ಡಿ.ಕೆ.ಶಿವಕುಮಾರ್ ಕಚೇರಿ ಸ್ಫೋಟಿಸುವುದಾಗಿ ಬಾಂಬ್ ಬೆದರಿಕೆ!

ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಅವರ ಕಚೇರಿ ಸ್ಫೋಟ ಮಾಡುವುದಾಗಿ ಬಾಂಬ್‌ ಬೆದರಿಕೆ ಬಂದಿರುವ ಘಟನೆ ವರದಿಯಾಗಿದೆ. ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಅವರ ಕಚೇರಿಗೆ ಬಾಂಬ್ ಸ್ಫೋಟಿಸುವ ಬೆದರಿಕೆ ಇಮೇಲ್ ಬಂದಿದೆ ಎನ್ನಲಾಗಿದೆ. ವಿಮಾನ ನಿಲ್ದಾಣದಲ್ಲಿ ಬೆಳಗ್ಗೆ 11 ಗಂಟೆಗೆ ಮತ್ತು ಡಿಕೆಶಿ ಕಚೇರಿಯಲ್ಲಿ ಬಾಂಬ್ ಸ್ಫೋಟವಾಗಲಿದೆ ಎಂದು ಇ-ಮೇಲ್‌ ಬಂದಿತ್ತು.

ಮಾಹಿತಿ ತಿಳಿದ ತಕ್ಷಣ ಪೊಲೀಸರು, ಬಾಂಬ್​ ನಿಷ್ಕ್ರಿಯ ದಳ ಪರಿಶೀಲನೆ ನಡೆಸಿದ್ದು, ಯಾವುದೇ ಬಾಂಬ್​ ಪತ್ತೆಯಾಗದ ಹಿನ್ನೆಲೆಯಲ್ಲಿ ಹುಸಿ ಬಾಂಬ್​ ಬೆದರಿಕೆ ಸಂದೇಶ ಎಂದು ಖಚಿತವಾಗಿದೆ. ಇನ್ನು ಈ ಬಾಂಬ್​ ಬೆದರಿಕೆ ಸಂದೇಶದಿಂದ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಅದೃಷ್ಟವಶಾತ್‌ ಯಾವುದೇ ಸ್ಫೋಟಕ ಸಾಧನಗಳು ಕಂಡುಬಂದಿಲ್ಲ. ಪೊಲೀಸರು ತನಿಖೆ ಶುರುಮಾಡಿದ್ದು, ಇ-ಮೇಲ್ ಕಳುಹಿಸಿದವರ ಹಿನ್ನೆಲೆ ಕಲೆಹಾಕುತ್ತಿದ್ದಾರೆ.

bomb-threat-email-sent-to-dk-shivakumar-office-police-investigation-underway

ಏರ್‌ಪೋರ್ಟ್‌ ಟರ್ಮಿನಲ್ 1 ಹಾಗೂ 2ರಲ್ಲಿ ಬಾಂಬ್ ಇಟ್ಟಿದ್ದೇವೆ. ಅಲ್ಲಿಂದ ಎಲ್ಲರನ್ನೂ ತೆರವುಗೊಳಿಸಿ. ಏಕಕಾಲದಲ್ಲಿ ಡಿಸಿಎಂ ಕಚೇರಿ, ಏರ್‌ಪೋರ್ಟ್‌ನಲ್ಲಿ ಬಾಂಬ್ ಬ್ಲಾಸ್ಟ್‌ ಆಗಲಿದೆ ಎಂದು ಇಮೇಲ್​ನಲ್ಲಿ ಇತ್ತು. ಈ ಸಂಬಂಧ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಪೊಲೀಸ್​ ಠಾಣೆಯಲ್ಲಿ ಕೇಸ್‌ ದಾಖಲಾಗಿದೆ. ಬೆದರಿಕೆ ಮೇಲ್‌ ಸಂಬಂಧ ಪೊಲೀಸರು ತನಿಖೆಗೆ ಮುಂದಾಗಿದ್ದಾರೆ.

