ಬೆಳ್ಳಂದೂರು ಕೆರೆ ಕೇಸ್: ಬಾಗಿಲು ಮುಚ್ಚಿದ ಬಾಷ್ ಕಂಪನಿ
ಕಲುಷಿತ ಬೆಳ್ಳಂದೂರು ಕೆರೆ ಜಲಾನಯನ ಪ್ರದೇಶದ ಎಲ್ಲಾ 488 ಕೈಗಾರಿಕೆಗಳನ್ನು ಸ್ಥಗಿತಗೊಳಿಸುವಂತೆ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ (ಕೆಎಸ್ ಪಿಸಿಬಿ) ಮಂಡಳಿ ಆದೇಶ ಹೊರಡಿಸಿದ ಬೆನ್ನಲ್ಲೆ ಬಾಷ್ ತನ್ನ ಘಟಕ ಮುಚ್ಚಿದೆ
ಬೆಂಗಳೂರು, ಮೇ 07: ಬೆಳ್ಳಂದೂರು ಜಲಾನಯನ ಪ್ರದೇಶದ ಎಲ್ಲಾ 488 ಕೈಗಾರಿಕೆಗಳನ್ನು ಸ್ಥಗಿತಗೊಳಿಸುವಂತೆ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ (ಕೆಎಸ್ ಪಿಸಿಬಿ) ಮಂಡಳಿ ಆದೇಶ ಹೊರಡಿಸಿದ ಬೆನ್ನಲ್ಲೇ ಆಟೋ ಮೊಬೈಲ್ ಉತ್ಪನ್ನ ತಯಾರಕಾ ಸಂಸ್ಥೆ ಬಾಷ್ ತನ್ನ ಘಟಕವನ್ನು ಮುಚ್ಚಿದೆ.
ಜರ್ಮನ್ ಮೂಲದ ಬಾಷ್ ನ ಭಾರತೀಯ ಘಟಕ ಈ ಬಗ್ಗೆ ಬಿಎಸ್ಇ ಗೆ ಈಗಾಗಲೇ ಮಾಹಿತಿ ನೀಡಿದೆ. ಆಡುಗೋಡಿ, ನಾಗಾನಾಥಪುರಗಳಲ್ಲಿ ಕೂಡಾ ಬಾಷ್ ತನ್ನ ಘಟಕ ಹೊಂದಿದೆ.[ಬೆಳ್ಳಂದೂರು ಕೆರೆ ಸುತ್ತಲಿನ ಕೈಗಾರಿಕೆ ಮುಚ್ಚಿ: ಎನ್ ಜಿಟಿ]

ಕೆರೆಯಲ್ಲಿ ಬೆಂಕಿ ಕಾಣಿಸಿಕೊಳ್ಳಲು ಕಾರಣವಾಗಿರುವ ರಾಸಾಯನಿಕ ಪದಾರ್ಥಗಳನ್ನು ಕೈಗಾರಿಕೆಗಳು ಹೊರ ಹಾಕುತ್ತಿರುವ ಕುರಿತು ಜಂಟಿ ಪರಿಶೀಲನಾ ಸಮಿತಿ ಪರೀಕ್ಷಿಸುವವರೆಗೂ ಜಲಾನಯನ ಪ್ರದೇಶದ ಯಾವುದೇ ಕೈಗಾರಿಕೆ ಕಾರ್ಯನಿರ್ವಹಿಸಲು ಅವಕಾಶ ನೀಡಬಾರದು ಎಂದು ಎನ್ ಜಿಟಿ ಆದೇಶದ ಮೇರೆಗೆ ಕೆಎಸ್ ಪಿಸಿಬಿ ಮೇಲ್ಕಂಡ ನಿರ್ಣಯ ಕೈಗೊಂಡಿದೆ.
ಕರ್ನಾಟಕ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದ ರಾಷ್ಟ್ರೀಯ ಹಸಿರು ಪ್ರಾಧಿಕಾರ (ಎನ್ ಜಿಟಿ) ಬೆಳ್ಳಂದೂರು ಕೆರೆ ಸುತ್ತಮುತ್ತಲಿನ ಕೈಗಾರಿಕೆಗಳನ್ನು ತಕ್ಷಣವೇ ಮುಚ್ಚಬೇಕೆಂದು ಮಧ್ಯಂತರ ಆದೇಶ ನೀಡಿದ್ದನ್ನು ಇಲ್ಲಿ ಸ್ಮರಿಸಬಹುದು.
