ಲಂಚ ಪ್ರಕರಣ: ಬೆಂಗಳೂರಿನ ಮಾಜಿ ಡಿಸಿ ಮಂಜುನಾಥ್‌ಗೆ ಕೊನೆಗೂ ಸಿಕ್ಕ ಜಾಮೀನು
ಬೆಂಗಳೂರು, ಸೆ.4: ಕಂದಾಯ ವ್ಯಾಜ್ಯವೊಂದರಲ್ಲಿ ತಮ್ಮ ಪರ ತೀರ್ಪು ನೀಡಲು 5 ಲಕ್ಷ ಲಂಚ ಪಡೆದಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿದ್ದ ಬೆಂಗಳೂರು ನಗರ ಜಿಲ್ಲಾಧಿಕಾರಿಯಾಗಿದ್ದ ಐಎಎಸ್ ಅಧಿಕಾರಿ ಜೆ. ಮಂಜುನಾಥ್‌ಗೆ ಕೊನೆಗೂ ಜಾಮೀನು ಸಿಕ್ಕಿದೆ.
ಇದರಿಂದಾಗಿ ಎರಡು ತಿಂಗಳ ನಂತರ ಮಂಜುನಾಥ್ ಕಾರಾಗೃಹದಿಂದ ಹೊರಬರುವಂತಾಗಿದೆ. ಬೆಂಗಳೂರು ನಗರದ 23ನೇ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯ ಮಂಜುನಾಥ್ ಗೆ ಷರತ್ತುಬದ್ಧ ಜಾಮೀನು ನೀಡಿದೆ.
ಪ್ರಾಸಿಕ್ಯೂಷನ್ 60 ದಿನಗಳ ಒಳಗಾಗಿ ದೋಷಾರೋಪ ಪಟ್ಟಿ ಸಲ್ಲಿಸದ ಕಾರಣ ಆರೋಪಿಯು, ಕಾನೂನು ಬದ್ಧವಾಗಿ ಪಡೆಯಬಹುದಾದ ಡಿಫಾಲ್ಟ್ ಜಾಮೀನನ್ನು ಷರತ್ತು ವಿಧಿಸುವ ಮೂಲಕ ನ್ಯಾಯಾಧೀಶ ಲಕ್ಷ್ಮಿನಾರಾಯಣ ಭಟ್ ಮಂಜೂರು ಮಾಡಿದರು.
ಆ.3ರಂದು ಹೈಕೋರ್ಟ್ ನಲ್ಲಿ ತಿರಸ್ಕಾರ: ಭೂಮಿಗೆ ಸಂಬಂಧಿಸಿದಂತೆ ವ್ಯಾಜ್ಯದಲ್ಲಿ ಅನುಕೂಲಕರ ತೀರ್ಪು ನೀಡಲು 5 ಲಕ್ಷ ರೂ. ಲಂಚಕ್ಕೆ ಬೇಡಿಕೆಯಿಟ್ಟ ಪ್ರಕರಣ ಸಂಬಂಧ ಬೆಂಗಳೂರು ನಗರ ಹಿಂದಿನ ಜಿಲ್ಲಾಧಿಕಾರಿ ಜೆ. ಮಂಜುನಾಥ್ ಗೆ ಹೈಕೋರ್ಟ್ ಆ.3ರಂದು ಜಾಮೀನು ನೀಡಲು ನಿರಾಕರಿಸಿತ್ತು.

ಜಾಮೀನು ಕೋರಿ ಮಂಜುನಾಥ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ಪೂರ್ಣಗೊಳಿಸಿದೆ ಕಾಯ್ದಿರಿಸಿದ್ದ ತೀರ್ಪನ್ನು ನ್ಯಾಯಮೂರ್ತಿ ಕೆ.ನಟರಾಜನ್ ಅವರಿದ್ದ ಏಕ ಸದಸ್ಯಪೀಠ ಪ್ರಕಟಿಸಿ, ಮೇಲ್ನೋಟಕ್ಕೆ ಆರೋಪದಲ್ಲಿ ಹುರುಳಿದೆ ಎಂದೆನಿಸುತ್ತದೆ. ಜೊತೆಗೆ ಪ್ರಕರಣ ಅತ್ಯಂತ ಗಂಭೀರವಾಗಿರುವುದರಿಂದ ಇನ್ನೂ ತನಿಖೆ ಪೂರ್ಣಗೊಂಡಿಲ್ಲದೇ ಇರುವುದರಿಂದ ಜಾಮೀನು ನೀಡಲಾಗದು ಎಂದು ನ್ಯಾಯಾಲಯ ಹೇಳಿದೆ.
