ಸಿಎಂ ಸ್ವಾರ್ಥಕ್ಕಾಗಿ ಕಾನೂನು ಸುವ್ಯವಸ್ಥೆಯೊಂದಿಗೆ ಚೆಲ್ಲಾಟ: ಬಿಎಸ್ ವೈ
ಬೆಂಗಳೂರು, ಫೆಬ್ರವರಿ 02 : ಶಿವಾಜಿನಗರದ ಚಿನ್ನಪ್ಪ ಗಾರ್ಡನ್ ನಲ್ಲಿ ಬುಧವಾರ ಕೊಲೆಯಾದ ಬಿಜೆಪಿ ಕಾರ್ಯಕರ್ತ ಸಂತೋಷ ನಿವಾಸಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಅವರು ಶುಕ್ರವಾರ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.
ಮೃತ ಸಂತೋಷ್ ಕುಟುಂಬಕ್ಕೆ1 ಲಕ್ಷ ರೂ ಪರಿಹಾರ ನೀಡಿದರು. ಇದೇ ವೇಳೆ ಕುಟುಂಬಕ್ಕೆ ಕೆಲಸ ನೀಡುವುದಾಗಿ ಭರವಸೆ ನೀಡಿದರು. ಇದೇ ಮೃತ ಸಂತೋಷ್ ತಾಯಿ ಮಾತನಾಡಿ, ನಮ್ಮ ಮನೆ ಸುತ್ತ ಮುತ್ತಲ ಪ್ರದೇಶದಲ್ಲಿ ಮಹಿಳೆಯರಿಗೆ ಭದ್ರತೆ ಇಲ್ಲ, ಗಾಂಜಾ ಸೇವನೆ ತಡೆಯಲು ಹೋದವನಿಗೆ ಎಂತಹ ದುರ್ಗತಿ ಬಂದಿದೆ. ನಮ್ಮ ಕುಟುಂಬಕ್ಕೆ ಭದ್ರತೆ ನೀಡಬೇಕು ಎಂದು ಮನವಿ ಮಾಡಿದರು.

ಇದೇ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಬಿಎಸ್ ಯಡಿಯೂರಪ್ಪ ಅವರು, ರಾಜ್ಯದಲ್ಲಿ ಕಾನೂನು ವ್ಯವಸ್ಥೆ ಹದಗೆಟ್ಟಿದೆ. ಗೃಹ ಸಚಿವ ರಾಮಲಿಂಗಾರೆಡ್ಡಿ ಅವರು ಜನರ ಜೀವನದಲ್ಲಿ ಚೆಲ್ಲಾಟವಾಡುತ್ತಿದ್ದಾರೆ. ಬೇಜವಾಬ್ದಾರಿ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಸಿದ್ದರಾಮಯ್ಯ ಅವರ ಮನಸ್ಸಿನಲ್ಲಿ ಏನಿದೆ ಎಂದು ತಿಳಿದಿಲ್ಲ, ತಮ್ಮ ಸ್ವಾರ್ಥಕ್ಕಾಗಿ ಕಾನೂನು ಸುವ್ಯವಸ್ಥೆ ಜತೆಗೆ ಆಟವಾಡುತ್ತಿದ್ದಾರೆ. ಸಂತೋಷ್ ಅನ್ಯಾಯದ ವಿರುದ್ಧ ಮಾತನಾಡಿದ್ದಕ್ಕಾಗಿ ಕೊಲೆಯಾಗಿದ್ದಾನೆ. ಸರ್ಕಾರ ಮೃತ ಸಂತೋಷ್ ಕುಟುಂಬಕ್ಕೆ ಸರ್ಕಾರಿ ಉದ್ಯೋಗ ನೀಡಲಿ ಎಂದು ಆಗ್ರಹಿಸಿದರು.












Click it and Unblock the Notifications