ಇದಕ್ಕೆ ಮುಂಚೆ ಕೂಡ ಬೆಂಗಳೂರಿನ ವಿಮಾನ ನಿಲ್ದಾಣದಲ್ಲಿ ಇಂತಹ ಹಲವಾರು ಫೇಕ್ ಬಾಂಬ್ ಬೆದರಿಕೆಗಳು ವರದಿಯಾಗಿದ್ದು, ಅವು ಎಲ್ಲವೂ ಹುಸಿ ಕರೆ ಎಂದು ತಿಳಿದುಬಂದಿದೆ. ಇದಾದ ಬಳಿಕ ಅಲ್ಲಿ ಭದ್ರತಾ ಕ್ರಮಗಳನ್ನು ಕೂಡ ಹೆಚ್ಚಿಸಲಾಗಿದೆ. ಇತ್ತೀಚಿನ ಕೆಲ ತಿಂಗಳುಗಳಲ್ಲಿ ಕೆಂಪೇಗೌಡ ವಿಮಾನ ನಿಲ್ದಾಣ ಹಾಗೂ ಪ್ರಮುಖ ಸ್ಥಳಗಳಿಗೆ ಸಾಕಷ್ಟು ಹುಸಿ ಬಾಂಬ್ ಬೆದರಿಕೆಗಳು ಬಂದಿವೆ. ಈ ಜೀವಂತ ಆರೋಪಗಳು ಭದ್ರತಾ ಜಾಗೃತಿಯನ್ನು ಹೆಚ್ಚಿಸಿದ್ದರೂ ಯಾವುದೇ ನಿಜವಾದ ಬೆದರಿಕೆ ಸಾಬೀತಾಗಿಲ್ಲ.

ಇತ್ತೀಚೆಗೆ ಬೆಂಗಳೂರು ನಗರದಲ್ಲಿ 40ಕ್ಕೂ ಹೆಚ್ಚು ಖಾಸಗಿ ಶಾಲೆಗಳಿಗೆ ಬಾಂಬ್ ಬೆದರಿಕೆ ಇ-ಮೇಲ್‌ ಬಂದಿದ್ದವು. ಐಡಿ ಬಳಸಿಕೊಂಡು ಕಳುಹಿಸಲಾದ ಇ-ಮೇಲ್‌ನಲ್ಲಿ ತರಗತಿಗಳಲ್ಲಿ ಕಪ್ಪು ಪ್ಲಾಸ್ಟಿಕ್ ಬ್ಯಾಗ್‌ಗಳೊಳಗೆ ಹಾನಿಕಾರಕ ಸ್ಫೋಟಕ ವಸ್ತುಗಳನ್ನ ಹಾಕಲಾಗಿದೆ ಎಂದು ಹೇಳಲಾಗಿತ್ತು. ಇದರಿಂದ ವಿದ್ಯಾರ್ಥಿ, ಪೋಷಕರು ಮತ್ತು ಶಾಲಾ ಸಿಬ್ಬಂದಿಯಲ್ಲಿ ಆತಂಕ ಮನೆಮಾಡಿತ್ತು.

ಬಾಂಬ್ ಪತ್ತೆಹಚ್ಚುವ ಮತ್ತು ನಾಶಪಡಿಸುವ ತಂಡಗಳನ್ನು ತಕ್ಷಣವೇ ಈ ಎಲ್ಲ ಶಾಲೆಗಳಿಗೆ ಕಳುಹಿಸಿ ಪರಿಶೀಲನೆ ನಡೆಸಲಾಯಿತು. ಆದರೆ ಯಾವುದೇ ಸ್ಫೋಟಕ ವಸ್ತುಗಳು ಸಿಗಲಿಲ್ಲ. ಈ ಬೆದರಿಕೆಯನ್ನು ಅಧಿಕಾರಿಗಳು ಹುಸಿ ಬೆದರಿಕೆ ಎಂದು ಘೋಷಿಸಿದ್ದರು. ಇದೇ ರೀತಿಯ ಹೆಚ್ಚಿನ ಬೆದರಿಕೆಗಳು ಕಳೆದ ಕೆಲವು ತಿಂಗಳಲ್ಲಿ ಬೆಂಗಳೂರಿನಲ್ಲೂ ಮತ್ತು ದೆಹಲಿ ನಗರದಲ್ಲೂ ಬಂದಿದ್ದು, ಭದ್ರತಾ ಕ್ರಮಗಳನ್ನು ಹೆಚ್ಚಿಸಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+