ಎಸಿಬಿ ಪರ ವಕೀಲರು, ಪ್ರಕರಣದಲ್ಲಿ ಅರ್ಜಿದಾರರರೇ ಪ್ರಮುಖ ಆರೋಪಿ, ಅವರ ಅಣತಿಯ ಮೇರೆಗೆ ಎಲ್ಲ ನಡೆದಿರುವುದು. ಅವರ ಸೂಚನೆ ಮೇರೆಗೆ ಉಪತಹಸೀಲ್ದಾರ್ ಮತ್ತು ಮತ್ತೊಬ್ಬ ಸಹಾಯಕ ಹಣ ಪಡೆದಿರುವುದು, ಅವರೇ ಮುಖ್ಯ ಸೂತ್ರದಾರರು. ಮೂಲ ದೂರುದಾರರು ಸಲ್ಲಿಸಿರುವ ಆಡಿಯೋದಲ್ಲಿ ಎಲ್ಲ ವಿವರಗಳಿವೆ ಎಂದರು.
ಆದರೆ ಅರ್ಜಿದಾರರ ಪರ ವಕೀಲರು, ಎಲ್ಲ ಆರೋಪಗಳನ್ನು ನಿರಾಕರಿಸಿ. ಘಟನೆ ನಡೆದ ದಿನದಂದು ಆ ಜಾಗದಲ್ಲಿ ಅರ್ಜಿದಾರರು ಇರಲೇ ಇಲ್ಲ. ಅವರಿಗೂ ಇದಕ್ಕೂ ಸಂಬಂಧವೇ ಇಲ್ಲ. ಅನಗತ್ಯವಾಗಿ ಅವರನ್ನು ಸಿಲುಕಿಸಲಾಗುತ್ತಿದೆ. ಹಾಗಾಗಿ ಜಾಮೀನು ನೀಡಬೇಕು ಎಂದು ಕೋರಿದ್ದರು.
ಅಲ್ಲದೆ, 'ಅಪರಾಧ ನಡೆದಿದೆ ಎಂದು ಹೇಳಲಾಗಿರುವುದು 2022ರ ಮೇ 18ರಂದು. ಆದರೆ, ಮಂಜುನಾಥ್ ವಿರುದ್ಧ ಎಫ್‌ಐಆರ್ ದಾಖಲು ಮಾಡಿರುವುದು 2022ರ ಮೇ 21ರಂದು ಭ್ರಷ್ಟಾಚಾರ ನಿಗ್ರಹ ಕಾಯ್ದೆ-1988ರ ಕಲಂ 7 (ಎ) ಅನುಸಾರ ಸಾರ್ವಜನಿಕ ಸೇವೆಯಲ್ಲಿರುವ ಅಧಿಕಾರಿ ಅಥವಾ ನೌಕರ ಲಂಚಕ್ಕೆ ಬೇಡಿಕೆ ಇಟ್ಟ ಬಗ್ಗೆ ಮತ್ತು ಅದನ್ನು ಪಡೆದ ಬಗ್ಗೆ ಮೇಲ್ನೋಟಕ್ಕೇ ಸಾಕಷ್ಟು ಸಾಕ್ಷ್ಯಾಧಾರಗಳಿರಬೇಕು. ಆದರೆ, ಈ ಪ್ರಕರಣದಲ್ಲಿ ಅಂತಹ ಯಾವುದೇ ಬಲವಾದ ಸಾಕ್ಷ್ಯಗಳು ಇಲ್ಲ' ಎಂದರು.

