ಸುನಿಲ್ ವಲ್ಯಾಪುರೆಗೆ ಸಚಿವ ಸ್ಥಾನಕ್ಕೆ ಆಗ್ರಹಿಸಿ ಪ್ರತಿಭಟನೆ

ಬೆಂಗಳೂರು, ಆಗಸ್ಟ್ 1: ''ಚಿಂಚೋಳಿ ಉಪಚುನಾವಣೆಯ ಸಂದರ್ಭದಲ್ಲಿ ನಿಕಟಪೂರ್ವ ಮುಖ್ಯಮಂತ್ರಿಗಳಾದ ಬಿ.ಎಸ್‌ ಯಡಿಯೂರಪ್ಪನವರು ನುಡಿದಂತೆ ವಿಧಾನಪರಿಷತ್‌ ಸದಸ್ಯರಾದ ಸುನೀಲ್‌ ವಲ್ಯಾಪುರೆ ಅವರಿಗೆ ದಲಿತ ಕೋಟಾದಡಿಯಲ್ಲಿ ಸಚಿವ ಸ್ಥಾನ ಕೊಡಿಸಬೇಕು, ಕೊಟ್ಟ ಮಾತಿಗೆ ಬದ್ಧರಾಗಿರಲಿ, ಬೊಮ್ಮಾಯಿ ಸಂಪುಟಕ್ಕೆ ವಲ್ಯಾಪುರೆ ಸೇರಲಿ,'' ಎಂದು ರಾಜ್ಯ ಬೋವಿ ಸಮಾಜ ಸಂಘಟನೆ ಕಾರ್ಯಕರ್ತರು ಇಂದು ಪ್ರತಿಭಟನೆ ನಡೆಸಿದ್ದಾರೆ.

ಮಾಜಿ ಸಿಎಂ ಬಿಎಸ್‌ವೈ ನಿವಾಸ ಕಾವೇರಿ ಬಳಿ ರಾಜ್ಯ ಬೋವಿ ಸಮಾಜ ಸಂಘಟನೆ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು. ಕಲಬುರಗಿ, ಗದಗ ಸೇರಿದಂತೆ ವಿವಿಧೆಡೆಯಿಂದ ಬಂದಿರುವ ವಲ್ಯಾಪುರೆ ಅಭಿಮಾನಿಗಳು ತಮ್ಮ ಮುಖಂಡರಿಗೆ ಬೊಮ್ಮಾಯಿ ಸರ್ಕಾರದಲ್ಲಿ ಸಚಿವ ಸ್ಥಾನ ನೀಡಬೇಕು ಎಂದು ಆಗ್ರಹಿಸಿದರು.

ಸುನಿಲ್ ವಲ್ಯಾಪುರೆಗೆ ಸಚಿವ ಸ್ಥಾನ ನೀಡುವಂತೆ ಎಂದು ಘೋಷಣೆ ಕೂಗಿದ ಅಭಿಮಾನಿಗಳು, ಪ್ರತಿಭಟನಾ ಮೆರವಣಿಗೆ ನಡೆಸಿ, ಯಡಿಯೂರಪ್ಪ ಅವರಿಗೆ ಮನವಿ ಸಲ್ಲಿಸಲು ಆಗಮಿಸಿರುವುದಾಗಿ ಹೇಳಿದರು.

