ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬೆಂಗಳೂರು ಏರ್‌ಪೋರ್ಟ್‌ಲ್ಲಿ ಕೆಂಪೇಗೌಡರ ಪ್ರತಿಮೆ: ಬಿಎಸ್‌ವೈ ಭೂಮಿ ಪೂಜೆ

|
Google Oneindia Kannada News

ಬೆಂಗಳೂರು, ಜೂನ್ 27: ನಗರದ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಸ್ಥಾಪಿಸಲು ನಿರ್ಧರಿಸಲಾಗಿರುವ 108 ಅಡಿ ಎತ್ತರದ ನಾಡಪ್ರಭು ಕೆಂಪೇಗೌಡರ ಕಂಚಿನ ಪ್ರತಿಮೆ ಕಾಮಗಾರಿಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಇಂದು ಭೂಮಿ ಪೂಜೆ ನೆರವೇರಿಸಿದ್ದಾರೆ.

Recommended Video

Shivraj Singh Chouhan MP CM visits Mandya's melukote with family | Oneindia Kannada

ಬಳಿಕ ಸಿಎಂ ಯಡಿಯೂರಪ್ಪ ಮಾತನಾಡಿ, ಬೆಂಗಳೂರನ್ನು ಯೋಜನಾಬದ್ಧವಾಗಿ ಬೆಳೆಸಲು ಕೆಂಪೇಗೌಡರ ಕೊಡುಗೆ ಅಪಾರ, ನದಿ ಮೂಲ ಇಲ್ಲದ ಬೆಂಗಳೂರಿನಲ್ಲಿ ನೂರಾರು ಕೆರಗಳ ನಿರ್ಮಾಣ ಮಾಡಿದರು, ಬೆಂಗಳೂರು ನಗರವನ್ನು ಅತ್ಯಂತ ವೂಜ್ಞಾನಿಕವಾಗಿ ನಿರ್ಮಿಸಿದ್ದಾರೆ ಎಂದರು.

LIVE ಪ್ರಸಾರ: ಕೆಐಎಎಲ್ ನಲ್ಲಿ ಕೆಂಪೇಗೌಡ ಪ್ರತಿಮೆಗೆ ಭೂಮಿ ಪೂಜೆLIVE ಪ್ರಸಾರ: ಕೆಐಎಎಲ್ ನಲ್ಲಿ ಕೆಂಪೇಗೌಡ ಪ್ರತಿಮೆಗೆ ಭೂಮಿ ಪೂಜೆ

ಚಿಕ್ಕಪೇಟೆ, ಅಕ್ಕಿಪೇಟೆ ಸೇರಿದಂತೆ ಅಂದು ಕೆಂಪೇಗೌಡರು ನಿರ್ಮಾಣ ಮಾಡಿದ್ದ ಹಿನ್ನೆಲೆಯಲ್ಲಿ ಇಂದು ಇವೆಲ್ಲವೂ ವಾಣಿಜ್ಯ ಕೇಂದ್ರಗಳಾಗಿವೆ. ಬೆಂಗಳೂರು ನಗರದ ಅಭಿವೃದ್ಧಿಗೆ ಹಲವು ಕಾರ್ಯಕ್ರಮಗಳ ಅನುಷ್ಠಾನಕ್ಕೆ ಸರ್ಕಾರ ಶ್ರಮಿಸುತ್ತಿದೆ, ಮುಂದಿನ ಒಂದು ವರ್ಷದಲ್ಲಿ 108 ಅಡಿಯ ಪ್ರತಿಮೆ ನಿರ್ಮಿಸಿ ಅದರ ಉದ್ಘಾಟನೆಗೆ ಎಲ್ಲರನ್ನೂ ಕರೆಯೋಣ ಎಲ್ಲರೂ ಸೇರೋಣ ಎಂದು ಹೇಳಿದರು.

