ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬೆಡ್ ಬ್ಲಾಕಿಂಗ್ ದಂಧೆ: ಶಾಸಕ ಸತೀಶ್ ರೆಡ್ಡಿ ಆಪ್ತ ಬಾಬು ಸೆರೆ

|
Google Oneindia Kannada News

ಬೆಂಗಳೂರು, ಮೇ. 25: ಬೆಡ್ ಬ್ಲಾಕಿಂಗ್ ದಂಧೆಗೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರು ಬೊಮ್ಮನಹಳ್ಳಿಯ ಬಿಜೆಪಿ ಶಾಸಕ ಸತೀಶ್ ರೆಡ್ಡಿ ಆಪ್ತ ಬಾಬು ಎಂಬಾತನನ್ನು ಬಂಧಿಸಿದ್ದಾರೆ. ಸಂಸದ ತೇಜಸ್ವಿ ಸೂರ್ಯ ಪಕ್ಕದಲ್ಲಿಯೇ ನಿಂತು ಬೆಡ್ ಬ್ಲಾಕಿಂಗ್ ದಂಧೆ ಕುರಿತು ಸುದ್ದಿಗೋಷ್ಠಿ ನಡೆಸಿದ್ದ ಶಾಸಕ ಸತೀಶ್ ರೆಡ್ಡಿ ಇದೀಗ ತಲೆ ತಗ್ಗಿಸುವಂತಾಗಿದೆ.

ಸಂಸದ ತೇಜಸ್ವಿ ಸೂರ್ಯ ಸುದ್ದಿಗೋಷ್ಠಿ ನಡೆಸಿ ಬೆಡ್ ಬ್ಲಾಕಿಂಗ್ ದಂಧೆಯನ್ನು ಬಹಿರಂಗ ಪಡಿಸಿದ್ದರು. ಈ ಪ್ರಕರಣ ರಾಜಕೀಯ ಸ್ವರೂಪ ಪಡೆದುಕೊಂಡಿತ್ತು. ಅಂತಿಮವಾಗಿ ಈ ಪ್ರಕರಣವನ್ನು ಸಿಸಿಬಿ ಪೊಲೀಸರು ತನಿಖೆ ಕೈಗೆತ್ತಿಕೊಂಡಿದ್ದು, ಹಲವರನ್ನು ಬಂಧಿಸಿದ್ದರು. ದಕ್ಷಿಣ ವಿಭಾಗ ಹಾಗೂ ಬೊಮ್ಮನಹಳ್ಳಿ ವಲಯದ ಕೋವಿಡ್ ವಾರ್ ರೂಮ್‌ನಲ್ಲಿ ಸಿಬ್ಬಂದಿಗೆ ಬೆದರಿಸಿ ಬೆಡ್ ಹಂಚಿಕೆ ಮಾಡಿದ್ದ ಆರೋಪ ಬಾಬು ಮೇಲೆ ಕೇಳಿ ಬಂದಿತ್ತು. ಈ ಕುರಿತ ಕೆಲವು ಸಿಸಿಟಿವಿ ದೃಶ್ಯಗಳು ಹೊರಗೆ ಬಂದಿದ್ದವು. ವಿಚಾರಣೆಗೆ ಹಾಜರಾಗುವಂತೆ ಸಿಸಿಬಿ ಪೊಲೀಸರು ಬಾಬುಗೆ ನೋಟಿಸ್ ನೀಡಿದ್ದರು. ಆದರೂ ಬಂದಿರಲಿಲ್ಲ. ಇದೀಗ ಕೋವಿಡ್‌ನಿಂದ ಗುಣಮುಖವಾದ ಹಿನ್ನೆಲೆಯಲ್ಲಿ ಬಾಬುನನ್ನು ವಿಚಾರಣೆಗೆ ಒಳಪಡಿಸಿದ್ದಾರೆ.

ವಿಚಾರಣೆ ವೇಳೆ ಕೋವಿಡ್ ವಾರ್ ರೂಮ್ ಸಿಬ್ಬಂದಿಯನ್ನು ಹೆದರಿಸಿ ತನಗೆ ಬೇಕಾದವರಿಗೆ ಐಸಿಯು ಬೆಡ್ ಕೊಡಿಸಿದ್ದನ್ನು ತಪ್ಪೊಪ್ಪಿಕೊಂಡಿದ್ದಾನೆ. ಇನ್ನು ಸಿಸಿಟಿವಿ ದೃಶ್ಯಗಳನ್ನು ಸಾಕ್ಷಿಗಳನ್ನಾಗಿ ಪರಿಗಣಿಸಿರುವ ಸಿಸಿಬಿ ಪೊಲೀಸರು ಈ ಪ್ರಕರಣದಲ್ಲಿ ಬೊಮ್ಮನಹಳ್ಳಿ ಶಾಸಕ ಸತೀಶ್ ರೆಡ್ಡಿಯನ್ನು ಸಹ ವಿಚಾರಣೆಗೆ ಒಳಪಡಿಸುವ ಸಾಧ್ಯತೆಯಿದೆ. ಪೋಷಕರಿಗೆ ಕೋವಿಡ್ ಬೆಡ್ ಪಡೆಯಲು ಸರ್ಕಾರ ರೂಪಿಸಿದ್ದ ನಿಯಮಗಳನ್ನು ಗಾಳಿಗೆ ತೂರಿ ತನಗೆ ಬೇಕಾದವರಿಗೆ ಶಾಸಕರು ಬೆಡ್‌ ಕೊಡಿಸಿದ್ದರು. ಈ ಕೃತ್ಯಕ್ಕೆ ಬಾಬುನನ್ನು ಬಳಸಿಕೊಳ್ಳಲಾಗಿತ್ತು ಎನ್ನಲಾಗಿದೆ. ಹೀಗಾಗಿ ಇದು ಶಾಸಕರಿಗೆ ಮುಳುವಾಗುವ ಲಕ್ಷಣ ಗೋಚರಿಸುತ್ತಿದೆ. ಬೆಡ್ ಬ್ಲಾಕಿಂಗ್ ದಂಧೆಯಲ್ಲಿ ಅನ್ಯ ಕೋಮಿನ ಹುಡುಗರು ಶಾಮೀಲಾಗಿದ್ದಾರೆ ಎಂದು ಶಾಸಕ ಸತೀಶ್ ರೆಡ್ಡಿ ಸುದ್ದಿಗೋಷ್ಠಿಯಲ್ಲಿ ಆರೋಪಿಸಿದ್ದರು. ಇದೀಗ ಸ್ವತಃ ಶಾಸಕರ ಆಪ್ತನೇ ಬೆಡ್ ಬ್ಲಾಕಿಂಗ್ ನಲ್ಲಿ ಸಿಕ್ಕಿಬಿದ್ದಿರುವುದು ಭಾರೀ ಮುಜಗರಕ್ಕೀಡಾಗುವಂತಾಗಿದೆ.

