ವಿಧಾನಸೌಧದ ಸಿಬ್ಬಂದಿಗೆ ಬಿಸಿ ಮುಟ್ಟಿಸಿದ ಸಿಎಂ ಯಡಿಯೂರಪ್ಪ

Recommended Video

      ವಿಧಾನಸೌಧದ ಕಚೇರಿಗೆ ಬಿಎಸ್‍ವೈ ದಿಢೀರ್ ಭೇಟಿ | Oneindia Kannada

      ಬೆಂಗಳೂರು, ಆಗಸ್ಟ್ 1: ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ವಿಧಾನಸೌಧ ಸ್ವೀಕೃತಿ ಶಾಖೆಗೆ
      ದಿಢೀರ್ ಭೇಟಿ ನೀಡಿ ಸಿಬ್ಬಂದಿಗಳಿಗೆ ಶಾಕ್ ನೀಡಿದ್ದಾರೆ.

      ಸಮಯಕ್ಕೆ ಸರಿಯಾಗಿ ಕಚೇರಿಗೆ ಬಾರದ ಸಿಬ್ಬಂದಿಗೆ ತರಾಟೆ ತೆಗೆದುಕೊಂಡಿದ್ದು ಆಡಳಿತ ಯಂತ್ರ ಚುರುಕುಗೊಳಿಸಲು ಪ್ರಯತ್ನ ಮಾಡಿದ್ದಾರೆ.

      ಕೇವಲ ಭೇಟಿ ನೀಡಿದ್ದಷ್ಟೆ ಅಲ್ಲದೆ ಸಿಬ್ಬಂದಿಗಳ ಬೆಂಡೆತ್ತಿದ್ದಾರೆ. ಸ್ವಲ್ಪ ಸುಳಿವು ಇಲ್ಲದೆಯೇ ಏಕಾಏಕಿ ಕಚೇರಿಗಳಿಗೆ ಭೇಟಿ ನೀಡಿದ್ದಾರೆ. ಸರಿಯಾದ ಸಮಯದಲ್ಲಿ ಕಚೇರಿಗೆ ಬರದ ಸಿಬ್ಬಂದಿ ಬಗ್ಗೆ ತರಾಟೆ ತೆಗೆದುಕೊಂಡಿದ್ದಾರೆ.

      ನಾಳೆಯಿಂದ ಸರಿಯಾದ ಸಮಯಕ್ಕೆ ಬರಬೇಕು, ಒಂದೊಮ್ಮೆ ತಡವಾದರೆ ಅಂತಹ ಸಿಬ್ಬಂದಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.

      BSY Sudden Visit To Vidhana Soudha

      ವಿಧಾನ ಸೌಧದ ನೆಲಮಹಡಿಯಲ್ಲಿರುವ ಸ್ವೀಕೃತಿ ಮತ್ತು ರವಾನೆ ಶಾಖೆಗೆ ದಿಢೀರ್ ಭೇಟಿ ನೀಡಿದ ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪ ಅವರು ಸರ್ಕಾರಿ ಕೆಲಸದ ವೇಳೆಯಲ್ಲಿ ಎಲ್ಲ ಸಿಬ್ಬಂದಿಗಳು ಕಡ್ಡಾಯವಾಗಿ ಕಚೇರಿಯಲ್ಲಿ ಹಾಜರಿರಬೇಕೆಂಬ ಸೂಚನೆಯನ್ನು ನೀಡುವುದರ ಮೂಲಕ ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸಿದರು.

      ಯಡಿಯೂರಪ್ಪ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿ ಒಂದು ವಾರವಾಗುತ್ತಿದೆ.ತಮ್ಮ ಕೆಲಸ ಆರಂಭಿಸಿದ್ದಾರೆ.

      ಆಗಸ್ಟ್ 5 ರ ನಂತರ ಸಂಪುಟ ವಿಸ್ತರಣೆ ಮಾಡಲಿದ್ದು, ಎರಡು ಹಂತಗಳಲ್ಲಿ ಸಂಪುಟ ವಿಸ್ತರಣೆ ನಡೆಯಲಿದೆ ಎಂಬ ಮಾಹಿತಿ ಲಭ್ಯವಾಗಿದೆ. ಅಂದು ಯಡಿಯೂರಪ್ಪ ದೆಹಲಿಗೆ ತೆರಳಲಿದ್ದು, ಅಮಿತ್ ಷಾ ಜೊತೆ ಚರ್ಚಿಸಲಿದ್ದಾರೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+