ಎಸ್ಸೆಸ್ಸೆಲ್ಸಿ , ದ್ವಿತೀಯ ಪಿಯು ವಿದ್ಯಾರ್ಥಿಗಳಿಗೆ ಬೆಳಗ್ಗೆ ತಿಂಡಿ ವ್ಯವಸ್ಥೆ

ಬೆಂಗಳೂರು, ಜನವರಿ 31: ಬಿಬಿಎಂಪಿಯ ಎಲ್ಲಾ ಶಾಲಾ-ಕಾಲೇಜಿನ ಎಸ್ಸೆಸ್ಸೆಲ್ಸಿ ಹಾಗೂ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಬೆಳಗಿನ ತಿಂಡಿಯನ್ನು ಒದಗಿಸಲು ಬಿಬಿಎಂಪಿ ಮುಂದಾಗಿದೆ.

ಬಿಬಿಎಂಪಿಯ ವಿವಿಧ ಶಾಲೆಗಳಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ಎಸ್ಸೆಸ್ಸೆಲ್ಸಿಯ 1,932ವಿದ್ಯಾರ್ಥಿಗಳಿಗೆ ಹಾಗೂ ಪಾಲಿಕೆಯ ವಿವಿಧ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ 1948 ವಿದ್ಯಾರ್ಥಿಗಳಿಗೆ ಪ್ರತಿದಿನ ಬೆಳಗ್ಗೆ ಲಘು ಉಪಾಹಾರ ನೀಡಲು ಪಾಲಿಕೆ ತೀರ್ಮಾನಿಸಿದೆ. ಉಪಾಹಾರ ನೀಡಲು ಬಿಬಿಎಂಪಿಯು ಅಕ್ಷಯ ಪಾತ್ರ ಫೌಂಡೇಶನ್ ಸಂಪರ್ಕಿಸಿದೆ.

ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಮಾರ್ಚ್ 26ರವರೆಗೆ ಹಾಗೂ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಮಾರ್ಚ್ 3ರವರೆಗೆ ಲಘು ಉಪಾಹಾರ ನೀಡಲು ನಿರ್ಧರಿಸಲಾಗಿದೆ. ಈ ಕುರಿತು ಪಾಲಿಕೆ ಶಿಕ್ಷಣ ವಿಭಾಗದ ಸಹಾಯಕ ಆಯುಕ್ತ ನಾಗೇಂದ್ರ ನಾಯ್ಕ ಪ್ರತಿಕ್ರಿಯೆ ನೀಡಿದ್ದು, ಬಿಬಿಎಂಪಿ ವಿದ್ಯಾರ್ಥಿಗಳ ಪರೀಕ್ಷಾ ಫಲಿತಾಂಶ ಉತ್ತಮಗೊಳಿಸುವ ನಿಟ್ಟಿನಲ್ಲಿ ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿ ವಿದ್ಯಾರ್ಥಿಗಳಿಗೆ ವಿಶೇಷ ತರಗತಿ ನಡೆಸಲಾಗುತ್ತಿದೆ.

 Breakfast Will Provide For BBMP School And College Students

ಹೀಗಾಗಿ ವಿದ್ಯಾರ್ಥಿಗಳು ಪ್ರತಿದಿನ ಬೆಳಗ್ಗೆ ಬೇಗ ಶಾಲೆ-ಕಾಲೇಜಿಗೆ ಆಗಮಿಸುತ್ತಾರೆ. ಅವರಿಗೆ ಉಪಾಹಾರದ ಸಮಸ್ಯೆ ಆಗಬಾರದು ಎಂಬ ಕಾರಣಕ್ಕೆ ಪರೀಕ್ಷೆ ಮುಗಿಯುವವರೆ ಪಾಲಿಕೆಯಿಂದಲೇ ಉಪಾಹಾರ ನೀಡಲು ತೀರ್ಮಾನಿಸಲಾಗಿದೆ ಎಂದು ತಿಳಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+