BS Yediyurappa Performed Bhoomi Pooja For Kempegowda Statue At Bengaluru Aiport

ಜೊತೆಗೆ ಇಂದು 23 ಎಕರೆ ವಿಸ್ತೀರ್ಣದಲ್ಲಿ ಸೆಂಟ್ರಲ್ ಪಾರ್ಕ್ ಕಾಮಗಾರಿಗೂ ಚಾಲನೆ ದೊರೆತಿದೆ.ಭೂಮಿಪೂಜೆ ನೆರೆವೇರಿದ ಒಂದೇ ವರ್ಷದಲ್ಲಿ ಇಡೀ ಕಾಮಗಾರಿಯನ್ನು ಮುಗಿಸಿ ಯೋಜನೆಯನ್ನು ರಾಷ್ಟ್ರಕ್ಕೆ ಸಮರ್ಪಣೆ ಮಾಡಲಾಗುವುದು. ಈ ಯೋಜನೆಗೆ ಒಟ್ಟು 78 ಕೋಟಿ ರೂಪಾಯಿ ವೆಚ್ಚವಾಗುತ್ತಿದದ್ದು, ಯೋಜನೆ ಪೂರ್ಣಗೊಂಡ ಬಳಿಕ ಕೆಂಪೇಗೌಡ ವಿಮಾನ ನಿಲ್ದಾಣ ಪ್ರಾಧಿಕಾರದವರೇ ನಿರ್ವಹಣೆ ಮಾಡಲಿದ್ದಾರೆ.

ಪ್ರತಿಮೆ ಎತ್ತರವನ್ನು ವೈಜ್ಞಾನಿಕವಾಗಿ 108 ಅಡಿಗೆ ನಿಗದಿ ಮಾಡಲಾಗಿದೆ.ವಿಧಾನಸೌಧ-ವಿಕಾಸಸೌಧ ನಡುವೆ ಸ್ಥಾಪಿಸಲಾಗಿರುವ ಮಹಾತ್ಮ ಗಾಂಧಿ, ಗುಜರಾತ್ ರಾಜ್ಯದ ನರ್ಮದಾ ನದಿ ತೀರದಲ್ಲಿನ ಸರ್ದಾರ್ ವಲ್ಲಭಬಾಯಿ ಪಟೇಲರ ಪ್ರತಿಮೆಯನ್ನು ತಯಾರಿಸಿರುವ ಖ್ಯಾತ ಶಿಲ್ಪಿ ರಾಮಸುತಾರ ಅವರೇ ಕೆಂಪೇಗೌಡರ ಪ್ರತಿಮೆ ವಿನ್ಯಾಸ ಸಿದ್ಧಪಡಿಸುತ್ತಿದ್ದಾರೆ. ಜತೆಗೆ ಕೆಂಪೇಗೌಡರು ಮತ್ತು ಬೆಂಗಳೂರಿನ ಇತಿಹಾಸಕ್ಕೆ ಚ್ಯುತಿ ಬಾರದಂತೆ ಐಡೆಕ್ ಸಂಸ್ಥೆ ಈ ಯೋಜನೆಯನ್ನು ರೂಪಿಸಿ ಅನುಷ್ಠಾನಗೊಳಿಸುತ್ತಿದೆ.

BS Yediyurappa Performed Bhoomi Pooja For Kempegowda Statue At Bengaluru Aiport

ತಮ್ಮ ಪ್ರಖರ ದೂರದೃಷ್ಟಿಯಿಂದ 500 ವರ್ಷಗಳ ಹಿಂದೆಯೇ ಎಲ್ಲ ಜಾತಿ ಧರ್ಮದವರಿಗೂ ಸಲ್ಲುವ ಬೆಂಗಳೂರಿನಂಥ ಆಧುನಿಕ ಮಹಾನಗರವನ್ನು ಕಟ್ಟಿದ ಮಹಾಪುರುಷನನ್ನು ಮುಂದಿನ ತಲೆಮಾರಿಗೂ ಪರಿಚಯಿಸಬೇಕೆಂಬ ಏಕೈಕ ಉದ್ದೇಶದಿಂದ ಈ ಸ್ಮಾರಕ ನಿರ್ಮಿಸಲಾಗುತ್ತಿದೆ.

ಇಂದಿನ ಕಾರ್ಯಕ್ರಮದಲ್ಲಿ ಸಚಿವರಾದ ಗೋಪಾಲಯ್ಯ, ಬೈರತಿ ಬಸವರಾಜು, ಸಂಸದ ಬಚ್ಚೇಗೌಡ, ಶಾಸಕ ಶರತ್ ಬಚ್ಚೇಗೌಡ, ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡ, ಡಿಸಿಎಂ ಗೋವಿಂದ ಕಾರಜೋಳ, ಕೇಂದ್ರ ಸಚಿವ ಸುರೇಶ್ ಅಂಗಡಿ, ಪವರ್ ಸ್ಟಾರ್ ಪುನಿತ್ ರಾಜ್‌ಕುಮಾರ್, ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಉಪಸ್ಥಿತರಿದ್ದರು.

English summary
The Work On The 108 Feet Tall Kempegowda Statue Begin On Saturday. Karnataka Chief Minister BS Yediyurappa Permormed Bhoomi Pooja at Kempegowda International Airport.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X