• search
  • Live TV
ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ರಾಜ್‌ಕುಮಾರ್‌ ಪಾರ್ಕ್‌ನಲ್ಲಿ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದು ಬಾಲಕ ಸಾವು

|

ಬೆಂಗಳೂರು, ಫೆಬ್ರವರಿ 25: ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದು ಬಾಲಕ ಮೃತಪಟ್ಟಿರುವ ಘಟನೆ ಬೆಂಗಳೂರಿನ ರಾಜ್‌ಕುಮಾರ್‌ ಪಾರ್ಕ್‌ನಲ್ಲಿ ಸೋಮವಾರ ನಡೆದಿದೆ.

ಉದಯ್ (7) ಮೃತ ಬಾಲಕ, ನಗರದ ಕುಳ್ಳಪ್ಪ ಸರ್ಕಲ್ ಬಳಿ ಇರುವ ರಾಜ್‌ಕುಮಾರ್ ಪಾರ್ಕ್‌ನಲ್ಲಿ ಈ ದುರ್ಘಟನೆ ನಡೆದಿದೆ. ಪಾರ್ಕ್‌ ಸರಿಯಾಗಿ ನಿರ್ವಹಣೆ ಮಾಡದಿರುವುದೇ ಈ ಘಟನೆಗೆ ಕಾರಣ ಎನ್ನಲಾಗಿದೆ.

ಬಾಲಕ ಪಾರ್ಕ್‌ಗೆ ಆಟವಾಡಲು ಬಂದಿತ್ತು, ಆಡುತ್ತಾ ಆಡುತ್ತಾ ವಿದ್ಯುತ್ ತಂತಿಯನ್ನು ತುಳಿದು ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಪೋಷಕರ ಆಕ್ರಂದನ ಮುಗಿಲುಮುಟ್ಟಿದೆ. ಪಾರ್ಕ್ ನ್ನು ಸರಿಯಾಗಿ ನಿರ್ವಹಣೆ ಮಾಡದ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಲಾಗುತ್ತಿದೆ.

ಸಾರ್ವಜನಿಕರು ನಿತ್ಯ ಓಡಾಡುವ ಪ್ರದೇಶದಲ್ಲಿ ಇಂತಹ ಬೇಜವಾಬ್ದಾರಿ ತೋರಿಸಿದರೆ ಇನ್ನೂ ಎಷ್ಟೋ ಮಂದಿ ಪ್ರಾಣ ಕಳೆದುಕೊಳ್ಳಬೇಕಾದೀತು ಎನ್ನುವ ಆತಂಕದಲ್ಲಿ ಜನರಿದ್ದಾರೆ.

English summary
A 7 year old boy Uday died after accidentally touched high tension wire in a Rajkumar park at Bengaluru on Monday.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X