ಬೊಮ್ಮನಹಳ್ಳಿಯಲ್ಲಿ ನೂರಾರು ಮರಗಳ ಸ್ಥಳಾಂತರ : ಅನಂತಕುಮಾರ್
ಬೆಂಗಳೂರು, ಜನವರಿ 15: ಮೆಟ್ರೋ ಕಾಮಗಾರಿಗೆಂದು ಕತ್ತರಿಸಲಾಗುತ್ತಿದ್ದ ಮರಗಳನ್ನು ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರಕ್ಕೆ ಸ್ಥಳಾಂತರಿಸಿ ಪೋಷಿಸಲಾಗುವುದು ಎಂದು ಕೇಂದ್ರ ಸರ್ಕಾರದ ರಾಸಾಯನಿಕ, ರಸಗೊಬ್ಬರಗಳ ಮತ್ತು ಸಂಸದೀಯ ವ್ಯವಹಾರಗಳ ಸಚಿವ ಅನಂತಕುಮಾರ್ ತಿಳಿಸಿದ್ದಾರೆ.
ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದ ಬಿಟಿಎಂ ಲೇಔಟ್‍ನ 4 ನೇ ಸ್ಟೇಜ್‍ನಲ್ಲಿರುವ ದೇವರಚಿಕ್ಕನಹಳ್ಳಿಯ ಪ್ರಾದೇಶಿಕ ಸಾರಿಗೆ ಕಚೇರಿ ಎದುರು ಇರುವ ಕಟ್ಟಡದಲ್ಲಿ ನಗರದ ಅತಿ ದೊಡ್ಡ ಬೆಂಗಳೂರು ಒನ್ ಕೇಂದ್ರವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಹಸಿರು ಗಿಡ ಮರ ಬೆಳೆಸುವುದು ಪ್ರತಿಯೊಬ್ಬ ನಾಗರಿಕರ ಕರ್ತವ್ಯವಾಗಿದೆ. ಹಸಿರು ವಾತಾವರಣ ಕಡಿಮೆಯಾಗಿರುವ ನಿಟ್ಟಿನಲ್ಲಿ ಅದಮ್ಯ ಚೇತನ ಸಂಸ್ಥೆ ವತಿಯಿಂದ ನಗರದಲ್ಲಿ ಪ್ರತಿ ಭಾನುವಾರ ಹಸಿರು ದಿನವನ್ನಾಗಿ ಆಚರಿಸಲಾಗುತ್ತಿದೆ. ಭಾನುವಾರದಂದು 180 ಸಸಿಗಳನ್ನು ನೆಡಲಾಗಿದೆ. ಸಸಿಗಳನ್ನು ನೆಟ್ಟು ಅವುಗಳನ್ನು ಪೋಷಣೆ ಮಾಡಿ ಪರಿಸರಕ್ಕೆ ಮತ್ತು ಸಮಾಜಕ್ಕೆ ಕೊಡುಗೆ ನೀಡಬೇಕೆಂದು ಅವರು ಕರೆ ನೀಡಿದರು. ಈ ಉದ್ಘಾಟನಾ ಸಮಾರಂಭದಲ್ಲಿ ಕ್ಷೇತ್ರದ ಹಲವಾರು ಮುಖಂಡರು, ಸಾವಿರಾರು ನಾಗರಿಕರು ಪಾಲ್ಗೊಂಡಿದ್ದರು.

ಮೆಟ್ರೋಗಾಗಿ ಹಲವಾರು ಮರಗಳ ತೆರವು
ಮೆಟ್ರೋ ರೈಲು ಮಾರ್ಗದ ಕಾಮಗಾರಿಗಾಗಿ ಹಲವಾರು ಮರಗಳನ್ನು ತೆರವುಗೊಳಿಸಲಾಗುತ್ತಿದೆ. ಈ ಮೆಟ್ರೋದ ಮುಂದುವರೆದ ಕಾಮಗಾರಿಗಾಗಿ 108 ಮರಗಳನ್ನು ತೆರವುಗೊಳಿಸಲಾಗುತ್ತಿದೆ. ಆ ಮರಗಳನ್ನು ಕಡಿದು ಹಾಕದೇ ಬೇರು ಸಹಿತ ತೆಗೆದು ಅವುಗಳನ್ನು ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದ ವಿವಿಧ ಭಾಗಗಳಿಗೆ ಸ್ಥಳಾಂತರ ಮಾಡುವಂತೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದ ಅನಂತಕುಮಾರ್ ಅವರು, ಈಗಾಗಲೇ ಬಿಳೇಕಹಳ್ಳಿ ವಾರ್ಡಿನ ವಿವಿಧೆಡೆ 56 ಮರಗಳನ್ನು ನೆಡುವ ಕಾರ್ಯ ನಡೆಸಲಾಗುತ್ತಿದೆ ಎಂದು ತಿಳಿಸಿದರು.

