• search
 • Live TV
ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಯಡಿಯೂರಪ್ಪ ಸರ್ಕಾರದ ಸಂಪುಟ ವಿಸ್ತರಣೆ ದಿನಾಂಕ ಬಹುತೇಕ ಪಕ್ಕಾ

|
   ಯಡಿಯೂರಪ್ಪ ಸರ್ಕಾರದ ಸಂಪುಟ ವಿಸ್ತರಣೆ ದಿನಾಂಕ ಬಹುತೇಕ ಪಕ್ಕಾ B. S. Yeddyurappa | Oneindia Kannada

   ಬೆಂಗಳೂರು, ಆಗಸ್ಟ್ 2: ಬಿಎಸ್ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರದ ಸಂಪುಟ ವಿಸ್ತರಣೆ ದಿನಾಂಕ ನಿಗದಿಯಾಗಿದೆ ಎನ್ನುವ ಮಾಹಿತಿ ಉನ್ನತ ಮೂಲಗಳಿಂದ ಲಭ್ಯವಾಗಿದೆ.

   ಸರ್ಕಾರ ರಚನೆಯಾಗಿ ಒಂದು ವಾರ ಕಳೆದರೂ ಇನ್ನೂ ಸಂಪುಟ ವಿಸ್ತರಣೆಯಾಗಿಲ್ಲ ಎನ್ನುವ ಮಾತುಗಳು ಕೇಳಿಬಂದಿತ್ತು. ಒಟ್ಟು ಎರಡು ಹಂತದಲ್ಲಿ ಸಂಪುಟ ವಿಸ್ತರಣೆ ಮಾಡುತ್ತಿರುವ ಕುರಿತು ಮಾಹಿತಿ ಲಭ್ಯವಾಗಿತ್ತು.

   ಯಡಿಯೂರಪ್ಪ ಸಂಪುಟ : ಉಪ ಮುಖ್ಯಮಂತ್ರಿ ಹುದ್ದೆ ಇಲ್ಲಯಡಿಯೂರಪ್ಪ ಸಂಪುಟ : ಉಪ ಮುಖ್ಯಮಂತ್ರಿ ಹುದ್ದೆ ಇಲ್ಲ

   ಆದರೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ದೆಹಲಿಗೆ ಹೋಗಿ ಅಲ್ಲಿ ಅಮಿತ್ ಷಾ ಜೊತೆ ಮಾತನಾಡಿ, ದಿನಾಂಕ ನಿಗದಿ ಮಾಡುತ್ತಾರೆ, ಸಂಪುಟಕ್ಕೆ ಯಾರ್ಯಾರನ್ನು ಸೇರಿಸಿಕೊಳ್ಳಬೇಕು ಎನ್ನುವ ಕುರಿತು ಚರ್ಚೆ ನಡೆಸುತ್ತಾರೆ ಎನ್ನಲಾಗಿತ್ತು.

   ಯಡಿಯೂರಪ್ಪ ದೆಹಲಿಗೆ ಹೋಗುವುದು ಸತ್ಯವಾಗಿದ್ದರೂ ಕೂಡ ಆಗಸ್ಟ್ 8 ಅಥವಾ 9ರಂದು ಸಂಪುಟ ವಿಸ್ತರಣೆಯಾಗಲಿದೆ ಎಂಬ ಮಾಹಿತಿ ಲಭ್ಯವಾಗಿದೆ.

   ಆಗಸ್ಟ್ 9ರಂದು ಸಚಿವ ಸಂಪುಟ ರಚನೆಗೆ ಗ್ರೀನ್ ಸಿಗ್ನಲ್ ನೀಡಿದ್ದಾರೆ. ಜೊತೆಗೆ ಸಂಪುಟ ರಚನೆಗೆ ಮುನ್ನ ಆಗಸ್ಟ್ 7ರಂದು ದೆಹಲಿಗೆ ಬರುವಂತೆ ಸೂಚನೆ ನೀಡಿದ್ದಾರೆ ಎಂದು ಮೂಲಗಳಿಂದ ಮಾಹಿತಿ ಲಭ್ಯವಾಗಿದೆ.

   ಆಗಸ್ಟ್‌ 5ರವರೆಗೆ ಯಡಿಯೂರಪ್ಪ ಸರ್ಕಾರದ ಸಂಪುಟ ವಿಸ್ತರಣೆ ಇಲ್ಲಆಗಸ್ಟ್‌ 5ರವರೆಗೆ ಯಡಿಯೂರಪ್ಪ ಸರ್ಕಾರದ ಸಂಪುಟ ವಿಸ್ತರಣೆ ಇಲ್ಲ

   ಸಚಿವ ಸ್ಥಾನವನ್ನು ಯಾರಿಗೆ ಕೊಡಬೇಕು, ಯಾರಿಗೆ ಕೊಡಬಾರದು ಎನ್ನುವ ನಿರ್ಧಾರ ಹೈಕಮಾಂಡ್‍ಗೆ ಬಿಟ್ಟಿದ್ದು ಎಂದು ಅಮಿತ್ ಶಾ ಅವರು, ಮಂತ್ರಿಗಿರಿ ಲಾಬಿ ಮಾಡುವವರಿಗೆ ಖಡಕ್ ಎಚ್ಚರಿಕೆ ನೀಡಿದ್ದಾರೆ. ಜೊತೆಗೆ ಜಿಲ್ಲಾವಾರು ಶಾಸಕರ ವರದಿಗಳನ್ನು ತರಿಸಿಕೊಂಡಿದ್ದಾರೆ.

   ಈ ಮೂಲಕ ಯಡಿಯೂರಪ್ಪನವರ ಕೈಯಲ್ಲಿರುವ ಎರಡು ಪಟ್ಟಿಗಳನ್ನು ತಾಳೆ ಮಾಡಿ ಅಂತಿಮ ಲಿಸ್ಟ್ ಸಿದ್ಧಗೊಳಿಸಲಿದ್ದಾರೆ. ಇದೇ ತಿಂಗಳ 8 ಅಥವಾ 9 ರಂದು ಸಚಿವ ಸಂಪುಟ ರಚನೆ ಸಾಧ್ಯತೆ ಇದೆ ಎನ್ನುವ ಮಾಹಿತಿ ಲಭ್ಯವಾಗಿದೆ.

   English summary
   Chief Minister BS Yeddyurappa Cabinet Expansion date Almost Fixed. August 8 or 9 cabinet expansion will be held.
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X