ಇನ್ಫೊಸಿಸ್, ವಿಪ್ರೊ, ಆದಿತ್ಯ ಬಿರ್ಲಾ ನೊವಾ ಲಿಮಿಟೆಡ್, ಹನಿವೆಲ್ ಟೆಕ್ನಾಲಜಿ ಸೊಲ್ಯೂಷನ್ಸ್, ಬಾಷ್, ಆಕ್ಸೆಂಚರ್, ಒರಾಕಲ್ ಸಂಸ್ಥೆಗಳು ಈ ಪಟ್ಟಿಯಲ್ಲಿರುವ ಪ್ರಮುಖ ಖಾಸಗಿ ಕಂಪೆನಿಗಳು ಇವೆ.
ನ್ಯಾಷನಲ್ ಏರೋಸ್ಪೇಸ್ ಲ್ಯಾಬೊರೇಟರಿ, ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್‌ನ (ಎಚ್‌ಎಎಲ್) ಏಳು ಘಟಕಗಳು, ಭಾರತೀಯ ಬಾಹ್ಯಾಕಾಶ ಸಂಸ್ಥೆ (ಇಸ್ರೊ), ಕರ್ನಾಟಕ ಸಾವಯವ ಗೊಬ್ಬರ ಅಭಿವೃದ್ಧಿ ನಿಗಮದ (ಕೆಸಿಡಿಸಿ) ಘಟಕ ಸೇರಿದಂತೆ ಇತರೆ ಸರ್ಕಾರಿ ಸ್ವಾಮ್ಯದ ಕೈಗಾರಿಕೆಗಳಿಗೆ ಭೀತಿ ಎದುರಾಗಿದೆ.
-
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
SWR: ಪ್ರಶಾಂತಿ ಎಕ್ಸ್ಪ್ರೆಸ್ ರೈಲಿಗೆ ಹೆಚ್ಚುವರಿ ಬೋಗಿ: ರೈಲುಗಳ ನಿಲುಗಡೆಯಲ್ಲಿ ಬದಲಾವಣೆ -
SWR: ಏಪ್ರಿಲ್ 2-5 ಬೆಂಗಳೂರು, ಹುಬ್ಬಳ್ಳಿಯಿಂದ ವಿಶೇಷ ಎಕ್ಸ್ಪ್ರೆಸ್ ರೈಲು ಕಾರ್ಯಾಚರಣೆ, ವೇಳಾಪಟ್ಟಿ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Karnataka Rains: ಬೆಂಗಳೂರು ಸೇರಿ ರಾಜ್ಯದ ಹಲವು ಜಿಲ್ಲೆಗಳಿಗೆ ಮುಂದಿನ ಮೂರು ಗಂಟೆಗಳಲ್ಲಿ ಭಾರೀ ಮಳೆ ಮುನ್ಸೂಚನೆ -
Hindi Language: ಹಿಂದಿ ಭಾಷೆ ರದ್ದು, ಎಸ್ಎಸ್ಎಲ್ಸಿ ಮಕ್ಕಳ ಬದುಕಿಗೆ ಕಲ್ಲು:ಆರ್ ಅಶೋಕ್ -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
ಪಾರದರ್ಶಕ ನೇಮಕಾತಿಗಾಗಿ ಪ್ರತಿಷ್ಠಿತ 'ಸ್ಕಾಚ್ ರಾಷ್ಟ್ರೀಯ ಪ್ರಶಸ್ತಿ' ಮುಡಿಗೇರಿಸಿಕೊಂಡ KSRTC -
ಕನ್ನಡತಿ ಶ್ರೇಯಾಂಕಾ ಪಾಟೀಲ್, ಮಂಧಾನ ಜೊತೆ ಆರ್ಸಿಬಿ ಪಂದ್ಯ ವೀಕ್ಷಣೆ: ಕ್ರೀಡಾ ಸ್ಪೂರ್ತಿ ಮೆರೆದ ಜೆಮಿಮಾ ರೊಡ್ರಿಗಸ್ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
ಕನ್ನಡತಿ ಶ್ರೇಯಾಂಕಾ ಪಾಟೀಲ್, ಮಂಧಾನ ಜೊತೆ ಆರ್ಸಿಬಿ ಪಂದ್ಯ ವೀಕ್ಷಣೆ: ಕ್ರೀಡಾ ಸ್ಪೂರ್ತಿ ಮೆರೆದ ಜೆಮಿಮಾ ರೊಡ್ರಿಗಸ್












Click it and Unblock the Notifications