ಪರ್ಸೆಂಟೇಜ್ ಸರ್ಕಾರದ ವಿರುದ್ಧ ಮೋದಿ ಟೀಕೆಗೆ ಜನತೆ ಒಪ್ಪಿಗೆ
Recommended Video

ಬೆಂಗಳೂರು, ಫೆಬ್ರವರಿ 06 : ರಾಜ್ಯ ಕಾಂಗ್ರೆಸ್ ಸರ್ಕಾರವನ್ನು 10 ಪರ್ಸೆಂಟ್ ಕಮಿಷನ್ ಸರ್ಕಾರ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಟೀಕೆಯನ್ನು ರಾಜ್ಯದ ಜನತೆ ಮುಕ್ತಕಂಠದಿಂದ ಪ್ರಶಂಸಿಸಿ ಅನುಮೋದಿಸಿದ್ದಾರೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಬಣ್ಣಿಸಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಸಿದ್ದರಾಮಯ್ಯ ಸರ್ಕಾರದ ಭ್ರಷ್ಟಾಚಾರಕ್ಕೆ ಕನ್ನಡಿ ಹಿಡಿಯುವಂತೆ 10 ಪರ್ಸೆಂಟ್ ಕಮಿಷನ್ ಸರ್ಕಾರ ಎಂದು ಪ್ರಧಾನಿ ನರೇಂದ್ರ ಮೋದಿಯವರು ಪರಿವರ್ತನಾ ಸಮಾವೇಶದಲ್ಲಿ ಕಟುವಾಗಿ ಟೀಕಿಸಿದ್ದರು.
ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದ ಸಿದ್ದಾರಮಯ್ಯ ಅವರಿಗೆ ರಾಜ್ಯದ ಜನತೆ ತಕ್ಕ ಉತ್ತರ ನೀಡಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.

ಖಾಸಗಿ ಸುದ್ದಿವಾಹಿನಿ ನಡೆಸಿದ ಸಮೀಕ್ಷೆಯಿಂದ ಇದು ವಿವಾದತೀತವಾಗಿ ಸಾಬೀತಾಗಿದೆ. ಶೇ.73 ಕ್ಕೂ ಹೆಚ್ಚು ಜನರು ಸಿದ್ದರಾಮಯ್ಯ ಸರ್ಕಾರ ಕಮಿಷನ್ ಸರ್ಕಾರ ಎಂದು ಹೇಳಿದ್ದಾರೆ. ವಾಸ್ತವ ಸಂಗತಿಯನ್ನು ಸಾಬೀತು ಮಾಡಿದ ಈ ಸಮೀಕ್ಷೆಯನ್ನು ನಾನು ಸ್ವಾಗತಿಸುತ್ತೇನೆ ಎಂದಿದ್ದಾರೆ.
ಇನ್ನಾದರೂ ಮುಖ್ಯಮಂತ್ರಿ ಸಿದ್ದರಾಮಮಯ್ಯ ಅವರು ಜನತಲ್ಲಿರುವ ಆಕ್ರೋಶವನ್ನು ಅರ್ಥಮಾಡಿಕೊಂಡು ಸ್ವಲ್ಪ ಜವಾಬ್ದಾರಿಯಿಂದ ಮಾತನಾಡಲಿ. ಸಿದ್ದರಾಮಯ್ಯ ಸರ್ಕಾರ ಭ್ರಷ್ಟಾಚಾರದ ಎಲ್ಲಾ ದಾಖಲೆಗಳನ್ನು ಮುರಿದಿದೆ. ಶೇ.20 ರಿಂದ 30 ಕಮಿಷನ್ ನೀಡದೆ ಇಲ್ಲಿ ಯಾವ ಕೆಲಸವೂ ನಡೆಯುವುದಿಲ್ಲ. ಪ್ರಧಾನಿ ಮೋದಿಯವರು ಕನಿಷ್ಟ 10 ಪರ್ಸೆಂಟ್ ಕಮಿಷನ್ ಸರ್ಕಾರ ಎಂದು ಹೇಳಿದ್ದಾರೆ.. ಜನರ ಈ ಸರ್ಕಾರದ ಭ್ರಷ್ಟಾಚಾರದಿಂದ ರೋಸಿ ಹೋಗಿದ್ದಾರೆ ಬದಲಾವಣೆ ಬಯಸುತ್ತಿದ್ದಾರೆ ಎಂದು ಹೇಳಿದ್ದಾರೆ.












Click it and Unblock the Notifications