ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಸಿಲ್ಕ್ ಬೋರ್ಡ್, ಬಿಟಿಎಂ ಹಾದುಹೋಗುವವರಿಗೆ ಬಿಬಿಎಂಪಿಯಿಂದ ಗುಡ್ ನ್ಯೂಸ್

|
Google Oneindia Kannada News

ಬೆಂಗಳೂರು, ಸೆ 5: ಸದಾ ಸಂಚಾರ ದಟ್ಟಣೆಯಿಂದ ಕುಖ್ಯಾತಿ ಪಡೆದಿದ್ದ ಬೊಮ್ಮನಹಳ್ಳಿ, ಸಿಲ್ಕ್ ಬೋರ್ಡ್ ಜಂಕ್ಷನ್, ಬಿಟಿಎಂ ಲೇಔಟ್ ಸಂಪರ್ಕಿಸುವ ರಸ್ತೆ ಮತ್ತು ಸೇತುವೆ ಉದ್ಘಾಟನೆಗೆ ದಿನಾಂಕ ನಿಗದಿಯಾಗಿದೆ.

Recommended Video

ಕನ್ನಡಿಗರು ಇಷ್ಟೊಂದು ಪ್ರೀತಿ ಕೊಟ್ಟಿರೋವಾಗ ನಾನು RCB ಬಿಟ್ಟು ಹೋಗೋಕೆ ಸಾಧ್ಯನಾ ಎಂದ ಕೊಹ್ಲಿ | Oneindia Kannada

ಈ ಬಗ್ಗೆ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಉಪಮೇಯರ್ ಮತ್ತು ಬೊಮ್ಮನಹಳ್ಳಿ ಬಿಬಿಎಂಪಿ ವಾರ್ಡ್ ಸದಸ್ಯರೂ ಆಗಿರುವ ಸಿ.ಆರ್.ರಾಮಮೋಹನ್ ರಾಜು, ಸೋಮವಾರದಂದು (ಸೆ 7) ರಸ್ತೆ ಮತ್ತು ಸೇತುವೆ, ಸಂಚಾರಕ್ಕೆ ಮುಕ್ತವಾಗಲಿದೆ ಎಂದು ಹೇಳಿದ್ದಾರೆ.

ಕೊನೆಗೂ ನನಸಾದ ಸಿಲ್ಕ್ ಬೋರ್ಡ್ ಜಂಕ್ಷನ್ ಕಾರಿಡಾರ್ ಯೋಜನೆ! ಕೊನೆಗೂ ನನಸಾದ ಸಿಲ್ಕ್ ಬೋರ್ಡ್ ಜಂಕ್ಷನ್ ಕಾರಿಡಾರ್ ಯೋಜನೆ!

ಟ್ರೋಲ್‌ ಗಳು ಮತ್ತು ವೈರಲ್‌ ವಿಡಿಯೋಗಳ ಮೂಲಕ ಕುಖ್ಯಾತಿಯನ್ನ ಪಡೆದಿರುವ ಸಿಲ್ಕ್‌ ಬೋರ್ಡ್‌ ಜಂಕ್ಷನ್‌ ನ ಸಂಚಾರ ದಟ್ಟಣೆಯನ್ನು ಸರಾಗಗೊಳಿಸುವ ಬೊಮ್ಮನಹಳ್ಳಿ - ಬಿ.ಟಿ.ಎಂ ಲೇಔಟ್‌ ರಸ್ತೆ ಹಾಗೂ ಸಂಪರ್ಕ ಸೇತುವೆಯ ಉದ್ಘಾಟನೆ ಸೆಪ್ಟೆಂಬರ್ 7 ಸೋಮವಾರದಂದು ನಡೆಯಲಿದೆ.

"ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಬರುವ ಬೊಮ್ಮನಹಳ್ಳಿಯಿಂದ ಬಿಟಿಎಂ ಲೇಔಟ್ ಸಂಪರ್ಕಿಸುವ ರಸ್ತೆಯ ಲೋಕಾರ್ಪಣೆ ಕಾರ್ಯಕ್ರಮವನ್ನು ಸೋಮವಾರ, ಬೆಳಗ್ಗೆ 9.30ಕ್ಕೆ ಹಮ್ಮಿಕೊಳ್ಳಲಾಗಿರುತ್ತದೆ"ಎಂದು ಉಪ ಮಹಾಪೌರರ ಪತ್ರಿಕಾ ಪ್ರಕಟಣೆಯಲ್ಲಿ ಹೇಳಲಾಗಿದೆ.

ಕಾರ್ಯಕ್ರಮದಲ್ಲಿ ಕಂದಾಯ ಸಚಿವ ಆರ್. ಅಶೋಕ್

ಕಾರ್ಯಕ್ರಮದಲ್ಲಿ ಕಂದಾಯ ಸಚಿವ ಆರ್. ಅಶೋಕ್

"ಕಾರ್ಯಕ್ರಮದಲ್ಲಿ ಕಂದಾಯ ಸಚಿವ ಆರ್. ಅಶೋಕ್, ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಸದಸ್ಯ ತೇಜಸ್ವಿ ಸೂರ್ಯ, ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಸತೀಶ್ ರೆಡ್ಡಿ, ಬಿಟಿಎಂ ಲೇಔಟ್ ಶಾಸಕ ರಾಮಲಿಂಗಾ ರೆಡ್ಡಿ, ಮೇಯರ್ ಸೇರಿದಂತೆ ಬಿಬಿಎಂಪಿಯ ಉನ್ನತಾಧಿಕಾರಿಗಳು ಪಾಲ್ಗೊಳ್ಳಲಿದ್ದಾರೆ" ಎಂದು ಉಪಮೇಯರ್ ತಿಳಿಸಿದ್ದಾರೆ.

