ಇನ್ಫೋಸಿಸ್ ಸಹಕಾರದಲ್ಲಿ ಬ್ರಾಡ್ ವೇ ರಸ್ತೆಯ ಕೋವಿಡ್ ಆಸ್ಪತ್ರೆ ಉದ್ಘಾಟನೆ
ಬೆಂಗಳೂರು, ಆಗಸ್ಟ್ 26: ನಾಲ್ಕು ತಿಂಗಳ ಪರಿಶ್ರಮದಿಂದ ಸರ್ಕಾರಕ್ಕೆ ಯಾವುದೇ ಆರ್ಥಿಕ ಹೊರೆ ಇಲ್ಲದೆ ಕೋವಿಡ್ ರೋಗಿಗಳಿಗೆ ಸುಸಜ್ಜಿತ ಆಸ್ಪತ್ರೆ ಲಭ್ಯವಾಗಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದರು.
Recommended Video
ಶಿವಾಜಿನಗರದ ಬ್ರಾಡ್ ವೇ ರಸ್ತೆಯಲ್ಲಿ ಬಿಬಿಎಂಪಿಯಿಂದ ನಿರ್ಮಾಣವಾದ ''ಚರಕ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ''ಯನ್ನು ಇಂದು(ಆಗಸ್ಟ್ 26) ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಉಪಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ, ವಸತಿ ಸಚಿವ ವಿ.ಸೋಮಣ್ಣ ಉಪಸ್ಥಿತರಿದ್ದರು.
"ಬಿಬಿಎಂಪಿ ದಕ್ಷಿಣ ವಲಯದಲ್ಲಿ ಅಧಿಕಾರಿಗಳು ಸೋಂಕು ಹರಡುವಿಕೆಯನ್ನು ನಿಯಂತ್ರಣಕ್ಕೆ ತರುವ ಪ್ರಯತ್ನ ಮಾಡಿದ್ದಾರೆ. ಅಲ್ಲಿನ ಜನರು ಸರ್ಕಾರ ಸೂಚಿಸಿದ ನಿಯಮಗಳನ್ನು ಪಾಲಿಸಬೇಕು" ಎಂದು ಸಚಿವರು ಮನವಿ ಮಾಡಿದರು.

ನಾಲ್ಕು ವರ್ಷಗಳಿಂದ ಖಾಲಿ ಇದ್ದ ಕಟ್ಟಡಕ್ಕೆ ಇನ್ಫಿ ಸ್ಪರ್ಶ
ನಂತರ ಮಾತನಾಡಿದ ಸಚಿವ ಡಾ.ಕೆ.ಸುಧಾಕರ್, "ಬಿಬಿಎಂಪಿಯ ಕಟ್ಟಡ ನಾಲ್ಕು ವರ್ಷಗಳಿಂದ ಖಾಲಿ ಇತ್ತು. ಇಂತಹ ಸಂದರ್ಭದಲ್ಲಿ 20-25 ಕೋಟಿ ರೂ. ವೆಚ್ಚದಲ್ಲಿ ಆಸ್ಪತ್ರೆ ನಿರ್ಮಿಸುವ ಆಲೋಚನೆ ಬಂದಿತ್ತು. ಆದರೆ ಕೋವಿಡ್ ಸಂಕಷ್ಟವಿದ್ದ ಹಿನ್ನೆಲೆಯಲ್ಲಿ, ಇನ್ಫೋಸಿಸ್ ಪ್ರತಿಷ್ಠಾನದ ಸುಧಾಮೂರ್ತಿ ಅವರನ್ನು ಮನವಿ ಮಾಡಿದ್ದೆ. ಅವರು ತಕ್ಷಣ ಸ್ಪಂದಿಸಿ 11 ಕೋಟಿ ರೂ. ಮೌಲ್ಯದ ಉಪಕರಣಗಳನ್ನು ನೀಡಿದರು. ವಿಪ್ರೊ ಸಂಸ್ಥೆಯವರು ವೈದ್ಯ ಸಿಬ್ಬಂದಿಯನ್ನು ನಿಯೋಜಿಸಿದರು. ಈ ಸಂಸ್ಥೆಗಳ ನೆರವಿನಿಂದಾಗಿ ಸರ್ಕಾರದ ಮೇಲೆ ಹೊರೆ ಇಲ್ಲದೆ ಆಸ್ಪತ್ರೆ ನಿರ್ಮಾಣವಾಗಿದೆ. ಈ ಸಂಸ್ಥೆಗಳಿಗೆ ಕೃತಜ್ಞತೆ ಸಲ್ಲಿಸುತ್ತೇನೆ" ಎಂದು ಹೇಳಿದರು.

