ಬೊಮ್ಮನಹಳ್ಳಿ ಕ್ಷೇತ್ರದಲ್ಲಿ ಕಾಂಗ್ರೆಸ್‌ಗೆ ಆಘಾತ: ‘ಕೈ’ ತೊರೆದು ಬಿಜೆಪಿ ಸೇರಿದ ನಾಯಕರು!
ಕರ್ನಾಟಕದ ರಾಜಧಾನಿ ಬೆಂಗಳೂರಿನಲ್ಲಿ 'ಗ್ರೆಟರ್ ಬೆಂಗಳೂರು ಅಥಾರಿಟಿ' ರಚನೆ ಮಾಡಿರುವ ಸರ್ಕಾರ ಇನ್ನೇನು ಚುನಾವಣೆ ನಡೆಸಲು ಸಜ್ಜಾಗಿದೆ. ಒಂದು ಕಡೆ, ಕರ್ನಾಟಕದಲ್ಲಿ ಅಧಿಕಾರ ನಡೆಸುತ್ತಿರುವ ಕಾಂಗ್ರೆಸ್ ಪಕ್ಷಕ್ಕೆ ಇದು ಪ್ರತಿಷ್ಠೆಯ ವಿಚಾರವಾಗಿದ್ದರೆ, ಇನ್ನೊಂದು ಕಡೆ ಬಿಜೆಪಿ ನಾಯಕರು ಗೆಲುವಿಗಾಗಿ ರಣತಂತ್ರ ಹೆಣೆಯುತ್ತಿದ್ದಾರೆ. ಹೀಗಾಗಿಯೇ ಗ್ರೆಟರ್ ಬೆಂಗಳೂರು ಚುಣಾವಣೆಗೆ ಬೇಕಾಗಿರುವ ಸಿದ್ಧತೆಗಳನ್ನ ಕೈಗೊಂಡು, ಗೆಲುವು ನಮ್ಮದೇ ಅಂತಾ ಹೇಳುತ್ತಿದ್ದ ಕಾಂಗ್ರೆಸ್ ನಾಯಕರಿಗೆ ಇದೀಗ ದಿಢೀರ್ ಆಘಾತ ಎದುರಾಗಿದೆ.
'ಗ್ರೆಟರ್ ಬೆಂಗಳೂರು' ಚುನಾವಣೆಗೆ ಮೊದಲು ಕಾಂಗ್ರೆಸ್ ತೊರೆದು ಬಿಜೆಪಿ ಸೇರುತ್ತಿದ್ದಾರೆ ನಾಯಕರು. ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದ ಐಟಿಐ ಲೇಔಟ್ ಮೈದಾನದಲ್ಲಿ ಕಾಂಗ್ರೆಸ್ ತೊರೆದಿದ್ದ ನಾಯಕರು ಬಿಜೆಪಿ ಸೇರ್ಪಡೆಯಾದರು. ಈ ಹಿಂದಿನ ಬಿಬಿಎಂಪಿ ಮಂಗಮ್ಮನಪಾಳ್ಯ ವಾರ್ಡ್-190ರ ನಿಕಟಪೂರ್ವ ಸದಸ್ಯೆ ಶೋಭಾ ಜಗದೀಶ್, ಜಗದೀಶ್ ಗೌಡ ಸೇರಿ ಅನೇಕ ಕಾಂಗ್ರೆಸ್ ಕಾರ್ಯಕರ್ತರು ಕಾಂಗ್ರೆಸ್ ತೊರೆದು ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.

ಬೊಮ್ಮನಹಳ್ಳಿ ಕ್ಷೇತ್ರದಲ್ಲಿ ಬಿಜೆಪಿಗೆ ಬಲ
ಈ ಸೇರ್ಪಡೆಯ ಮೂಲಕ ಬೊಮ್ಮನಹಳ್ಳಿ ಕ್ಷೇತ್ರದಲ್ಲಿ ಬಿಜೆಪಿ ಬಲ ಮತ್ತಷ್ಟು ಹೆಚ್ಚಾಗಿದ್ದರೆ, ಕಾಂಗ್ರೆಸ್‌ಗೆ ಆಘಾತವೇ ಎದುರಾಗಿದೆ. ಬೊಮ್ಮನಹಳ್ಳಿ ಕ್ಷೇತ್ರದಲ್ಲಿ ಸತತವಾಗಿ ಬಿಜೆಪಿ ಶಾಸಕ ಸತೀಶ್ ರೆಡ್ಡಿ ಅವರೇ ಗೆದ್ದು ಆಯ್ಕೆ ಆಗುತ್ತಾ ಬರುತ್ತಿದ್ದು, ಹಿಂದೆ ಬಿಬಿಎಂಪಿ ಇದ್ದಾಗಲೂ ಭಾಗಶಃ ಕಾರ್ಪೊರೇಟರ್ಸ್ ಬಿಜೆಪಿ ಪಕ್ಷದಿಂದಲೇ ಗೆಲ್ಲುತ್ತಿದ್ದರು. ಇದೀಗ ಮತ್ತೆ ಜಿಬಿಎ ಬಂದಾಗಲೂ ಅದೇ ಟ್ರೆಂಡ್ ಮುಂದುವರಿಯುವ ಮುನ್ಸೂಚನೆ ಸಿಕ್ಕಿದೆ.
