ಯಡಿಯೂರಪ್ಪ ನೇತೃತ್ವದಲ್ಲಿ ಸರ್ಕಾರ ರಚಿಸುತ್ತೇವೆ: ಶೋಭಾ

ಬೆಂಗಳೂರ, ಮೇ 16 : ಬಿಜೆಪಿ ಶಾಸಕಾಂಗ ಪಕ್ಷದ ಸಭೆ ಮುಗಿದಿದೆ. ನಾವು ರಾಜಭವನಕ್ಕೆ ತೆರಳಿ ಅಲ್ಲಿ ರಾಜ್ಯಪಾಲರ ಭೇಟಿ ಮಾಡುತ್ತೇವೆ ಬಿಎಸ್‌ ಯಡಿಯೂರಪ್ಪ ಅವರ ನೇತೃತ್ವದಲ್ಲಿ ಬಿಜೆಪಿ ಸರ್ಕಾರವನ್ನು ಸ್ಥಾಪಿಸುತ್ತೇವೆ ಎಂದು ಸಂಸದೆ ಶೋಭಾ ಕರಂದ್ಲಾಜೆ ತಿಳಿಸಿದ್ದಾರೆ.

ಬೆಂಗಳೂರಿನ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಮಾತನಾಡಿ, ಶಾಸಕಾಂಗ ಪಕ್ಷದ ಸಭೆಯಲ್ಲಿ ನಮ್ಮ ನಾಯಕರನ್ನು ಆಯ್ಕೆ ಮಾಡಿ, ನಂತರ ರಾಜಭವನಕ್ಕೆ ತೆರಳಿ ನಮ್ಮಮನವಿ ಸಲ್ಲಿಸುತ್ತೇವೆ. ನಮ್ಮ ಬೇಡಿಕೆಗೆ ರಾಜ್ಯಪಾಲರಿಂದ ಸಮ್ಮತಿ ಸಿಗುವ ವಿಶ್ವಾಸ ಇದೆ ಎಂದರು.

ಕಾಂಗ್ರೆಸ್ ಹಿಂಬಾಗಿಲಿನಿಂದ ಅಧಿಕಾರ ಹಿಡಿಯಲು ಪ್ರಯತ್ನ ಮಾಡುತ್ತಿದೆ. ರಾಜ್ಯದ ಜನ ಅವರನ್ನು ತಿರಸ್ಕರಿಸಿದೆ. ದ ಮೇಲೂ ಮತ್ತೆ ಅಧಿಕಾರಕ್ಕೆಬಂದು ರಾಜ್ಯ ಲೂಟಿ ಮಾಡಲು ಮುಂದಾಗಿದ್ದಾರೆ. ಇವರ ಯತ್ನವನ್ನು ರಾಜ್ಯದ ಜನ, ನಾವು ಒಪ್ಪುವುದಿಲ್ಲ. ನಾವು ಅತಿದೊಡ್ಡ ಪಕ್ಷವಾಗಿದ್ದೇವೆ.

 BS Yeddyurappa will form BJP Government

ನಮಗೆ ರಾಜ್ಯಪಾಲರು ಅವಕಾಶ ನೀಡುತ್ತಾರೆ. ಇದುವರೆಗೂ ಅವರಿಂದ ಆಹ್ವಾನ ಬಂದಿಲ್ಲ. ಇಂದುಶಾಸಕಾಂಗ ಪಕ್ಷದನಾಯಕರು ಮನವಿ ಸಲ್ಲಿಸಿದ ಮೇಲೆ‌ ಮುಂದಿನ ಬೆಳವಣಿಗೆ ನಡೆಯಲಿದೆ ಎಂದಿದ್ದಾರೆ. ನಾವು ಯಡಿಯೂರಪ್ಪ ನೇತೃತ್ವದಲ್ಲಿ ಸರ್ಕಾರ ರಚಿಸುತ್ತೇವೆ. ಆಮೇಲೆ ಸರ್ಕಾರ ಉಳಿಸಿಕೊಳ್ಳುವ ಪ್ರಯತ್ನ ನಡೆಯಲಿದೆ ಎಂದಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+