ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮಂಗಳವಾರದಿಂದ ಲಾಕ್‌ಡೌನ್‌ ಇನ್ನಷ್ಟು ಕಠಿಣ: ಯಡಿಯೂರಪ್ಪ ಎಚ್ಚರಿಕೆ

|
Google Oneindia Kannada News

ಬೆಂಗಳೂರು, ಏಪ್ರಿಲ್ 7: ಏಪ್ರಿಲ್ 14ರ ನಂತರ ಕರ್ನಾಟಕ ರಾಜ್ಯದಲ್ಲಿ ಸೇರಿದಂತೆ ದೇಶಾದ್ಯಂತ ಲಾಕ್‌ಡೌನ್‌ ಹಂತ ಹಂತವಾಗಿ ತೆರವುಗೊಳ್ಳುತ್ತೆ ಎಂಬ ನಿರೀಕ್ಷೆ ಮಾಡಲಾಗುತ್ತಿದೆ. ಈ ಬಗ್ಗೆ ಇದುವರೆಗೂ ಕೇಂದ್ರ ಸರ್ಕಾರ ಆಗಲಿ ಅಥವಾ ರಾಜ್ಯ ಸರ್ಕಾರ ಆಗಲಿ ಸ್ಪಷ್ಟ ಮಾಹಿತಿ ನೀಡಿರಲಿಲ್ಲ.

Recommended Video

ದೀಪ ಬೆಳಗಿದ ಸುದೀಪ್..! ಮಂತ್ರ ಹೇಳಿದ ಜಗ್ಗೇಶ್..! | Kichcha Sudeep | Jaggesh

ಆದ್ರೀಗ, ಕರ್ನಾಟಕ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಲಾಕ್‌ಡೌನ್‌ ಕುರಿತು ಜನರ ವಿರುದ್ಧ ಸಿಟ್ಟಿಗೆದ್ದಿದ್ದು, ಮಂಗಳವಾರದಿಂದ ರಾಜ್ಯದಲ್ಲಿ ಲಾಕ್‌ಡೌನ್‌ ಮತ್ತಷ್ಟು ಕಠಿಣವಾಗಲಿದೆ ಎಂದಿದ್ದಾರೆ.

ಲಾಕ್‌ಡೌನ್: ಇನ್ಮುಂದೆ ಬೀದಿಗೆ ಬಂದರೆ ಲಾಕ್‌ಡೌನ್: ಇನ್ಮುಂದೆ ಬೀದಿಗೆ ಬಂದರೆ "ಲಾಠಿ ಬದಲು ಕೇಸ್' ಬೀಳುತ್ತೆ ಹುಷಾರ್!

ಕೊರೊನಾ ವೈರಸ್‌ ಹರಡುವಿಕೆ ನಿಯಂತ್ರಿಸಲು ಲಾಕ್‌ಡೌನ್‌ ಮಾಡಿದ್ದರೂ ಜನರು ಅನಗತ್ಯ ಓಡಾಟವನ್ನು ನಿಲ್ಲಿಸುತ್ತಿಲ್ಲ. ಮಂಗಳವಾರದಿಂದ ಲಾಕ್ ಡೌನ್ ನಿಯಮ ಇನ್ನಷ್ಟು ಬಿಗಿಗೊಳಿಸುತ್ತೇವೆ. ಬಂದೋಬಸ್ತ್ ಹೆಚ್ಚಿಸಿ ಕಠಿಣ ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ಸೂಚಿಸಿದ್ದೇನೆ ಎಂದು ಕರ್ನಾಟಕದ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಹೇಳಿದ್ದಾರೆ.

BS Yediyurappa Gave Strong Warning To People Who Break The Rule Of Lockdown

ಈ ಹಿಂದೆಯೂ ಸಿಎಂ ಲಾಕ್‌ಡೌನ್‌ ಕುರಿತು ಜನರಿಗೆ ಎಚ್ಚರಿಕೆ ನೀಡಿದ್ದರು. ಅನಗತ್ಯವಾಗಿ ಓಡಾಡುವುದನ್ನು ನಿಲ್ಲಿಸಿ, ಲಾಕ್‌ಡೌನ್‌ಗೆ ನೀವು ಹೇಗೆ ನಡೆದುಕೊಳ್ಳುತ್ತೀರಾ ಎಂಬುದನ್ನು ನೋಡಿ, ಮುಂದಿನ ದಿನಗಳಲ್ಲಿ ಮುಂದುವರಿಸಬೇಕಾ ಅಥವಾ ತೆರೆವುಗೊಳಿಸಬೇಕಾ ಎಂದು ನಿರ್ಧರಿಸಲಾಗುತ್ತೆ ಎಂದಿದ್ದರು.

ಸದ್ಯದ ಪರಿಸ್ಥಿತಿ ನೋಡಿದ್ರೆ, ಲಾಕ್‌ಡೌನ್‌ ಏಪ್ರಿಲ್ 14ರ ನಂತರವೂ ಮತ್ತಷ್ಟು ದಿನಗಳು ಮುಂದುವರಿಯ ಎಲ್ಲ ಲಕ್ಷಣಗಳು ಕಾಣುತ್ತಿದೆ. ಇದಕ್ಕೆ ರಾಜ್ಯ ಸರ್ಕಾರವೂ ಎಲ್ಲ ರೀತಿಯ ಸಿದ್ಧತೆ ಮಾಡಿಕೊಳ್ಳುತ್ತಿದೆ ಎಂಬುದನ್ನು ಯಡಿಯೂರಪ್ಪ ಅವರ ಈ ನಿರ್ಧಾರ ಗಮನಿಸಿದ್ರೆ ತಿಳಿಯುತ್ತಿದೆ.

'ಕೊರೊನಾ ಎಂದು ಕೋಮುಭಾವನೆ ಕೆರಳಿಸಿದರೆ ಸರಿ ಇರುವುದಿಲ್ಲ''ಕೊರೊನಾ ಎಂದು ಕೋಮುಭಾವನೆ ಕೆರಳಿಸಿದರೆ ಸರಿ ಇರುವುದಿಲ್ಲ'

ದೇಶದಲ್ಲಿ ಕೊರೊನಾ ಸೋಂಕು ಹರಡುವಿಕೆ ಹೆಚ್ಚಾಗುತ್ತಿರುವ ಕಾರಣ, ಲಾಕ್‌ಡೌನ್‌ ದಿನಗಳನ್ನು ಮತ್ತಷ್ಟು ದಿನ ಮುಂದುವರಿಸಬೇಕು ಎಂದು ತೆಲಂಗಾಣ ಮುಖ್ಯಮಂತ್ರಿ ಕೆಸಿ ಚಂದ್ರಶೇಖರ್ ರಾವ್, ಪ್ರಧಾನಿ ಮೋದಿಗೆ ಮನವಿ ಮಾಡಿದ್ದಾರೆ. ಇನ್ನು ಅಂಕಿ ಅಂಶಗಳನ್ನು ನೋಡುತ್ತಿದ್ದರೂ ಲಾಕ್‌ಡೌನ್‌ ಮುಂದುವರಿಸುವುದು ಅಗತ್ಯ ಎಂದು ಎಕ್ಸ್‌ಪರ್ಟ್‌ಗಳು ಅಭಿಪ್ರಾಯಪಟ್ಟಿದ್ದಾರೆ.

English summary
Karnataka Chief minister BS Yediyurappa gave strong warning to public who break the rule of Lockdown.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X