ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬಿಜೆಪಿ ಸಾಧನಾ ಭಾಷಣದಲ್ಲಿ ಭಾವುಕರಾದ ಸಿಎಂ ಯಡಿಯೂರಪ್ಪ

|
Google Oneindia Kannada News

ಬೆಂಗಳೂರು, ಜುಲೈ 24 : ಬಿಜೆಪಿ ಸಾಧನಾ ಭಾಷಣ ಮಾಡುವಾಗ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಭಾವುಕರಾದರು.

Recommended Video

ಕಣ್ಣೀರಿಡುತ್ತಲೇ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ |Oneindia Kannada

ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು ಇಂದಿಗೆ ಎರಡು ವರ್ಷಗಳಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಇಂದು ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

Breaking: ಮುಖ್ಯಮಂತ್ರಿ ಹುದ್ದೆಗೆ ರಾಜೀನಾಮೆ ಘೋಷಿಸಿದ ಯಡಿಯೂರಪ್ಪBreaking: ಮುಖ್ಯಮಂತ್ರಿ ಹುದ್ದೆಗೆ ರಾಜೀನಾಮೆ ಘೋಷಿಸಿದ ಯಡಿಯೂರಪ್ಪ

ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಬಿ.ಎಸ್.ಯಡಿಯೂರಪ್ಪ ಅವರು ಸೋಮವಾರ ಘೋಷಣೆ ಮಾಡಿದ್ದಾರೆ. ಕಾರ್ಯಕ್ರಮದಲ್ಲಿ ಮಾತನಾಡಿದ ಯಡಿಯೂರಪ್ಪ ಅವರು ಬಿಜೆಪಿ ಸಾಧನೆ ಕುರಿತು ಮಾತನಾಡಿದರು.

BS Yediyurappa Makes A Fiery Yet Emotional Speech At The Event Celebrating His Govts 2nd Anniversary

ಶಿಕಾರಿಪುರಿಂದ ಬಿಜೆಪಿಯೊಂದಿಗೆ ನಾನು ಬಂದಿದ್ದೇನೆ. ಶಿಕಾರಿಪುರದಲ್ಲಿ ಸಂಘದ ಪ್ರಚಾರಕನಾಗಿ ಕಾರ್ಯ ನಿರ್ವಹಿಸಿ, ಚುನಾವಣೆಯಲ್ಲಿ ಗೆದ್ದು, ಘಟಕದ ಅಧ್ಯಕ್ಷನಾಗಿ, ವಿಧಾನ ಸಭಾ ವಿಪಕ್ಷ ನಾಯಕನಾಗಿ, ಮುಖ್ಯಮಂತ್ರಿಯಾಗಿ ಪಕ್ಷದ ಬೇರೆ ಬೇರೆ ಹುದ್ದೆಗಳಲ್ಲಿ ಕೆಲಸ ಮಾಡಿ ಪಕ್ಷವನ್ನು ಕಟ್ಟಿ ಬೆಳೆಸಿದ್ದೇನೆ ಎಂಬ ತೃಪ್ತಿ ನನಗಿದೆ ಎಂದು ಹೇಳಿದರು.

ಶಿಕಾರಿಪುರದ ಜನ ನನ್ನನ್ನು ಏಳು ಬಾರಿ ಆಯ್ಕೆ ಮಾಡಿದ್ದಾರೆ. ರಾಷ್ಟ್ರೀಯ ನಾಯಕರು ನನ್ನನ್ನು ಬೆಂಬಲಿಸಿದ್ದಾರೆ. ಬಿಜೆಪಿ ನೀಡಿದ ಸ್ಥಾನಕ್ಕೆ, ಅವಕಾಶಕ್ಕೆ ನಾನು ಎಂದಿಗೂ ಋಣಿಯಾಗಿರುತ್ತೇನೆ ಎಂದು ತಿಳಿಸಿದರು.

ಸಂತೋಷದಿಂದ ಸಿಎಂ ಸ್ಥಾನಕ್ಕೆ ನಾನು ರಾಜೀನಾಮೆ ನೀಡುತ್ತೇನೆ ಎಂದು ಭಾವುಕರಾಗಿ ಹೇಳಿದ ಬಿಎಸ್​ವೈ, ಸಿಎಂ ಆಗಿ ಅಧಿಕಾರ ನಡೆಸಲು ಅವಕಾಶ ಮಾಡಿಕೊಟ್ಟಿದ್ದಕ್ಕೆ ಪ್ರಧಾನಿ ಮೋದಿ, ಅಮಿತ್ ಶಾ, ಜೆ.ಪಿ.ನಡ್ಡಾಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದರು.

75 ವರ್ಷ ದಾಟಿದ ನನಗೆ ಸಿಎಂ ಸ್ಥಾನವನ್ನು ನೀಡಿದ್ದರು. 2 ವರ್ಷ ಆಡಳಿತ ನಡೆಸಲು ಅವಕಾಶವನ್ನು ನೀಡಿದ್ದರು. ಕೇವಲ ಶಬ್ದಗಳಲ್ಲೇ ಅಭಿನಂದನೆ ಸಲ್ಲಿಸುವುದಕ್ಕೆ ಆಗಲ್ಲ ಎಂದು ಅಭಿಪ್ರಾಯಪಟ್ಟರು.

ರಾಜೀನಾಮೆ ನೀಡಲು ಯಡಿಯೂರಪ್ಪ ವಿಧಾನಸೌಧದಿಂದ ರಾಜಭವನಕ್ಕೆ 1.3 ಕಿ.ಮೀ ನಡೆದುಕೊಂಡು ಬರಲಿದ್ದಾರೆ. ಹೆಜ್ಜೆ ಹೆಜ್ಜೆಗೂ ಪೊಲೀಸ್ ಭದ್ರತೆ ಕಲ್ಪಿಸಲಾಗುತ್ತಿದೆ.

English summary
Karnataka Chief Minister BS Yediyurappa Makes A Fiery Yet Emotional Speech At The Event Celebrating His Govts 2nd Anniversary In Bengaluru.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X