ಉಪಮೇಯರ್ ಅವರ ಪತ್ರಿಕಾ ಪ್ರಕಟಣೆ

ಉಪಮೇಯರ್ ಅವರ ಪತ್ರಿಕಾ ಪ್ರಕಟಣೆ

"ಪ್ರತಿದಿನ ಲಕ್ಷಾಂತರ ವಾಹನ ಸವಾರರು ಈ ಜಂಕ್ಷನ್‌ ನಲ್ಲಿ ಸಂಚಾರ ದಟ್ಟಣೆಯ ಕಾರಣ ತೀವ್ರ ತೊಂದರೆಯನ್ನು ಅನುಭವಿಸುತ್ತಿದ್ದರು. ಈ ಬವಣೆಯನ್ನು ನಿವಾರಿಸುವ ದೃಷ್ಟಿಯಿಂದ ಕೈಗೊಂಡ ಕಾಮಗಾರಿಯ ಪೂರ್ಣಗೊಂಡಿದೆ. ಬೊಮ್ಮನಹಳ್ಳಿ - ಬಿ.ಟಿ.ಎಂ ಲೇಔಟ್‌ ಸಂಪರ್ಕಿಸುವ ರಸ್ತೆ ಹಾಗೂ ಸೇತುವೆ ಲೋಕಾರ್ಪಣೆಗೊಳ್ಳಲಿದೆ"ಎಂದು ಉಪಮೇಯರ್ ಅವರ ಪತ್ರಿಕಾ ಪ್ರಕಟಣೆಯಲ್ಲಿ ಹೇಳಿದ್ದಾರೆ.

ಹೊಸೂರು ರಸ್ತೆಯಲ್ಲಿ ಭಜರಂಗಿ ದೇಗುಲ ನೆಲಸಮ, ಯಾರು ಹೊಣೆ?ಹೊಸೂರು ರಸ್ತೆಯಲ್ಲಿ ಭಜರಂಗಿ ದೇಗುಲ ನೆಲಸಮ, ಯಾರು ಹೊಣೆ?

ಸಿಲ್ಕ್‌ಬೋರ್ಡ್‌ ಸಂಚಾರ ದಟ್ಟಣೆಗೆ ಪರಿಹಾರ

ಸಿಲ್ಕ್‌ಬೋರ್ಡ್‌ ಸಂಚಾರ ದಟ್ಟಣೆಗೆ ಪರಿಹಾರ

"ಈ ಸಂಪರ್ಕ ರಸ್ತೆಯ ಕಾರಣದಿಂದಾಗಿ ಸುಮಾರು 50 ಸಾವಿರ ವಾಹನ ಸವಾರರು ಸಂಚಾರ ದಟ್ಟಣೆಯ ಬವಣೆಯಿಂದ ಬಚಾವ್‌ ಆಗಲಿದ್ದಾರೆ. ಬೊಮ್ಮಹಳ್ಳಿ ಹಾಗೂ ಬಿಟಿಎಂ ಪ್ರದೇಶದ ಜನರ ಅನುಕೂಲಕ್ಕಾಗಿ ಉತ್ತಮ ಗುಣಮಟ್ಟದ ರಸ್ತೆಯನ್ನು ನಿರ್ಮಿಸಲಾಗಿದೆ" ಎಂದು ಉಪ ಮೇಯರ್ ಸಿ.ಆರ್.ರಾಮಮೋಹನ್ ರಾಜ್ ತಿಳಿಸಿದ್ದಾರೆ.

ಸಿಲ್ಕ್ ಬೋರ್ಡ್ ಜಂಕ್ಷನ್ ರಾಷ್ಟ್ರ ಮಟ್ಟದಲ್ಲಿ ಸುದ್ದಿ

ಸಿಲ್ಕ್ ಬೋರ್ಡ್ ಜಂಕ್ಷನ್ ರಾಷ್ಟ್ರ ಮಟ್ಟದಲ್ಲಿ ಸುದ್ದಿ

ಟ್ರಾಫಿಕ್ ಜಾಮ್ ಮತ್ತು ಮಳೆ ಬಂದಾಗ ಕೆರೆಯಂತಾಗುವುದು ಈ ರೀತಿಯ ಸಮಸ್ಯೆಗಳಿಂದ ಸಿಲ್ಕ್ ಬೋರ್ಡ್ ಜಂಕ್ಷನ್ ರಾಷ್ಟ್ರ ಮಟ್ಟದಲ್ಲಿ ಸುದ್ದಿಯಾಗುತ್ತಿತ್ತು. ಈಗ, ಸಂಪರ್ಕ ರಸ್ತೆ ಮತ್ತು ಸೇತುವೆಯಿಂದ, ಯಾವ ಮಟ್ಟಿಗೆ ಸಂಚಾರ ಸಮಸ್ಯೆ ಕಮ್ಮಿಯಾಗಲಿದೆ ಎನ್ನುವುದು ಗೊತ್ತಾಗಲಿದೆ.

English summary
Bommanahalli - BTM Layout Connectivity Road And Bridge Will Be Inaugurated On Sep 7,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X