ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಗುರುವಾರ ರಾಜ್ಯಪಾಲರ ಬಳಿ ಹಕ್ಕು ಮಂಡಿಸಲಿರುವ ಯಡಿಯೂರಪ್ಪ

|
Google Oneindia Kannada News

ಬೆಂಗಳೂರು, ಜುಲೈ 24: ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಗುರುವಾರ(ಜುಲೈ 25) ರಾಜ್ಯಪಾಲರನ್ನು ಭೇಟಿಯಾಗಿ ಹಕ್ಕು ಮಂಡಿಸಲಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಗುರುವಾರ ಮಧ್ಯಾಹ್ನ 3.48ಕ್ಕೆ ರಾಜ್ಯಪಾಲರು ಸಮಯ ನಿಗಧಿ ಮಾಡಿದ್ದು, ಯಡಿಯೂರಪ್ಪ ಅವರು ಸರ್ಕಾರ ರಚನೆ ಹಕ್ಕು ಪ್ರತಿಪಾಲಿಸಲಿದ್ದಾರೆ.ನಾವು ಸರ್ಕಾರ ರಚನೆ ಮಾಡುತ್ತೇವೆ, ಸರ್ಕಾರ ರಚನೆ ಮಾಡುವಷ್ಟು ಸಂಖ್ಯಾಬಲವಿದೆ ಎಂದು ನಾಳೆ ರಾಜ್ಯಪಾಲರ ಎದುರು ತಿಳಿಸಲಿದ್ದಾರೆ.

ಯಡಿಯೂರಪ್ಪ ಗದ್ದುಗೆಗೆ ಏರಲು ನಾಲ್ಕು ಮುಹೂರ್ತ ಫಿಕ್ಸ್! ಯಡಿಯೂರಪ್ಪ ಗದ್ದುಗೆಗೆ ಏರಲು ನಾಲ್ಕು ಮುಹೂರ್ತ ಫಿಕ್ಸ್!

ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲು ಗುರುವಾರ ಎರಡು ಹಾಗೂ ಶುಕ್ರವಾರ ಎರಡು ಒಟ್ಟು ನಾಲ್ಕು ಮುಹೂರ್ತಗಳನ್ನು ನಿಗದಿ ಮಾಡಲಾಗಿದೆ.

BSY will claim to form the government to governor

ಇನ್ನು ಯಡಿಯೂರಪ್ಪ ದೆಹಲಿ ಪ್ರವಾಸ ರದ್ದಾಗಿದೆ. ಅವರು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಬಳಿಕವೇ ದೆಹಲಿಗೆ ಬರುವಂತೆ ಬಿಜೆಪಿ ಹೈಕಮಾಂಡ್ ನಿರ್ದೇಶಿಸಿದೆ ಎನ್ನಲಾಗಿದೆ.

ಶಾಸಕಾಂಗ ಪಕ್ಷದ ನಾಯಕರನ್ನಾಗಿ ಯಡಿಯೂರಪ್ಪ ಅವರನ್ನು ಪುನರಾಯ್ಕೆ ಮಾಡಲಾಗುವುದು. ಜತೆಗೆ ಮಂತ್ರಿಮಂಡಲ ರಚನೆ ಹಾಗೂ ಅತೃಪ್ತ ಶಾಸಕರನ್ನು ಪಕ್ಷಕ್ಕೆ ಸೇರಿಸಿಕೊಂಡು ಅವರು ಸೂಕ್ತ ಸ್ಥಾನ ನೀಡುವ ಕುರಿತು ಸಹ ಚರ್ಚೆ ನಡೆಯುವ ಸಾಧ್ಯತೆ ಇದೆ.

ಯಡಿಯೂರಪ್ಪ ಅವರು ದೆಹಲಿಗೆ ತೆರಳಿ ಕೇಂದ್ರ ನಾಯಕರನ್ನು ಭೇಟಿ ಮಾಡುವುದು ಅನುಮಾನ. ಅವರು ದೂರವಾಣಿ ಮೂಲಕವೇ ಅವರ ಸಲಹೆಗಳನ್ನು ಪಡೆದುಕೊಳ್ಳಲಿದ್ದಾರೆ.

ಕುಮಾರಸ್ವಾಮಿ ಅವರು ರಾಜೀನಾಮೆ ನೀಡಿದ ಬಳಿ ಪಕ್ಷದ ಶಾಸಕರೊಂದಿಗೆ ಯಡಿಯೂರಪ್ಪ ಅವರು ರಾತ್ರಿ ಸಭೆ ನಡೆಸಿದ್ದರು.

ಅಧಿವೇಶನ ಆರಂಭವಾಗುವ ಮುಂಚೆಯಿಂದಲೇ ರಮಾಡ ರೆಸಾರ್ಟ್‌ನಲ್ಲಿ ಸೇರಿದ್ದ ಬಿಜೆಪಿ ಶಾಸಕರು ಮಂಗಳವಾರ ರಾತ್ರಿಯೇ ತಮ್ಮ ಕೊಠಡಿಗಳನ್ನು ಖಾಲಿ ಮಾಡಿದ್ದಾರೆ.

English summary
BJP leader BS Yeddyurappa will meet governor tomorrow and claim the government formation.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X