• search
 • Live TV
ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

3 ಬಾರಿ ಮುಖ್ಯಮಂತ್ರಿಯಾಗಿದ್ದ ಯಡಿಯೂರಪ್ಪ ಎಷ್ಟು ದಿನ ಆಡಳಿತ ನಡೆಸಿದ್ದರು?

|
   ನಾಲ್ಕನೇ ಬಾರಿಗೆ ಸಿಎಂ ಆಗಲು ಹೊರಟಿರುವ ಬಿ ಎಸ್ ಯಡಿಯೂರಪ್ಪ ಎಷ್ಟು ದಿನ ಆಡಳಿತ ನಡೆಸಿದ್ದರು? | Oneindia Kannada

   ಬೆಂಗಳೂರು, ಜುಲೈ 26: ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್‌ ಯಡಿಯೂರಪ್ಪ ನಾಲ್ಕನೇ ಬಾರಿಗೆ ಮುಖ್ಯಮಂತ್ರಿಯಾಗಿ ಇಂದು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಬಿಎಸ್ ಯಡಿಯೂರಪ್ಪ ಬೆಳಗ್ಗೆ ರಾಜ್ಯಪಾಲರ ನಿವಾಸಕ್ಕೆ ತೆರಳಿದ್ದು ಸಂಜೆ 6 ಗಂಟೆಗೆ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.

   2007ರಲ್ಲಿ ಕೇವಲ 7 ದಿನ ಮಾತ್ರ ಮುಖ್ಯಮಂತ್ರಿಯಾಗಿದ್ದರು. ಈ ಹಿಂದೆ 20 ತಿಂಗಳ ಮೈತ್ರಿ ಸರ್ಕಾರದ ಬಳಿಕ ಕೆಲವೇ ದಿನಗಳ ಮಟ್ಟಿಗೆ ಯಡಿಯೂರಪ್ಪ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ್ದರು.

   ಅದಾದ ಬಳಿಕ ಮರು ಚುನಾವಣೆಯಾದ ಹಿನ್ನೆಲೆಯಲ್ಲಿ 2008ರಲ್ಲಿ ಸುಮಾರು ಎರಡೂವರೆ ವರ್ಷದ ಅವಧಿಗೆ ಎರಡನೇ ಬಾರಿಗೆ ಸಿಎಂ ಆಗಿ ಅಧಿಕಾರ ನಡೆಸಿದ್ದಾರೆ.

   Breaking News ಇಂದೇ ಯಡಿಯೂರಪ್ಪ ಪ್ರಮಾಣವಚನ ಸ್ವೀಕಾರBreaking News ಇಂದೇ ಯಡಿಯೂರಪ್ಪ ಪ್ರಮಾಣವಚನ ಸ್ವೀಕಾರ

   ನಂತರ ಬಿಜೆಪಿಯೊಳಗಿನ ಆಂತರಿಕ ಕಿತ್ತಾಟ, ಹಾಗೂ ಗೊಂದಲಗಳ ಬಳಿಕ ಮುಖ್ಯಮಂತ್ರಿ ಹುದ್ದೆಯಿಂದ ಯಡಿಯೂರಪ್ಪ ಕೆಳಗಿಳಿದಿದ್ದರು.ಇದಾದ ಬಳಿಕ ಭ್ರಷ್ಟಾಚಾರ ಆರೋಪವೂ ಕೂಡ ಅವರ ಹಿಂದೆ ಬಿದ್ದಿತ್ತು.

