ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬೆಂಗಳೂರು : 6 ಅಭ್ಯರ್ಥಿಗಳಿಗೆ ಬೆಂಬಲ ಘೋಷಿಸಿದ ಬಿಪ್ಯಾಕ್

|
Google Oneindia Kannada News

ಬೆಂಗಳೂರು, ಏಪ್ರಿಲ್ 15 : ಬೆಂಗಳೂರಿನಲ್ಲಿ ಬಿಬಿಎಂಪಿ ವ್ಯಾಪ್ತಿಗೆ ಒಳಪಡುವ ಮೂರು ಲೋಕಸಭಾ ಕ್ಷೇತ್ರಗಳಲ್ಲಿ 78 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಬಿಪ್ಯಾಕ್ ಈ ಪೈಕಿ 6 ಅಭ್ಯರ್ಥಿಗಳನ್ನು ಬೆಂಬಲಿಸಿದೆ. ಏಪ್ರಿಲ್ 18ರಂದು ಚುನಾವಣೆ ನಡೆಯಲಿದೆ.

ಬೆಂಗಳೂರು ರಾಜಕೀಯ ಕ್ರೀಯಾ ಸಮಿತಿ (ಬಿಪ್ಯಾಕ್) ಈ ಕುರಿತು ಪ್ರಕಟಣೆ ಬಿಡುಗಡೆ ಮಾಡಿದೆ. ರಾಜಕೀಯ ಅನುಭವ, ಸಂಸದೀಯ ದಕ್ಷತೆ, ಸಾಮಾಜಿಕ ವಿಷಯಗಳಿಗೆ ಸ್ಪಂದನೆ, ಉತ್ತಮ ಆಡಳಿತಕ್ಕೆ ಬದ್ಧತೆ ಮುಂತಾದ ವಿಚಾರಗಳನ್ನು ಮುಂದಿಟ್ಟುಕೊಂಡು ಅಭ್ಯರ್ಥಿಗಳನ್ನು ಬೆಂಬಲಿಸಿದೆ.

ಬೆಂಗಳೂರು ಉತ್ತರದ ಚುನಾವಣಾ ಪುಟ

BPAC

ಬೆಂಗಳೂರು ಉತ್ತರ, ಬೆಂಗಳೂರು ಕೇಂದ್ರ ಹಾಗೂ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ 6 ಅಭ್ಯರ್ಥಿಗಳನ್ನು ಬಿ ಪ್ಯಾಕ್ ಬೆಂಬಲಿಸಿದೆ. ಅಭ್ಯರ್ಥಿಗಳ ಜೊತೆ ಬಿ ಪ್ಯಾಕ್ ಸಂವಾದವನ್ನು ಹಮ್ಮಿಕೊಂಡಿತ್ತು.

ಚುನಾವಣಾ ಚಿತ್ರಣ : ಬೆಂಗಳೂರು ಉತ್ತರದಲ್ಲಿ ಯಾವ ಗೌಡರಿಗೆ ಗೆಲುವು?ಚುನಾವಣಾ ಚಿತ್ರಣ : ಬೆಂಗಳೂರು ಉತ್ತರದಲ್ಲಿ ಯಾವ ಗೌಡರಿಗೆ ಗೆಲುವು?

ಅಭ್ಯರ್ಥಿಗಳು : ಬೆಂಗಳೂರು ಉತ್ತರ ಕ್ಷೇತ್ರದಲ್ಲಿ ಬಿಜೆಪಿಯ ಡಿ.ವಿ.ಸದಾನಂದ ಗೌಡ, ಕಾಂಗ್ರೆಸ್-ಜೆಡಿಎಸ್‌ನ ಕೃಷ್ಣ ಬೈರೇಗೌಡ ಅವರನ್ನು ಬೆಂಬಲಿಸಲಾಗಿದೆ.

ಬೆಂಗಳೂರು ಸೆಂಟ್ರಲ್ ಕ್ಷೇತ್ರದಲ್ಲಿ ಬಿಜೆಪಿಯ ಪಿ.ಸಿ.ಮೋಹನ್, ಕಾಂಗ್ರೆಸ್‌-ಜೆಡಿಎಸ್‌ನ ರಿಜ್ವಾನ್ ಅರ್ಷದ್ ಬೆಂಬಲಿಸಲಾಗಿದೆ.

ಬೆಂಗಳೂರು ದಕ್ಷಿಣ ಕ್ಷೇತ್ರದಲ್ಲಿ ಬಿಜೆಪಿಯ ತೇಜಸ್ವಿ ಸೂರ್ಯ, ಕಾಂಗ್ರೆಸ್‌-ಜೆಡಿಎಸ್‌ನ ಬಿ.ಕೆ.ಹರಿಪ್ರಸಾದ್ ಅವರನ್ನು ಬೆಂಬಲಿಸಿದೆ.

English summary
Bangalore Political Action Committee (B.PAC) released a list of 6 endorsed candidates for Lok sabha elections 2019.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X