ಕರ್ನಾಟಕದ ಕೋವಿಡ್ ಪರಿಸ್ಥಿತಿಯಲ್ಲಿ ಸುಧಾರಣೆ
ಚರಕ ಆಸ್ಪತ್ರೆ: ಆಸ್ಪತ್ರೆಯಲ್ಲಿ ಪುರುಷರಿಗೆ 60, ಮಹಿಳೆಯರಿಗೆ 50 ಹಾಗೂ ಮಕ್ಕಳಿಗೆ 20 ಸೇರಿದಂತೆ ಒಟ್ಟು 130 ಹಾಸಿಗೆಗಳಿವೆ. 20 ಐಸಿಯು ಹಾಸಿಗೆ, 20 ವೆಂಟಿಲೇಟರ್ ಸೌಲಭ್ಯವಿದೆ.
ಕರ್ನಾಟಕದ ಕೋವಿಡ್ ಪರಿಸ್ಥಿತಿಯಲ್ಲಿ ಸುಧಾರಣೆ: ರಾಜ್ಯದಲ್ಲಿ 2 ಲಕ್ಷಕ್ಕೂ ಹೆಚ್ಚು ಮಂದಿ ಕೋವಿಡ್ ನಿಂದ ಗುಣಮುಖರಾಗಿದ್ದು, ಶೇ 1%ಕ್ಕಿಂತ ಕಡಿಮೆ ಸಕ್ರಿಯ ಪ್ರಕರಣಗಳಿಗೆ ಐಸಿ ಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ರಾಜ್ಯದ ಚೇತರಿಕೆ ಪ್ರಮಾಣ ಶೇ.70% ಇದ್ದು, ಮರಣ ಪ್ರಮಾಣ ಶೇ.1.69%ರಷ್ಟಿದೆ ಎಂದು ಸಚಿವರು ಟ್ವೀಟ್ ಮೂಲಕ ತಿಳಿಸಿದ್ದಾರೆ.

ಅನ್ ಲಾಕ್ ಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ಮಾರ್ಗಸೂಚಿ
ಅನ್ ಲಾಕ್ ಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ಮಾರ್ಗಸೂಚಿಯನ್ನು ಎಲ್ಲ ರಾಜ್ಯ ಸರ್ಕಾರಗಳು ಪಾಲಿಸುತ್ತಿವೆ. ತಿಂಗಳಾಂತ್ಯದಲ್ಲಿ ಪ್ರಧಾನಿಗಳು ಸಭೆ ನಡೆಸಿ ಸೂಕ್ತ ಮಾರ್ಗಸೂಚಿ ನೀಡುವ ನಿರೀಕ್ಷೆ ಇದೆ.
ಸೋಂಕಿತರ ಸಂಖ್ಯೆ ಹೆಚ್ಚುವ ಬಗ್ಗೆ ಆತಂಕಗೊಳ್ಳಬಾರದು. ರಾಜ್ಯದಲ್ಲಿ ಶೇ.70 ರಷ್ಟು ಮಂದಿ ಗುಣಮುಖರಾಗಿದ್ದಾರೆ. ಮರಣ ಪ್ರಮಾಣ ಕಡಿಮೆಯಾಗಿದೆ. ಇದು ಸರ್ಕಾರದ ಸಾಧನೆ. ಕೋವಿಡ್ ಗೆ ಸಂಬಂಧಿಸಿದ ಯಾವುದೇ ಖರೀದಿ ಪಾರದರ್ಶಕವಾಗಿ ನಡೆಯುತ್ತಿದೆ ಎಂದರು.

