ಅಟಲ್ ಬಿಹಾರಿ ವಾಜಪೇಯಿ ಅಸ್ಥಿ ಕಳಶ ಇಂದು ಬೆಂಗಳೂರಿಗೆ
ಬೆಂಗಳೂರು, ಆಗಸ್ಟ್ 22: ದಿವಂಗತ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಅಸ್ಥಿ ಕಳಶವನ್ನು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರು ಬುಧವಾರ ದೆಹಲಿಯಿಂದ ಬೆಂಗಳೂರಿಗೆ ತರಲಿದ್ದಾರೆ.
ಅಸ್ಥಿ ಕಲಶದೊಂದಿಗೆ ಆಗಮಿಸಲಿರುವ ಯಡಿಯೂರಪ್ಪ ಅವರನ್ನು ಆರ್.ಅಶೋಕ್ ಸೇರಿದಂತೆ ಬಿಜೆಪಿ ಗಣ್ಯರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬರಮಾಡಿಕೊಳ್ಳುವರು.
ವಿಮಾನ ನಿಲ್ದಾಣ ರಸ್ತೆಯ ಟೋಲ್ ಗೇಟ್ ಬಳಿ ಸಾವಿರಾರು ಬಿಜೆಪಿ ಕಾರ್ಯಕರ್ತರು ಸಂಜೆ 4 ಗಂಟೆಗೆ ಅಸ್ಥಿಕಲಶವನ್ನು ಸ್ವಾಗತಿಸಲಿದ್ದಾರೆ.

ಸಂಜೆ 5 ಗಂಟೆಗೆ ರಾಜ್ಯ ಬಿಜೆಪಿ ಕಾರ್ಯಾಲಯಕ್ಕೆ ಅಸ್ಥಿ ಕಲಶ ತಲುಪಲಿದ್ದು ಗಣ್ಯರಿಂದ ಅಟಲ್ ಜೀ ಅವರಿಗೆ ಗೌರವಾರ್ಪಣೆ ನಡೆಯಲಿದೆ.
ಬಹುಕಾಲದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರು ಆಗಸ್ಟ್ 16 ರಂದು ಸಂಜೆ 5.05 ಕ್ಕೆ ದೆಹಲಿಯ ಆಮ್ಸ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದರು.












Click it and Unblock the Notifications