Bommanahalli MLA Satish reddy PA arrested In Bed blocking scam

Recommended Video

Zameer Ahmed ಈಗ ಸಿದ್ದರಾಮಯ್ಯನವರ ಮುಜುಗರಕ್ಕೆ ಕಾರಣರಾದರು | Oneindia Kannada

ನಾಲ್ಕು ಜನರಿಗೆ ಜೀವಂತ ಬೆಂಕಿ ಇಟ್ಟಿದ್ದ ಆಪ್ತ: 2007ರಲ್ಲಿ ಕಾವೇರಿ ನೀರಿನ ವಿಚಾರವಾಗಿ ತಮಿಳುನಾಡು ಮತ್ತು ಕರ್ನಾಟಕದಲ್ಲಿ ದೊಡ್ಡ ಗಲಭೆ ಶುರುವಾಗಿತ್ತು. ಬೊಮ್ಮನಹಳ್ಳಿ ವೃತ್ತದಲ್ಲಿ ತಮಿಳುನಾಡಿಗೆ ಹೋಗುತ್ತಿದ್ದ ಬಸ್‌ಗೆ ಬೆಂಕಿ ಇಟ್ಟ ಪರಿಣಾಮ ತಮಿಳುನಾಡು ಮೂಲದ ನಾಲ್ವರು ಸುಟ್ಟು ಕರಕಲಾಗಿದ್ದರು. ಬಸ್‌ಗೆ ಬೆಂಕಿ ಇಟ್ಟು ಜೀವಂತ ಸುಟ್ಟ ಪ್ರಕರಣದಲ್ಲಿ ಸಹ ಶಾಸಕ ಸತೀಶ್ ರೆಡ್ಡಿ ಅವರ ಆಪ್ತನನ್ನು ಮಡಿವಾಳ ಪೊಲೀಸರು ಬಂಧಿಸಿ ಜೈಲಿಗೆ ಕಳುಹಿಸಿದ್ದರು. ಆನಂತರ ಪ್ರಕರಣದ ತನಿಖೆ ವೇಳೆ ದೋಷಾರೋಪ ಪಟ್ಟಿಯಲ್ಲಿ ಶಾಸಕ ಸತೀಶ್ ರೆಡ್ಡಿ ಆಪ್ತನ ಹೆಸರು ಕೈ ಬಿಡಲಾಗಿತ್ತು. ಪೊಲೀಸ್ ತನಿಖಾಧಿಕಾರಿ ಮೇಲೆ ಭ್ರಷ್ಟಾಚಾರ ಆರೋಪ ಕೇಳಿ ಬಂದಿತ್ತು. ಪ್ರಸಕ್ತ ಸಿಡಿ ಪ್ರಕರಣದ ತನಿಖಾ ತಂಡದ ಮುಖ್ಯಸ್ಥ ಸೌಮೇಂದು ಮುಖರ್ಜಿ ಅವರೇ ಸ್ವತಃ ಪೊಲೀಸ್ ಅಧಿಕಾರಿಯನ್ನು ಬೇರಡೆ ವರ್ಗಾವಣೆ ಮಾಡಿದ್ದು, ಅದೇ ವ್ಯಕ್ತಿಯೇ ಈ ಬಾಬು ಎಂಬುದು ಇದೀಗ ಸಾರ್ವಜನಿಕ ವಲಯದಲ್ಲಿ ಚರ್ಚೆ ನಡೆಸಯುತ್ತಿದೆ. ಸಿಸಿಬಿ ಪೊಲೀಸರು ಈ ಪ್ರಕರಣದ ಹಿನ್ನೆಲೆ ಕೆಣಕುತ್ತಿದ್ದಾರೆ ಎಂದು ಉನ್ನತ ಮೂಲಗಳಿಂದ ತಿಳಿದು ಬಂದಿದೆ.

English summary
Covid 19- Bed blocking scam: Bommanahalli MLA Satish Reddy personal assistant Babu was arrested by ccb police know more
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X