ಬೆಂಗಳೂರು : ಗ್ಯಾಂಗ್ ರೇಪ್ ಪ್ರಕರಣ ಮೂವರು ಶಂಕಿತರು ವಶಕ್ಕೆ

ಬೆಂಗಳೂರು, ಅಕ್ಟೋಬರ್ 06 : ಬೆಂಗಳೂರಿನಲ್ಲಿ ಕಾಲ್ ಸೆಂಟರ್ ಉದ್ಯೋಗಿ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಶಂಕಿತ ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಯುವತಿ ನೀಡಿದ ಮಾಹಿತಿ ಅನ್ವಯ ಶಂಕಿತರ ರೇಖಾಚಿತ್ರಗಳನ್ನು ಸಿದ್ಧಪಡಿಸಲಾಗಿದೆ.

ಅಕ್ಟೋಬರ್ 3ರ ಶನಿವಾರ ರಾತ್ರಿ ಮಡಿವಾಳ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 22 ವರ್ಷದ ಕಾಲ್ ಸೆಂಟರ್ ಉದ್ಯೋಗಿ ಮೇಲೆ ಟೆಂಪೋ ಟ್ರಾವೆಲ್ಲರ್‌ನಲ್ಲಿ ಸಾಮೂಹಿಕ ಅತ್ಯಾಚಾರ ನಡೆದಿತ್ತು. ಆರೋಪಿಗಳನ್ನು ಬಂಧಿಸಲು ಮೂರು ವಿಶೇಷ ತಂಡಗಳನ್ನು ರಚನೆ ಮಾಡಲಾಗಿದೆ. [ಕಾಲ್ ಸೆಂಟರ್ ಉದ್ಯೋಗಿ ಮೇಲೆ ಗ್ಯಾಂಗ್ ರೇಪ್]

arrest

ಪೊಲೀಸರ ಒಂದು ತಂಡ ಟಿಟಿ ವಾಹನದ ಹುಡುಕಾಟದಲ್ಲಿ ತೊಡಗಿದೆ. ವಾಹನದ ನೋಂದಣಿ ಸಂಖ್ಯೆಯ ಪತ್ತೆ ಕಾರ್ಯ ನಡೆಯುತ್ತಿದೆ. ಹಲವು ಟಿಟಿ ಚಾಲಕ ಮತ್ತು ಕ್ಲೀನರ್‌ಗಳ ವಿಚಾರಣೆಯನ್ನು ಪೊಲೀಸರು ನಡೆಸಿದ್ದಾರೆ. ಯುವತಿ ನೀಡಿದ ಮಾಹಿತಿ ಆಧಾರದ ಮೇಲೆ ಶಂಕಿತರ ರೇಖಾಚಿತ್ರವನ್ನು ರಚಿಸಲಾಗಿದೆ.

ಮಂಗಳವಾರ ಬೆಳಗ್ಗೆ ಪೊಲೀಸರ ಒಂದು ತಂಡ ಮೂವರನ್ನು ಈ ಗ್ಯಾಂಗ್ ರೇಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ವಶಕ್ಕೆ ಪಡೆದುಕೊಂಡಿದ್ದು, ವಿಚಾರಣೆ ನಡೆಸುತ್ತಿದ್ದಾರೆ. ಯುವತಿಯನ್ನು ಕುಟುಂಬದವರು ಮಧ್ಯಪ್ರದೇಶಕ್ಕೆ ಕರೆದುಕೊಂಡು ಹೋಗಿದ್ದಾರೆ. ವಿಚಾರಣೆಗೆ ಕರೆದಾಗ ಆಗಮಿಸಿ ಸಹಕಾರ ನೀಡುವುದಾಗಿ ಯುವತಿ ಪೊಲೀಸರಿಗೆ ಭರವಸೆ ನೀಡಿದ್ದಾರೆ ಎಂದು ತಿಳಿದುಬಂದಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+