'ಭ್ರಷ್ಟಾಚಾರ ನಿಗ್ರಹ ಕಾಯ್ದೆಯ ಕಲಂ 17ಎ ಪ್ರಕಾರ ತನಿಖಾಧಿಕಾರಿಯು ಸಾರ್ವಜನಿಕ ಸೇವಕರ ವಿರುದ್ಧದ ತನಿಖೆಗೆ ಪೂರ್ವಾನುಮತಿ ಕೋರಿರಬೇಕು. ಆದರೆ, ಈ ಪ್ರಕರಣದಲ್ಲಿ ಎಸಿಬಿ ಪೂರ್ವಾನುಮತಿ ಪಡೆದಿಲ್ಲ. ಕಂದಾಯ ವ್ಯಾಜ್ಯವನ್ನು ಇತ್ಯರ್ಥಪಡಿಸಬೇಕಾಗಿದ್ದ ಅಧಿಕಾರಿ ಮಂಜುನಾಥ್ ಅವರೇ ಆಗಿದ್ದ ಕಾರಣ ಅವರೂ ಈ ಪ್ರಕರಣದಲ್ಲಿ ಶಾಮೀಲಾಗಿದ್ದಾರೆಂದು ಕುರುಡಾಗಿ ಶಂಕಿಸುವುದು ತರವಲ್ಲ. ಅವರ ತೇಜೋವಧೆ ಮಾಡಲು ಮತ್ತು ಅವರ ಕಳಂಕರಹಿತ ಸೇವೆಗೆ ಮುಕ್ಕು ಮಾಡುವ ಉದ್ದೇಶದಿಂದ ಈ ಸಂಚು ರೂಪಿಸಲಾಗಿದೆ. ಆದ್ದರಿಂದ, ಪ್ರಕರಣವನ್ನು ರದ್ದುಗೊಳಿಸಬೇಕು ಎಂದು ಕೋರಿದರು.
ಹೈಕೋರ್ಟ್ ಚಾಟಿ ನಂತರ ಬಂಧನ: ಲಂಚ ಆರೋಪ ಪ್ರಕರಣದಲ್ಲಿ ಜಿಲ್ಲಾಧಿಕಾರಿ ವಿರುದ್ಧ ಮೇಲ್ನೋಟಕ್ಕೆ ಸ್ಪಷ್ಟ ಸಾಕ್ಷ್ಯವಿದ್ದರೂ ಕ್ರಮ ಕೈಗೊಳ್ಳದ ಭ್ರಷ್ಟಾಚಾರ ನಿಗ್ರಹ ದಳದ ಕಾರ್ಯವನ್ನು ಹೈಕೋರ್ಟ್ ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡಿತ್ತು.
"ನೀವು(ಎಸಿಬಿ) ಸಣ್ಣ ಪುಟ್ಟ ಜನರನ್ನು ಹಿಡಿಯುತ್ತೀರಿ, ದೊಡ್ಡ ದೊಡ್ಡ ತಿಮಿಂಗಲಗಳನ್ನು ಹಾಗೆಯೇ ಬಿಡುತ್ತೀರಿ. ಇದು ಸರಿಯೇ, ಕಾನೂನು ಎಲ್ಲರಿಗೂ ಒಂದೇ, ಯಾವುದೇ ಅಧಿಕಾರಿಯ ಮುಲಾಜಿಗೆ ಒಳಗಾಗದೆ ಕಾರ್ಯನಿರ್ವಹಿಸಬೇಕು'' ಎಂದು ಎಸಿಬಿ ಮತ್ತು ಅದರ ಮುಖ್ಯಸ್ಥ ಎಡಿಜಿಪಿ ಸೀಮಂತ್ ಕುಮಾರ್ ಸಿಂಗ್ ವಿರುದ್ಧ ಹರಿಹಾಯ್ದಿತ್ತು. ಹಾಗಾಗಿ ಕಳೆದ ಜು.4ರಂದು, ಜಿಲ್ಲಾಧಿಕಾರಿಯಾಗಿದ್ದ ಜೆ.ಮಂಜುನಾಥ್ ಅವರನ್ನು ಎಸಿಬಿ ಬಂಧಿಸಿತ್ತು.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ












Click it and Unblock the Notifications