ಬೆಂಗಳೂರು: ಹೋಮ್ ವರ್ಕ್ ಮಾಡಿಲ್ಲವೆಂದು ಬಾಲಕನಿಗೆ ರಾಡ್ನಿಂದ ಮನಸೋಇಚ್ಛೆ ಹೊಡೆದ ಶಿಕ್ಷಕಿ
ಬೆಂಗಳೂರು, ಡಿಸೆಂಬರ್ 08: ಬೆಂಗಳೂರಿನ ಖಾಸಗಿ ಶಾಲೆಯಲ್ಲಿ ನಡೆದ ಅಮಾನವೀಯ ಘಟನೆ ಬೆಳಕಿಗೆ ಬಂದಿದೆ. ತಾನು ಕೊಟ್ಟ ಹೋಮ್‌ವರ್ಕ್ ಮಾಡಿಲ್ಲ ಎಂದು ಶಿಕ್ಷಕಿಯೊಬ್ಬರು ವಿದ್ಯಾರ್ಥಿ ಮೇಲೆ ಮನಬಂದಂತೆ ಹಲ್ಲೆ ನಡೆಸಿರುವ ಆರೋಪ ಕೇಳಿಬಂದಿದೆ. ಮೂರು ದಿನಗಳ ಹಿಂದೆ ಘಟನೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ.
ಹುಳಿಮಾವು ಬಿಜಿ ರಸ್ತೆಯಲ್ಲಿರುವ ಖಾಸಗಿ ಶಾಲೆಯ ಶಿಕ್ಷಕಿ ಏಳನೇ ತರಗತಿ ವಿದ್ಯಾರ್ಥಿಗಳಿಗೆ ಅಸೈನ್‌ಮೆಂಟ್ ನೀಡಿದ್ದಾರೆ. ಮಾರನೇ ದಿನ ಶಾಲೆಗೆ ಬಂದ ಶಿಕ್ಷಕಿ ಕೊಟ್ಟ ಅಸೈನ್‌ಮೆಂಟ್ ಪರೀಕ್ಷಿಸಿದ್ದಾರೆ. ಈ ವೇಳೆ ವಿದ್ಯಾರ್ಥಿಯೊಬ್ಬ ಹೋಮ್‌ವರ್ಕ್ ಮಾಡದೇ ತರಗತಿಗೆ ಹಾಜರಾಗಿದ್ದಾನೆ. ಇದರಿಂದ ಕೋಪಗೊಂಡ ಶಿಕ್ಷಕಿ ರಕ್ತಬರುವಂತೆ ವಿದ್ಯಾರ್ಥಿಗೆ ರಾಡ್‌ನಿಂಡ ಹೊಡೆದಿದ್ದಾರೆ ಎನ್ನುವ ಆರೋಪ ಕೇಳಿಬಂದಿದೆ.

ರಾಡ್‌ನಲ್ಲಿ ಹೊಡೆದ ಪರಿಣಾಮ ಕೈಗೆ ಗಂಭೀರ ಗಾಯವಾಗಿದ್ದು, ಸಮವಸ್ತ್ರದಲ್ಲೇ ಬಾಲಕನನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿದೆ. ಸದ್ಯ ಹುಳಿಮಾವು ಸಾಯಿರಾಮ್ ಆಸ್ಪತ್ರೆಯಲ್ಲಿ ಬಾಲಕನಿಗೆ ಚಿಕಿತ್ಸೆ ನೀಡಲಾಗಿದ್ದು, ವಿದ್ಯಾರ್ಥಿ ಕೈಗೆ ಆರು ಹೊಲಿಗೆ ಹಾಕಲಾಗಿದೆ. ಶಿಕ್ಷಕಿ ಕೊಟ್ಟ ಅಸೈನ್ಮೆಂಟ್ ಮಾಡಿಲ್ಲ ಎಂಬ ಕಾರಣಕ್ಕೆ ಹಲ್ಲೆ ಮಾಡಿದ್ದಾರೆ ಎಂದು ವಿದ್ಯಾರ್ಥಿ ಆರೋಪಿಸಿದ್ದು, ಶಾಲಾ ಆಡಳಿತ ಮಂಡಳಿಯಿಂದ ಪ್ರಕರಣ ಮುಚ್ಚಿಹಾಕಲು ಯತ್ನಿಸಿದೆ ಎನ್ನುವ ಆರೋಪ ಕೂಡ ಕೇಳಿಬಂದಿದೆ.
