ಇನ್ನೆರಡು ದಿನ ಯಡಿಯೂರಪ್ಪ ಅವರಿಗೆ ಆಸ್ಪತ್ರೆಯಲ್ಲೇ ಚಿಕಿತ್ಸೆ
Recommended Video

ಇನ್ನೆರಡು ದಿನ ಯಡಿಯೂರಪ್ಪ ಅವರಿಗೆ ಆಸ್ಪತ್ರೆಯಲ್ಲೇ ಚಿಕಿತ್ಸೆ | Oneindia Kannada
ಬೆಂಗಳೂರು, ಅಕ್ಟೋಬರ್ 20: ಬನ್ನೇರುಘಟ್ಟ ರಸ್ತೆಯ ಅಪೋಲೊ ಆಸ್ಪತ್ರೆಗೆ ದಾಖಲಾಗಿದ್ದ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ(74) ಅವರಿಗೆ ಇನ್ನೆರಡು ದಿನ ಆಸ್ಪತ್ರೆಯಲ್ಲೇ ಚಿಕಿತ್ಸೆ ಮುಂದುವರೆಸಲಾಗುತ್ತದೆ.
ಗುರುವಾರ ಬೆಳಗ್ಗೆ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿ ಮನೆಗೆ ಹೋಗಲು ಸೂಚಿಸಿದ್ದ ವೈದ್ಯರ ತಂಡ ಸೂಚಿಸಿತ್ತು. ಆದರೆ, ಯಡಿಯೂರಪ್ಪ ಅವರಿಗೆ ಸುಸ್ತು ಮುಂದುವರೆದಿರುವುದರಿಂದ ವಿಶ್ರಾಂತಿ ಅಗತ್ಯವಿದೆ ಎಂದು ಡಾ. ಪ್ರಮೋದ್ ಹೇಳಿದ್ದಾರೆ.

ಜ್ವರ, ನೆಗಡಿ ಹಾಗೂ ರಕ್ತದೊತ್ತಡದಿಂದ ಬಳಲುತ್ತಿದ್ದ ಯಡಿಯೂರಪ್ಪ ಅವರನ್ನು ಬುಧವಾರ ರಾತ್ರಿ ವೇಳೆ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಹವಾಮಾನ ವೈಪರಿತ್ಯದಿಂದ ಯಡಿಯೂರಪ್ಪ ಅವರಿಗೆ ಜ್ವರ, ನೆಗಡಿ ಸಮಸ್ಯೆ ಕಾಣಿಸಿಕೊಂಡಿತ್ತು. ಕೊಂಚ ರಕ್ತದೊತ್ತಡ ಕೂಡ ಹೆಚ್ಚಾಗಿತ್ತು. ಒಂದು ದಿನ ಆಸ್ಪತ್ರೆಯಲ್ಲಿ ಇರಿಸಿಕೊಂಡು ಚಿಕಿತ್ಸೆ ನೀಡಲಾಗಿದ್ದು, ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ಆತಂಕ ಪಡುವ ಅಗತ್ಯವಿಲ್ಲ ಎಂದು ಡಾ. ಪ್ರಮೋದ್ ಅವರು ಪುನರುಚ್ಚರಿಸಿದ್ದಾರೆ.












Click it and Unblock the Notifications