Bovi Community demand Minister post to Sunil Vallyapure under Dalit Quota

ಇದಕ್ಕೂ ಮುನ್ನ ಕರ್ನಾಟಕ ಭೋವಿ(ವಡ್ಡರ) ಮಹಾಸಭಾ ಕಾರ್ಯಾಧ್ಯಕ್ಷ ರಾಘವೇಂದ್ರ ಧಾರವಾಡ ಮಾತನಾಡಿ, ''ಕರ್ನಾಟಕ ರಾಜ್ಯದಲ್ಲಿ ಸುಮಾರು 60 ಲಕ್ಷಕ್ಕಿಂತ ಹೆಚ್ಚು ಜನಸಂಖ್ಯೆ ಹೊಂದಿರುವ ಭೋವಿ (ವಡ್ಡರ) ಸಮುದಾಯವು ಬಿ.ಜೆ.ಪಿ. ಪಕ್ಷಕ್ಕೆ ಮೊದಲಿನಿಂದಲೂ ಬೆಂಬಲ ನೀಡುತ್ತಲೇ ಬಂದಿದೆ. ಅದರಲ್ಲೂ ಉತ್ತರ ಕರ್ನಾಟಕ ಮತ್ತು ಕಲ್ಯಾಣ ಕರ್ನಾಟಕದಲ್ಲಿ ಭೋವಿ (ವಡ್ಡರ) ಸಮುದಾಯ ಬಿ.ಜೆ.ಪಿ. ಪಕ್ಷಕ್ಕೆ ನಿರಂತರವಾಗಿ ಬೆಂಬಲ ಸೂಚಿಸಿದೆ. ಈ ಭಾಗದಲ್ಲಿ ವಿಧಾನಸಭೆ ಮತ್ತು ಲೋಕಸಭೆ ಚುನಾವಣೆಯ ಸಂಧರ್ಭದಲ್ಲಿ ಪಕ್ಷದಿಂದ ಶಾಸಕರು ಮತ್ತು ಸಂಸದರಾಗಿ ಆಯ್ಕೆಯಾಗಲು ನಮ್ಮ ಸಮುದಾಯದ ಮಾಜಿ ಸಚಿವರು ಹಾಗೂ ಹಾಲಿ ವಿಧಾನ ಪರಿಷತ್ ಸದಸ್ಯರಾದ ಸುನೀಲ ವಲ್ಯಾಪುರೆ ಅವರ ಕೊಡುಗೆ ಅಪಾರವಾಗಿದೆ,'' ಎಂದು ಹೇಳಿದ್ದನ್ನು ಇಲ್ಲಿ ಸ್ಮರಿಸಬಹುದು.

Bovi Community demand Minister post to Sunil Vallyapure under Dalit Quota

ಚಿಂಚೋಳಿ ಉಪ ಚುನಾವಣೆ ಪ್ರಚಾರಕ್ಕೆ ಬಂದ ಸಂದರ್ಭದಲ್ಲಿ ಅಂದಿನ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ಸಾರ್ವಜನಿಕ ಸಮಾರಂಭದಲ್ಲಿ ಸುನೀಲ ವಲ್ಯಾಪುರವರನ್ನು ಎಂ.ಎಲ್.ಸಿ. ಮಾಡಿ ಮಂತ್ರಿಯನ್ನಾಗಿ ಮಾಡಿ ನನ್ನ ಪಕ್ಕದಲ್ಲಿಯೇ ಸ್ಥಾನ ನೀಡುತ್ತೇನೆ ಎಂದು ಸಭೆಯಲ್ಲಿ ಘೋಷಿಸಿದ್ದರು. ಅಂದು ಪಕ್ಷಕ್ಕಾಗಿ ತ್ಯಾಗ ಮಾಡಿದ ಸುನೀಲ್‌ ವಲ್ಯಾಪುರೆ ಅವರಿಗೆ ತಾವು ಕೊಟ್ಟ ಮಾತನ್ನು ನಿಕಟಪೂರ್ವ ಮುಖ್ಯಮಂತ್ರಿಗಳಾದ ಯಡಿಯೂರಪ್ಪನವರು ಉಳಿಸಿಕೊಳ್ಳುತ್ತಾರೆ ಎನ್ನುವ ನಂಬಿಕೆ ನಮ್ಮದಾಗಿದೆ ಎಂದು ಹೇಳಿದರು.