ಜಿಲ್ಲಾಧಿಕಾರಿ ಹೆಸರನ್ನೇ ಬಳಸಿ ಹಣಕ್ಕೆ ಬೇಡಿಕೆ ಇಟ್ಟ ಕಿಲಾಡಿಗಳು
ಬೆಂಗಳೂರು: ಬೆಂಗಳೂರು ನಗರದ ಜಿಲ್ಲಾಧಿಕಾರಿ ಹೆಸರನ್ನೇ ಬಳಸಿ ಕಿಲಾಡಿಗಳು ಹಣಕ್ಕೆ ಬೇಡಿಕೆ ಇಟ್ಟ ಪ್ರಕರಣ ಬೆಳಕಿಗೆ ಬಂದಿದೆ. ಬೆಂಗಳೂರು ಜಿಲ್ಲಾಧಿಕಾರಿ ಕೆ.ಎ.ದಯಾನಂದ್ ಹೆಸರಲ್ಲಿ ಆರೋಪಿಗಳು ಹಣಕ್ಕೆ ಬೇಡಿಕೆ ಹಣಕ್ಕೆ ಬೇಡಿಕೆ ಇಟ್ಟಿದ್ದಾರೆ.
ಜಿಲ್ಲಾಧಿಕಾರಿ ಕೆ.ಎ ದಯಾನಂದ್ ಅವರ ಫೋಟೋ ಬಳಸಿ ವಾಟ್ಸಾಪ್ ನಂಬರ್ ಕ್ರಿಯೆಟ್ ಮಾಡಿರುವ ಅಪರಿಚಿತ ವ್ಯಕ್ತಿಗಳು ಬಳಿಕ ಆ ನಂಬರ್‌ನಿಂದ ಜಿಲ್ಲಾಡಳಿತದ ಕೆಲವು ಅಧಿಕಾರಿಗಳಿಗೆ ಹಣ ನೀಡುವಂತೆ ಮೆಸೇಜ್ ಕಳುಹಿಸಿದ್ದಾರೆ. ತುರ್ತು ಕಾರ್ಯಕ್ಕೆ ಹಣ ಬೇಕಿದೆ ತಕ್ಷಣ ಕಳುಹಿಸಿ ಎಂದು ಅಧಿಕಾರಿಗಳಿಗೆ ಮೆಸೇಜ್ ಕಳುಹಿಸಲಾಗಿದೆ. ಇದರಿಂದ ಅನುಮಾನಗೊಂಡ ಕೆಲವು ಅಧಿಕಾರಿಗಳು ಕೂಡಲೇ ಕೆ.ಎ ದಯಾನಂದ್ ಅವರಿಗೆ ಮಾಹಿತಿ ನೀಡಿದ್ದಾರೆ.
ತಮ್ಮ ಹೆಸರಿನಲ್ಲಿ ನಕಲಿ ವಾಟ್ಸಾಪ್ ನಂಬರ್‌ನಲ್ಲಿ ಹಣ ಬೇಡಿಕೆ ಇಡುತ್ತಿದ್ದ ಕಿಡಿಗೇಡಿಗಳ ಬಗ್ಗೆ ಬೆಂಗಳೂರು ಸೆಂಟ್ರಲ್ ಸೈಬರ್ ಕ್ರೈಂ ಠಾಣೆಯಲ್ಲಿ ಜಿಲ್ಲಾಧಿಕಾರಿ ಡಿಸಿ ಕೆ.ಎ ದಯಾನಂದ್ ಪ್ರಕರಣ ದಾಖಲಿಸಿದ್ದಾರೆ. ಕಿಡಿಗೇಡಿಗಳು ಬಳಸುತ್ತಿದ್ದ ನಂಬರ್ ಆಧಾರದ ಮೇಲೆ ದೂರು ದಾಖಲಾಗಿದೆ. ಸದ್ಯ ಎಫ್‌ಐಆರ್ ದಾಖಲಿಸಿರುವ ಸೆಂಟ್ರಲ್ ಸೈಬರ್ ಕ್ರೈಂ ಠಾಣೆ ಪೊಲೀಸರು ಆರೋಪಿಗಳಿಗಾಗಿ ಹುಡುಕಾಟ ಆರಂಭಿಸಿದ್ದಾರೆ.












Click it and Unblock the Notifications