ಬೆಂಗಳೂರು : ಮಳೆ ಹಾನಿ ಪ್ರದೇಶಕ್ಕೆ ಬಿಎಸ್‌ವೈ ಭೇಟಿ
ಬೆಂಗಳೂರು, ಸೆಪ್ಟೆಂಬರ್ 10 : 'ಸರ್ಕಾರ ಬೆಂಗಳೂರಿನ ಅಭಿವೃದ್ಧಿಗೆ ಸಾವಿರಾರು ಕೋಟಿ ರೂ.ಗಳನ್ನು ಖರ್ಚು ಮಾಡಿದೆ ಎಂದು ಮುಖ್ಯಮಂತ್ರಿಗಳು ಕೊಚ್ಚಿಕೊಳ್ಳುತ್ತಿದ್ದಾರೆ. ಆ ಹಣವೆಲ್ಲ ಎಲ್ಲಿ ಹೋಯಿತು?' ಎಂದು ಯಡಿಯೂರಪ್ಪ ರಾಜ್ಯ ಸರ್ಕಾರವನ್ನು ಪ್ರಶ್ನಿಸಿದರು.
In Pics:ಬೆಂಗಳೂರನ್ನೇ ಹೊಳೆಯನ್ನಾಗಿ ಮಾಡಿದ ಕಂಡರಿಯದಂಥ ಮಳೆ!
ಭಾನುವಾರ ಕರ್ನಾಟಕ ಬಿಜೆಪಿ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರು ಬೆಂಗಳೂರಿನಲ್ಲಿ ಭಾರೀ ಮಳೆಯಿಂದಾಗಿ ಹಾನಿಗೊಳಗಾದ ಪ್ರದೇಶಗಳಿಗೆ ಭೇಟಿ ನೀಡಿದರು. ನಂದಗೋಕುಲ ಬಡಾವಣೆಗೆ ಭೇಟಿ ನೀಡಿ, ವಾಸ್ತವಿಕ ಸ್ಥಿತಿಗತಿಗಳ ಪರಿವೀಕ್ಷಣೆ ನಡೆಸಿದರು.

ಮಾಧ್ಯಮಗಳ ಜೊತೆ ಮಾತನಾಡಿದ ಯಡಿಯೂರಪ್ಪ, 'ಭಾರೀ ಮಳೆಯಿಂದಾಗಿ ಸಾರ್ವಜನಿಕರಿಗೆ ಬಹುಡೊಡ್ದ ಪ್ರಮಾಣದಲ್ಲಿ ಹಾನಿಯುಂಟಾಗಿದೆ. ಜನಜೀವನ ಅಸ್ತವ್ಯಸ್ತಗೊಂಡಿದ್ದು ಸಾವಿರಾರು ಜನರ ಬದುಕು ಬೀದಿಗೆ ಬಂದಿದೆ. ಸರ್ಕಾರ ಏನು ಮಾಡುತ್ತಿದೆ' ಎಂದು ಯಡಿಯೂರಪ್ಪ ಪ್ರಶ್ನಿಸಿದರು.

'ಸರ್ಕಾರ ಜನರ ದುಡ್ಡನ್ನು ಹಾಳುಮಾಡಿದೆ. ಮಳೆಯಿಂದ ಆಗುವ ಹಾನಿ ತಡೆಯಲು ಯಾವ ಮುಂಜಾಗ್ರತಾ ಕ್ರಮವನ್ನು ಕೈಗೊಳ್ಳದಿರುವುದು ಇಂದಿನ ಪರಿಸ್ಥಿತಿಗೆ ಕಾರಣವಾಗಿದೆ' ಎಂದು ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.












Click it and Unblock the Notifications