   ನಂತರ 2018ರ ಮೇನಲ್ಲಿ ಅಂತ್ರ ವಿಧಾನಸಭೆ ಸೃಷ್ಟಿಯಾದ ಸಂದರ್ಭದಲ್ಲಿ ವಿಶ್ವಾಸಮತ ಯಾಚಿಸುವ ಅತ್ಯುತ್ಸಾಹದಲ್ಲಿ ಮತ್ತೆ ಮೂರನೇ ಬಾರಿಗೆ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದರು. ಆದರೆ ವಿಧಾನಸಭೆಯಲ್ಲಿ ವಿಶ್ವಾಸಮತ ಗೆಲ್ಲಲು ವಿಫಲವಾದ ಹಿನ್ನೆಲೆಯಲ್ಲಿ ಮತ್ತೆ ರಾಜೀನಾಮೆ ನೀಡಿ ಪ್ರತಿಪಕ್ಷ ನಾಯಕ ಸ್ಥಾನದಲ್ಲಿ ಕುಳಿತಿದ್ದರು. ಆದರೆ ಈಗ ಮತ್ತೆ ಒಂದು ವರ್ಷದ ಬಳಿಕ ಮತ್ತೆ ಅಧಿಕಾರ ಚುಕ್ಕಾಣಿ ಹಿಡಿಯಲು ಪ್ರಮಾಣವಚನಕ್ಕೆ ಸಿದ್ಧರಾಗಿದ್ದಾರೆ.

   ಯಡಿಯೂರಪ್ಪನವರು ನವೆಂಬರ್ 12,2007 ರಂದು, ಕರ್ನಾಟಕ ರಾಜ್ಯದ ಮುಖ್ಯಮಂತ್ರಿಯಾಗಿ ರಾಜ್ಯಪಾಲ ರಾಮೇಶ್ವರ ಠಾಕೂರ್ ಅವರ ಸಮ್ಮುಖದಲ್ಲಿ ಅಧಿಕಾರ ಸ್ವೀಕರಿಸಿದರು. ಈ ಮೂಲಕ ದಕ್ಷಿಣ ಭಾರತ ರಾಜ್ಯಗಳಲ್ಲಿ, ಬಿಜೆಪಿ ಪಕ್ಷದ ಮೊದಲ ಮುಖ್ಯಮಂತ್ರಿಯಾದರು.

   ಧರಂಸಿಂಗ್ ನೇತೃತ್ವದ ಕಾಂಗ್ರೆಸ್ ಸರಕಾರಕ್ಕೆ ನೀಡಿದ್ದ ಬೆಂಬಲವನ್ನು 2006ರಲ್ಲಿ ಜೆಡಿಎಸ್ ವಾಪಸ್ ಪಡೆಯಿತು. ನಂತರ ರಚನೆಗೊಂಡ ಬಿಜೆಪಿ-ಜೆಡಿಎಸ್ ಸಮ್ಮಿಶ್ರ ಸರಕಾರದಲ್ಲಿ ಯಡಿಯೂರಪ್ಪನವರು ಉಪ ಮುಖ್ಯಮಂತ್ರಿಯಾದರು. ಮೊದಲ 20 ತಿಂಗಳು ಕುಮಾರಸ್ವಾಮಿಯವರು ಮುಖ್ಯಮಂತ್ರಿ ಮತ್ತು ನಂತರದ 20 ತಿಂಗಳು ಯಡಿಯೂರಪ್ಪನವರು ಮುಖ್ಯಮಂತ್ರಿ ಎಂದು ಸರಕಾರ ರಚನೆ ಸಂದರ್ಭದಲ್ಲಿ ಉಭಯ ಪಕ್ಷಗಳ ನಡುವೆ ಒಪ್ಪಂದವಾಗಿತ್ತು.

   ಕುಮಾರಸ್ವಾಮಿಯವರು ಮುಖ್ಯಮಂತ್ರಿಯಾಗಿದ್ದಾಗ ಉಪಮುಖ್ಯಮಂತ್ರಿ ಯಡಿಯೂರಪ್ಪನವರು ಹಣಕಾಸು ಖಾತೆಗೂ ಸಚಿವರಾಗಿದ್ದರು. ಒಪ್ಪಂದದಂತೆ 2007ರ ಅಕ್ಟೋಬರ್‌ನಲ್ಲಿ ಯಡಿಯೂರಪ್ಪನವರು ಮುಖ್ಯಮಂತ್ರಿಯಾಗಬೇಕಾದಾಗ, ಕುಮಾರಸ್ವಾಮಿಯವರು ಮುಖ್ಯಮಂತ್ರಿ ಹುದ್ದೆ ಬಿಟ್ಟುಕೊಡಲು ನಿರಾಕರಿಸಿದರು.