Bovi Community demand Minister post to Sunil Vallyapure under Dalit Quota

2 ಬಾರಿ ಶಾಸಕರಾಗಿ 1 ಬಾರಿ ಸಚಿವರಾಗಿ ಸುನೀಲ್‌ ವಲ್ಯಾಪುರೆ ಉತ್ತಮ ಕೆಲಸ ಮಾಡಿದ್ದು ಉತ್ತಮ ಆಡಳಿತದ ಅನುಭವ ಹೊಂದಿದ್ದವರಾಗಿದ್ದಾರೆ. ಉತ್ತರ ಕರ್ನಾಟಕ ಮತ್ತು ಕಲ್ಯಾಣ ಕರ್ನಾಟಕದಲ್ಲಿ ಏಕೈಕ ಭೋವಿ (ವಡ್ಡರ) ಸಮುದಾಯದ ಶಾಸಕರಾಗಿರುವ ಸುನೀಲ ವಲ್ಯಾಪುರೆ(55 ವರ್ಷ) ರವರಿಗೆ ದಲಿತ ಕೋಟಾದಡಿಯಲ್ಲಿ ಸಚಿವ ಸ್ಥಾನ ನೀಡಬೇಕು. ಈ ಮೂಲಕ ಹಿಂದುಳಿದ ಕಲ್ಯಾಣ ಕರ್ನಾಟಕ ಮತ್ತು ಉತ್ತರ ಕರ್ನಾಟಕದಲ್ಲಿ ಪಕ್ಷ ಸಂಘಟನೆಗಾಗಿ ಅವಕಾಶ ಕಲ್ಪಿಸಬೇಕು ಎಂದು ಮುಖ್ಯಮಂತ್ರಿಗಳಾದ ಬಸವರಾಜ್‌ ಬೊಮ್ಮಾಯಿ, ನಿಟಕಪೂರ್ವ ಮುಖ್ಯಮಂತ್ರಿಗಳಾದ ಬಿ ಎಸ್‌ ಯಡಿಯೂರಪ್ಪನವರು ಹಾಗೂ ಬಿಜೆಪಿ ಮುಖಂಡರುಗಳಿಗೆ ಮನವಿಯನ್ನು ಸಲ್ಲಿಸಲಿದ್ದೇವೆ ಎಂದು ಕಲಬುರ್ಗಿ ಜಿಲ್ಲಾ ಭೋವಿ (ವಡ್ಡರ) ಸಮಾಜದ ತಿಪ್ಪಣ್ಣ ಒಡಿರಾಜ ಅವರು ಆಗ್ರಹಿಸಿದ್ದಾರೆ.

Bovi Community demand Minister post to Sunil Vallyapure under Dalit Quota

Recommended Video

      ನೀವು ಏನ್ ಮಾಡಿದ್ರೂ ಅಷ್ಟೆ ನಾವಂತೂ ಮೇಕೆದಾಟು ಮಾಡೇ ಮಾಡ್ತೀವಿ | Oneindia Kannada

      2003ರಲ್ಲಿ ಪರಿಶಿಷ್ಟ ಜಾತಿ ಮೋರ್ಚಾ ರಾಜ್ಯ ಘಟಕದ ಕಾರ್ಯದರ್ಶಿಯಾಗಿದ್ದ ಸುನಿಲ್ ವಲ್ಯಾಪುರೆ ಅವರು 2004ರಲ್ಲಿ ಷಹಾಬಾದ್ ಕ್ಷೇತ್ರದಿಂದ ವಿಧಾನಸಭೆಗೆ ಆಯ್ಕೆಯಾದರು. 2008ರಲ್ಲಿ ಚಿಂಚೋಳಿ ಕ್ಷೇತ್ರದಿಂದ ಸ್ಪರ್ಧಿಸಿ ಮತ್ತೊಮ್ಮೆ ಗೆಲುವು ಸಾಧಿಸಿ ಶಾಸಕರಾದರು. 2012ರಲ್ಲಿ ಮೊದಲ ಬಾರಿಗೆ ಮೂಲ ಸೌಕರ್ಯ ಅಭಿವೃದ್ಧಿ ಸಚಿವರಾಗಿ ಕಾರ್ಯನಿರ್ವಹಿಸಿದರು. 2013 ಹಾಗೂ 2018ರಲ್ಲಿ ಚಿಂಚೋಳಿ ಕ್ಷೇತ್ರದಿಂದ ವಿಧಾನಸಭೆಗೆ ಸ್ಪರ್ಧಿಸಿ ಸೋಲು ಕಂಡರು. 2020ರಿಂದ ವಿಧಾನಪರಿಷತ್ ಸದಸ್ಯರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+