ಕೈಗೆಟುಕುವ ದರದಲ್ಲಿ ಔಷಧಿಗಳು
ಸಾರ್ವಜನಿಕರ ಅನುಕೂಲ ಮತ್ತು ಕೈಗೆಟುಕುವ ದರದಲ್ಲಿ ಔಷಧಿಗಳು ದೊರೆಯುವಂತೆ ಮಾಡುವ ಉದ್ದೇಶದಿಂದ ಕೇಂದ್ರ ಸರ್ಕಾರ ಅಗತ್ಯವಿರುವೆಡೆಯೆಲ್ಲಾ ಜನೌಷಧಿ ಕೇಂದ್ರಗಳನ್ನು ಆರಂಭಿಸುತ್ತಿದೆ. ಕೇಂದ್ರದಲ್ಲಿ ಈ ಹಿಂದೆ ಇದ್ದ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕೆಲವೇ ಕೆಲವು ಜನೌಷಧಿ ಕೇಂದ್ರಗಳಿದ್ದವು. ಆದರೆ, ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ನೇತೃತ್ವದ ನಮ್ಮ ಸರ್ಕಾರ ಬಂದ ನಂತರ 3320 ಕ್ಕೂ ಹೆಚ್ಚು ಜನೌಷಧಿ ಕೇಂದ್ರಗಳನ್ನು ಸ್ಥಾಪಿಸಿದ್ದೇವೆ ಎಂದು ಇದೇ ಸಂದರ್ಭದಲ್ಲಿ ಅನಂತಕುಮಾರ್ ತಿಳಿಸಿದರು.

ಶಾಸಕ ಸತೀಶ್‍ರೆಡ್ಡಿ ಅವರು ಮಾತನಾಡಿ
ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದ ಶಾಸಕ ಸತೀಶ್‍ರೆಡ್ಡಿ ಅವರು ಮಾತನಾಡಿ, ಬೊಮ್ಮನಹಳ್ಳಿ ಕ್ಷೇತ್ರದ ಜನರ ಅನುಕೂಲಕ್ಕಾಗಿ ಇಡೀ ಬೆಂಗಳೂರಿನಲ್ಲಿಯೇ ಅತಿ ದೊಡ್ಡದಾದ ಬೆಂಗಳೂರು ಒನ್ ಕೇಂದ್ರವನ್ನು ಆರಂಭಿಸಲಾಗಿದೆ. ಇದರ ಉಪಯೋಗವನ್ನು ಪ್ರತಿಯೊಬ್ಬ ನಾಗರಿಕನೂ ಬಳಸಿಕೊಳ್ಳಬೇಕು. ಇದಲ್ಲದೇ, ಕ್ಷೇತ್ರದ ಎಲ್ಲಾ 9 ವಾರ್ಡ್‍ಗಳಲ್ಲಿಯೂ ಜನೌಷಧಿ ಕೇಂದ್ರಗಳನ್ನು ಆರಂಭಿಸಲು ಕ್ರಮ ತೆಗೆದುಕೊಳ್ಳಲಾಗುತ್ತಿದೆ ಎಂದು ತಿಳಿಸಿದರು.

ಸದಸ್ಯರಾದ ರಾಮಮೋಹನ್ ರಾಜು
ಬಿಬಿಎಂಪಿ ಸದಸ್ಯರಾದ ರಾಮಮೋಹನ್ ರಾಜು ಅವರು, ನಮ್ಮ ವಾರ್ಡ್ ಮತ್ತು ಕ್ಷೇತ್ರದಲ್ಲಿನ ಜನರ ಅನುಕೂಲಕ್ಕಾಗಿ ಒಂದೇ ಸೂರಿನಡಿ ಪ್ರತಿಯೊಂದು ಸೇವೆಗಳು ದೊರೆಯಬೇಕೆಂಬ ಉದ್ದೇಶದಿಂದ ಈ ಕೇಂದ್ರವನ್ನು ಸ್ಥಾಪಿಸಲಾಗಿದೆ. ಬೊಮ್ಮನಹಳ್ಳಿ ಕ್ಷೇತ್ರ ಹಲವು ವೈಶಿಷ್ಟ್ಯತೆಗಳನ್ನು ಹೊಂದಿರುವ ಕ್ಷೇತ್ರವಾಗಿದೆ. ಅದೇರೀತಿ ಬೊಮ್ಮನಹಳ್ಳಿ ವಾರ್ಡ್ 175 ಕೂಡ ವೈಶಿಷ್ಟ್ಯತೆಗಳಿಗೆ ಹೆಸರುವಾಸಿಯಾಗಿದೆ.
ಇದೀಗ ಈ ಖ್ಯಾತಿಗೆ ಈ ಅತಿ ದೊಡ್ಡ ಬೆಂಗಳೂರು ಒನ್ ಕೇಂದ್ರವೂ ಸೇರ್ಪಡೆಗೊಂಡಿದೆ ಎಂದು ಸಂತಸ ವ್ಯಕ್ತಪಡಿಸಿದರು.
-
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Prakash Raj Mother passed Away: ನಟ ಪ್ರಕಾಶ್ ರಾಜ್ ತಾಯಿ ಸ್ವರ್ಣಲತಾ ನಿಧನ, ಚಿತ್ರರಂಗದ ಗಣ್ಯರಿಂದ ಸಂತಾಪ












Click it and Unblock the Notifications