Bomb Threat: 'ನಾನು ಕೂಡ ಟೆರರಿಸ್ಟ್, ಕನ್ನಡಿಗರ ವಿರೋಧಿ': ಮೆಟ್ರೋ ನಿಲ್ದಾಣಕ್ಕೆ ಬಾಂಬ್ ಬೆದರಿಕೆ!
ಬೆಂಗಳೂರು, ನವೆಂಬರ್ 18: ಇತ್ತೀಚಿನ ದಿನಗಳಲ್ಲಿ ಬಾಂಬ್ ಬೆದರಿಕೆ ಪ್ರಕರಣಗಳು ಹೆಚ್ಚುತ್ತಿದೆ. ಶಾಲೆಗಳು, ವಿಮಾನ ನಿಲ್ದಾಣಗಳು ಹಾಗೂ ರಾಜಕಾರಣಿಗಳ ಮನೆಗಳನ್ನ ಸ್ಫೋಟಿಸುವುದಾಗಿ ಹುಸಿ ಬಾಂಬ್ ಬೆದರಿಕೆ ಮೇಲ್ಗಳು ಬರುತ್ತಲೇ ಇದೆ. ಕಳೆದ ಒಂದು ತಿಂಗಳಿನಲ್ಲಿ ಮುಖ್ಯಮಂತ್ರಿಗಳ ನಿವಾಸಕ್ಕೆ ಬೆದರಿಕೆ ಕರೆ ಬಂದಿತ್ತು. ಅಲ್ಲದೇ ಖಾಸಗಿ ಶಾಲೆಗಳು ಹಾಗೂ ಕಾಲೇಜುಗಳಿಗೆ ಸತತವಾಗಿ ಬೆದರಿಕೆಗಳು ಬರುತ್ತಲೇ ಇವೆ. ಇದೀಗ ನಮ್ಮ ಮೆಟ್ರೋ ನಿಲ್ದಾಣಕ್ಕೂ ಸಹ ಬಾಂಬ್ ಬೆದರಿಕೆ ಇ-ಮೇಲ್ ಬಂದಿದೆ.
ಬೆಂಗಳೂರಿನ ಮೆಟ್ರೋ ನಿಲ್ದಾಣವನ್ನು ಸ್ಫೋಟಿಸುವುದಾಗಿ ಬಂದಿರುವ ಬೆದರಿಕೆ ಇಮೇಲ್ ಒಂದು ಬಿಎಂಆರ್‌ಸಿಎಲ್‌ನಲ್ಲಿ ಆತಂಕ ಸೃಷ್ಟಿಸಿದೆ. ನವೆಂಬರ್ 14ರ ರಾತ್ರಿ ಸುಮಾರು 11.30ಕ್ಕೆ ಬಿಎಂಆರ್‌ಸಿಎಲ್ ಅಧಿಕೃತ ಇಮೇಲ್‌ಗೆ ಅಪರಿಚಿತ ವ್ಯಕ್ತಿಯೊಬ್ಬ ಬೆದರಿಕೆಯ ಸಂದೇಶ ಕಳುಹಿಸಿದ್ದ. ವ್ಯಕ್ತಿ ತಾನು ಕಳಿಸಿದ ಇ-ಮೇಲ್ನಲ್ಲಿ ತನ್ನ ವಿಚ್ಛೇದಿತ ಪತ್ನಿಗೆ ಡ್ಯೂಟಿ ನಂತರ ಮಾನಸಿಕ ಕಿರುಕುಳ ನೀಡಿದರೆ ಮೆಟ್ರೋ ನಿಲ್ದಾಣ ಬ್ಲಾಸ್ಟ್ ಮಾಡುತ್ತೇನೆಂದು ಬರೆದಿದ್ದಾನೆ.

ಇನ್ನೂ ಇಮೇಲ್‌ನಲ್ಲಿ, ಮೆಟ್ರೋ ಸಿಬ್ಬಂದಿಯಾದ ತನ್ನ ವಿಚ್ಛೇದಿತ ಪತ್ನಿಗೆ ಡ್ಯೂಟಿ ನಂತರ ಮಾನಸಿಕ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ, ನಿಮ್ಮ ಒಂದು ಮೆಟ್ರೋ ನಿಲ್ದಾಣ ಬ್ಲಾಸ್ಟ್ ಮಾಡಬೇಕಾಗುತ್ತದೆ. ನಾನು ಉಗ್ರಗಾಮಿಯಂತೆ, ಅದರಲ್ಲೂ ಕನ್ನಡಿಗರ ವಿರುದ್ಧ ಎಂದು ಬೆದರಿಕೆ ಹಾಕಲಾಗಿದೆ. ಮೇಲ್ ಪರಿಶೀಲಿಸಿದ ಬಳಿಕ ಬಿಎಂಆರ್‌ಸಿಎಲ್ ಅಧಿಕಾರಿ ತಕ್ಷಣವೇ ವಿಲ್ಸನ್ ಗಾರ್ಡನ್ ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ್ದು, ದೂರು ಆಧರಿಸಿ ವಿಲ್ಸನ್ ಗಾರ್ಡನ್ ಪೊಲೀಸರು ಎಫ್ಐಆರ್ ದಾಖಲಿಸಿಕೊಂಡಿದ್ದಾರೆ.
ಇಮೇಲ್ ಮೂಲಕ ಬಾಂಬ್ ಬೆದರಿಕೆ
'If ever I come to know that your metro employees are torturing mentally to my past divorced wife, after duty hours, be careful, one of your metro station gets blasted ... I am also a terrorists liker PATRIOTIC against KANNADIGAS' ಎಂದು ಇಮೇಲ್ ನಲ್ಲಿ ಅಪರಿಚಿತ ವ್ಯಕ್ತಿ ಬರೆದಿದ್ದಾನೆ.












Click it and Unblock the Notifications