ವೈದ್ಯರಿಗೆ ಸಚಿವ ಡಾ.ಕೆ.ಸುಧಾಕರ್ ಅಭಿನಂದನೆ
ಶಿವಾಜಿನಗರದ ಎಚ್‍ಎಸ್‍ಐಎಸ್ ಘೋಷಾ ಆಸ್ಪತ್ರೆಯಲ್ಲಿ 17 ದಿನಗಳಲ್ಲಿ, ಕೋವಿಡ್ ಸೋಂಕಿತ 50 ಗರ್ಭಿಣಿಯರಿಗೆ ಯಶಸ್ವಿಯಾಗಿ ಹೆರಿಗೆ ಮಾಡಲಾಗಿದೆ. ಆಸ್ಪತ್ರೆಯ ವೈದ್ಯರಿಗೆ ಸಚಿವ ಡಾ.ಕೆ.ಸುಧಾಕರ್ ಅಭಿನಂದನೆ ಸಲ್ಲಿಸಿದ್ದಾರೆ.
ಬ್ರಾಡ್ ವೇ ಆಸ್ಪತ್ರೆ ಬಗ್ಗೆ ಮತ್ತೆ ಮಾತನಾಡಿ, ಕೊರೊನಾ ರೋಗಿಗಳಿಗಾಗಿ ಈ ಆಸ್ಪತ್ರೆ ನಿರ್ಮಾಣವಾಗಿದ್ದು, ಹಾಸಿಗೆ, ವೆಂಟಿಲೇಟರ್, ಆಕ್ಸಿಜನ್ ಮೊದಲಾದ ಮೂಲಸೌಕರ್ಯ ಕಲ್ಪಿಸಲಾಗಿದೆ. ಜತೆಗೆ ಸಿಬ್ಬಂದಿ ನಿಯೋಜನೆಯೂ ಮಾಡಲಾಗಿದೆ.
-
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Gold Rate Today: ಬೆಂಗಳೂರಿನಲ್ಲಿ ಚಿನ್ನದ ದರ ಮತ್ತೆ ಏರಿಕೆ: 15,000 ರೂಪಾಯಿ ಗಡಿ ದಾಟಿದ 24 ಕ್ಯಾರೆಟ್ ಚಿನ್ನ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
Rishab Shetty: ಅಧ್ಯಾಯ ಎರಡು ಇಲ್ಲಿಂದ ಶುರು; ಸ್ಯಾಂಡಲ್ವುಡ್ನಲ್ಲಿ ಸಂಚಲನ ಮೂಡಿಸಿದ ರಿಷಬ್ ಶೆಟ್ಟಿ ಪೋಸ್ಟ್ -
ಹೊಸತೊಡಕು: ಮಧ್ಯರಾತ್ರಿಯಿಂದಲೇ ಮಾಂಸ ಖರೀದಿ ಭರಾಟೆ, ಎಷ್ಟಿದೆ ಇಂದಿನ ಚಿಕನ್-ಮಟನ್ ದರ? -
World Happiness Report 2026: ಫಿನ್ಲೆಂಡ್ ಜಗತ್ತಿನ ಅತ್ಯಂತ ಸಂತೋಷದಾಯಕ ದೇಶ: ನಮ್ಮ ಭಾರತಕ್ಕೆ ಸಿಕ್ಕ ಸ್ಥಾನವೆಷ್ಟು? -
ಈ ಸಂವತ್ಸರಕ್ಕೇಕೆ ಈ ಹೆಸರು? ‘ಪರಾಭವ’ ಅಂದ್ರೆ ‘ಸೋಲು’ ಎಂಬ ಅರ್ಥವಲ್ಲವೇ? -
Rashmika Mandanna: ಮನೆಮಗಳಾಗಿ ಇಲ್ಲಿಗೆ ಬಂದೆ, ಈಗ ಸೊಸೆಯಾಗಿ ನಿಂತಿದ್ದೇನೆ: ರಶ್ಮಿಕಾ ಮಂದಣ್ಣ ಭಾವುಕ -
ಕೇಂದ್ರೀಯ ವಿದ್ಯಾಲಯ 1ನೇ ತರಗತಿ ಪ್ರವೇಶಾತಿ 2026: ಇಂದಿನಿಂದಲೇ ಅರ್ಜಿ ಸಲ್ಲಿಕೆ ಶುರು, ಪೋಷಕರೇ ಈಗಲೇ ಗಮನಿಸಿ












Click it and Unblock the Notifications