   ಜೆಡಿಎಸ್ ನಡೆ ವಿರೋಧಿಸಿ ಯಡಿಯೂರಪ್ಪ ಮತ್ತು ಬಿಜೆಪಿಯ ಎಲ್ಲ ಸಚಿವರು ರಾಜೀನಾಮೆ ನೀಡಿದರು. ಸಮ್ಮಿಶ್ರ ಸರಕಾರಕ್ಕೆ ನೀಡಿದ್ದ ಬೆಂಬಲವನ್ನು ಅಕ್ಟೋಬರ್ 5ರಂದು ಬಿಜೆಪಿ ಹಿಂಪಡೆಯಿತು. ನಂತರ ರಾಷ್ಟ್ರಪತಿ ಆಡಳಿತ ಶುರುವಾಯಿತು. ನವೆಂಬರ್ 7ರಂದು ಬಿಜೆಪಿ ಮತ್ತು ಜೆಡಿಎಸ್ ನಡುವಿನ ಭಿನ್ನಮತ ಶಮನಗೊಂಡು ರಾಷ್ಟ್ರಪತಿ ಆಳ್ವಿಕೆ ಅಂತ್ಯಗೊಂಡಿತು.

   ನ. 12, 2007ರಂದು ಮುಖ್ಯಮಂತ್ರಿಯಾಗಿ ಯಡಿಯೂರಪ್ಪನವರು ಪ್ರಮಾಣವಚನ ಸ್ವೀಕರಿಸಿದರು. ಆದರೆ ಸಚಿವರಿಗೆ ಖಾತೆ ಹಂಚಿಕೆ ವೇಳೆ ಭಿನ್ನಮತ ಉಲ್ಬಣಗೊಂಡಿತು. ಬಿಜೆಪಿ ಮತ್ತು ಜೆಡಿಎಸ್ ನಡುವಿನ ಸಮ್ಮಿಶ್ರ ಸರಕಾರ ಅಂತ್ಯಗೊಂಡು, ಯಡಿಯೂರಪ್ಪನವರು ನವೆಂಬರ್ 19, 2007ರಂದು ಮುಖ್ಯಮಂತ್ರಿ ಹುದ್ದೆಗೆ ರಾಜೀನಾಮೆ ನೀಡಿದ್ದರು.
   2007ರಲ್ಲಿ ಏಳು ದಿನ ಮಾತ್ರ ಮುಖ್ಯಮಂತ್ರಿಯಾಗಿದ್ದರು.
   2008 : ಮೇ ೩೦ರ ಶುಕ್ರವಾರ ಕರ್ನಾಟಕದ 25 ನೇ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ.
   2011 : ಜುಲೈ 31ರಂದು ಮುಖ್ಯಮಂತ್ರಿಗಳ ಸ್ಥಾನಕ್ಕೆ ರಾಜೀನಾಮೆ ಪತ್ರ ಸಲ್ಲಿಸಿದರು.
   2014 : 2014 ರ ಲೋಕಸಭಾಚುನಾವಣೆಯಲ್ಲಿ 363,305 ಮತಗಳ ಅಂತರದಿಂದ ಲೋಕಸಭಾಸದಸ್ಯರಾಗಿ ಆಯ್ಕೆ.
   2018: ಮೇ 17ರಂದು ಕರ್ನಾಟಕದ 29 ನೇ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕಾರ.
   2018: ಮೇ 19ರಂದು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ

   English summary
   BS Yeddyurappa set to become karnataka chief minister for fourth time.
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X