ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬಿಬಿಎಂಪಿಯ 51ನೇ ಮೇಯರ್ ಸಂಪತ್ ರಾಜ್ ಪರಿಚಯ

|
Google Oneindia Kannada News

ಬೆಂಗಳೂರು, ಸೆಪ್ಟೆಂಬರ್ 28 : ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ 51 ಮೇಯರ್ ಆಗಿ ಸಂಪತ್ ರಾಜ್ ಆಯ್ಕೆಯಾಗಿದ್ದಾರೆ. ಬಿಬಿಎಂಪಿಯಲ್ಲಿ ಮೂರನೇ ವರ್ಷವೂ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಮುಂದುವರೆದಿದ್ದು, ಮೇಯರ್ ಮತ್ತು ಉಪ ಮೇಯರ್ ಪಟ್ಟವನ್ನು ಎರಡೂ ಪಕ್ಷಗಳು ಹಂಚಿಕೊಂಡಿವೆ.

ಬಿಬಿಎಂಪಿ ಮೇಯರ್ ಆಗಿ ಕಾಂಗ್ರೆಸ್ ನ ಸಂಪತ್ ರಾಜ್ ಆಯ್ಕೆಬಿಬಿಎಂಪಿ ಮೇಯರ್ ಆಗಿ ಕಾಂಗ್ರೆಸ್ ನ ಸಂಪತ್ ರಾಜ್ ಆಯ್ಕೆ

ಬಿಬಿಎಂಪಿ ಮೇಯರ್ ಮತ್ತು ಉಪ ಮೇಯರ್ ಆಯ್ಕೆಗೆ ಗುರುವಾರ ಚುನಾವಣೆ ನಡೆಯಿತು. ದೇವರಜೀವನಹಳ್ಳಿ ವಾರ್ಡ್‌ನ ಬಿಬಿಎಂಪಿ ಸದಸ್ಯರಾದ ಸಂಪತ್ ರಾಜ್ ಅವರು 139 ಮತಗಳನ್ನು ಪಡೆದು ಮೇಯರ್ ಆಗಿ ಆಯ್ಕೆಯಾದರು. ಮೇಯರ್ ಆಯ್ಕೆಗೆ 134 ಮತಗಳ ಅಗತ್ಯವಿತ್ತು.

 Bruhat Bengaluru Mahanagara Palike mayor Sampath Raj profile

ದೇವರಜೀವನಹಳ್ಳಿ ವಾರ್ಡ್‌ನಿಂದ ಎರಡು ಬಾರಿ ಗೆಲುವು ಸಾಧಿಸಿರುವ ಸಂಪತ್ ರಾಜ್ ಅವರು ಸೆ.27, 2018ರ ತನಕ ಮೇಯರ್ ಆಗಿ ಕಾರ್ಯ ನಿರ್ವಹಣೆ ಮಾಡಲಿದ್ದಾರೆ. ಪಾಲಿಕೆಯ ಉಪ ಮೇಯರ್ ಆಗಿ ರಾಜಗೋಪಾಲನಗರ ವಾರ್ಡ್ ಸದಸ್ಯೆ ಪದ್ಮಾವತಿ ನರಸಿಂಹಮೂರ್ತಿ ಆಯ್ಕೆಯಾದರು.

ಸಂಪತ್ ರಾಜ್ ಸಂಕ್ಷಿಪ್ತ ಪರಿಚಯ

* ಸಂಪತ್‌ ರಾಜ್ ಎನ್‌ಎಸ್‌ಯುಐ ಸಂಘಟನೆಯ ಸಕ್ರಿಯ ಕಾರ್ಯಕರ್ತರಾಗಿದ್ದರು

* ಎಂ.ಎಸ್.ರಾಮಯ್ಯ ಇಂಜಿನಿಯರಿಂಗ್ ಕಾಲೇಜಿನಿಂದ ಪದವಿ ಪಡೆದಿದ್ದಾರೆ

* ದೇವಜೀವನಹಳ್ಳಿ ವಾರ್ಡ್‌ ನಿಂದ ಎರಡು ಬಾರಿ ಬಿಬಿಎಂಪಿ ಸದಸ್ಯರಾಗಿ ಆಯ್ಕೆಯಾಗಿದ್ದಾರೆ.

English summary
Devarajeevanahalli ward corporator Sampath Raj elected as the mayor of Bruhat Bengaluru Mahanagara Palike (BBMP).
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X