ಪ್ರತಿಪಕ್ಷ ನಾಯಕ ಆರ್. ಅಶೋಕ್ ಭಾಗಿ
ಶೋಭಾ ಜಗದೀಶ್ ಹಾಗೂ ಜಗದೀಶ್ ಗೌಡ ಸೇರಿದಂತೆ ಬೊಮ್ಮನಹಳ್ಳಿ ಕಾಂಗ್ರೆಸ್ ನಾಯಕರು ಬಿಜೆಪಿ ಸೇರ್ಪಡೆ ಆಗುವ ಕಾರ್ಯಕ್ರಮದಲ್ಲಿ ಪ್ರತಿಪಕ್ಷ ನಾಯಕ ಆರ್. ಅಶೋಕ್ ಅವರು ಭಾಗವಹಿಸಿ ಎಲ್ಲಾ ನಾಯಕರನ್ನು ಬರಮಾಡಿಕೊಂಡರು. ಈ ಸಮಯದಲ್ಲಿ ಬೊಮ್ಮನಹಳ್ಳಿ ವಾರ್ಡ್ ಮಾಜಿ ಸದಸ್ಯರಾದ ಮಂಜುನಾಥ್ ರೆಡ್ಡಿ, ಸ್ಥಳೀಯ ಮುಖಂಡರಾದ ಶ್ರೀನಿವಾಸ್ ರೆಡ್ಡಿ ಮತ್ತಿತರ ಪ್ರಮುಖರು ಭಾಗಹಿಸಿದರು. ಈ ಮೂಲಕ ಬೊಮ್ಮನಹಳ್ಳಿ ಕ್ಷೇತ್ರದಲ್ಲಿ ಈಗ ಜಿಬಿಎ ಚುನಾವಣೆಗೂ ಮೊದಲೇ ಬಿಜೆಪಿ ಪಕ್ಷಕ್ಕೆ ಬಲ ಹೆಚ್ಚಾಗಿದ್ದರೆ, ಕಾಂಗ್ರೆಸ್ ನಾಯಕರು ಚಿಂತೆ ಮಾಡುವಂತೆ ಆಗಿದೆ.
ಗ್ರೇಟರ್ ಬೆಂಗಳೂರು ಚುನಾವಣೆಯ ಕಾವು ದಿನದಿಂದ ದಿನಕ್ಕೆ ಏರುತ್ತಿದ್ದು, ಗೆಲುವಿಗಾಗಿ ಒಂದು ಕಡೆ ಕಾಂಗ್ರೆಸ್ ಎಲ್ಲಾ ರೀತಿಯ ತಂತ್ರ & ಪ್ರತಿತಂತ್ರ ಹೆಣೆಯುತ್ತಿದೆ. ಹಾಗೇ ಬಿಜೆಪಿ ನಾಯಕರು ಕೂಡ ಈ ವಿಚಾರದಲ್ಲಿ ಅಲರ್ಟ್ ಆಗಿ ಚುನಾವಣೆಗೆ ಸಿದ್ಧರಾಗುತ್ತಿದ್ದಾರೆ. ಡಿಸೆಂಬರ್ ಅಂತ್ಯಕ್ಕೆ ಅಥವಾ 2026 ಜನವರಿ ಆರಂಭದಲ್ಲೇ ಗ್ರೇಟರ್ ಬೆಂಗಳೂರು ಚುನಾವಣೆ ನಡೆಯುವ ಸಾಧ್ಯತೆ ದಟ್ಟವಾಗಿದೆ. ಈಗಾಗಲೇ ಗ್ರೇಟರ್ ಬೆಂಗಳೂರು ರಚನೆ ಮಾಡಿ ಒಟ್ಟು 5 ವಿಭಾಗ ಮಾಡಲಾಗಿದೆ. ಈ ಮೂಲಕ ಬೆಳೆಯುತ್ತಿರುವ ಬೆಂಗಳೂರಿನ ಅಭಿವೃದ್ಧಿಗೆ ಶಕ್ತಿ ತುಂಬಲ ಯೋಜಿಸಲಾಗಿದೆ.
-
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Prakash Raj Mother passed Away: ನಟ ಪ್ರಕಾಶ್ ರಾಜ್ ತಾಯಿ ಸ್ವರ್ಣಲತಾ ನಿಧನ, ಚಿತ್ರರಂಗದ ಗಣ್ಯರಿಂದ ಸಂತಾಪ












Click it and Unblock the Notifications