಂಬ್‌ ಬೆದರಿಕೆಯ ಕರೆಗಳು ಬರುತ್ತಿರುವ ಹಿನ್ನೆಲೆಯಲ್ಲಿ ಭಾರೀ ಭದ್ರತೆ ತೆಗೆದುಕೊಳ್ಳಲಾಗಿದ್ದು. ಹೈ ಅಲರ್ಟ್‌ ಘೋಷಣೆ ಮಾಡಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+