ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ರೊಹಿಂಗ್ಯಾ ಮುಸ್ಲಿಮರ ಹೇಳಿಕೆ: ತೇಜಸ್ವಿ ಸೂರ್ಯಗೆ ರಾಮಲಿಂಗಾ ರೆಡ್ಡಿ ತಿರುಗೇಟು

|
Google Oneindia Kannada News

ಬೆಂಗಳೂರು, ಡಿಸೆಂಬರ್ 11: ಬೆಂಗಳೂರಿನ ಬಿಟಿಎಂ ಲೇಔಟ್‌ನಲ್ಲಿರುವ ರೊಹಿಂಗ್ಯಾ ಮುಸ್ಲಿಮರು ಅಕ್ರಮವಾಗಿ ಮತದಾರರ ಗುರುತಿನ ಚೀಟಿಗಳನ್ನು ಪಡೆಯುತ್ತಿದ್ದಾರೆ ಎಂಬ ಬೆಂಗಳೂರು ದಕ್ಷಿಣ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ಅವರ ಹೇಳಿಕೆಗೆ ಬಿಟಿಎಂ ಲೇಔಟ್ ಶಾಸಕ ರಾಮಲಿಂಗಾ ರೆಡ್ಡಿ ತಿರುಗೇಟು ನೀಡಿದ್ದಾರೆ.

ರಾಜ್ಯದಲ್ಲಿ ಮತ್ತು ಕೇಂದ್ರದಲ್ಲಿ ನಿಮ್ಮ ಬಿಜೆಪಿ ಸರ್ಕಾರವೇ ಅಧಿಕಾರದಲ್ಲಿದೆ. ಅಂತಹ ಅಕ್ರಮ ಚಟುವಟಿಕೆಗಳ ವಿರುದ್ಧ ಕ್ರಮ ತೆಗೆದುಕೊಳ್ಳಲು ನಿಮ್ಮಿಂದ ಏಕೆ ಸಾಧ್ಯವಾಗಿಲ್ಲ ಎಂದು ಕಾಂಗ್ರೆಸ್ ಮುಖಂಡ ರಾಮಲಿಂಗಾ ರೆಡ್ಡಿ ಪ್ರಶ್ನಿಸಿದ್ದಾರೆ.

ರೊಹಿಂಗ್ಯಾ ನಿರಾಶ್ರಿತರಿಗೆ ಹೊಸ ಜಾಗ ಹುಡುಕಿದ ಬಾಂಗ್ಲಾದೇಶರೊಹಿಂಗ್ಯಾ ನಿರಾಶ್ರಿತರಿಗೆ ಹೊಸ ಜಾಗ ಹುಡುಕಿದ ಬಾಂಗ್ಲಾದೇಶ

'ನಮ್ಮ ಇಂದಿನ ಸಭೆಯಲ್ಲಿ, ರೊಹಿಂಗ್ಯಾ ಮುಸ್ಲಿಮರು ಅಕ್ರಮವಾಗಿ ಮತದಾರರ ಗುರುತಿನ ಚೀಟಿಗಳನ್ನು ಪಡೆದುಕೊಳ್ಳುತ್ತಿದ್ದಾರೆ ಎಂಬ ವಿಚಾರವನ್ನು ಅನೇಕ ನಾಗರಿಕರು ನಮ್ಮ ಗಮನಕ್ಕೆ ತಂದಿದ್ದಾರೆ. ಮತದಾರರ ಪಟ್ಟಿಯನ್ನು ಪರಿಶೀಲಿಸುವಂತೆ ಮತ್ತು ಬಿಟಿಎಂ ಲೇಔಟ್‌ನಲ್ಲಿ ನೈಜ ಮತದಾರರಿಗೆ ಮಾತ್ರ ವೋಟರ್ ಐಡಿ ವಿತರಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇವೆ' ಎಂದು ತೇಜಸ್ವಿ ಸೂರ್ಯ ಗುರುವಾರ ಟ್ವೀಟ್ ಮಾಡಿದ್ದರು.

BTM Layout Congress MLA Ramalinga Reddy Hits Back At Tejasvi Surya Over Rohingya Muslims Remark

ಪಶ್ಚಿಮ ಬಂಗಾಳದಲ್ಲಿ ತೇಜಸ್ವಿ ಸೂರ್ಯ ಪ್ರತಿಭಟನೆ: ಹಿಂಸಾಚಾರದಲ್ಲಿ ಒಬ್ಬರ ಸಾವು ಪಶ್ಚಿಮ ಬಂಗಾಳದಲ್ಲಿ ತೇಜಸ್ವಿ ಸೂರ್ಯ ಪ್ರತಿಭಟನೆ: ಹಿಂಸಾಚಾರದಲ್ಲಿ ಒಬ್ಬರ ಸಾವು

ಈ ಟ್ವೀಟ್ ಅನ್ನು ಹಂಚಿಕೊಂಡಿರುವ ರಾಮಲಿಂಗಾ ರೆಡ್ಡಿ, 'ನೀವು ಬಿಟಿಎಂನಲ್ಲಿ ರೊಹಿಂಗ್ಯಾ ಮುಸ್ಲಿಮರು ಮತದಾರರ ಐಡಿ ಪಡೆಯುತ್ತಿದ್ದಾರೆ ಎಂದು ಮಾತನಾಡಿದ್ದಾರೆ. ರಾಜ್ಯದಲ್ಲಿ ಮತ್ತು ಕೇಂದ್ರದಲ್ಲಿ (ಆರು ವರ್ಷ) ನಿಮ್ಮ ಬಿಜೆಪಿ ಸರ್ಕಾರ ಅಧಿಕಾರದಲ್ಲಿದೆ. ಅಂತಹ ಅಕ್ರಮ ಚಟುವಟಿಕೆಗಳ ವಿರುದ್ಧ ಏಕೆ ಕಠಿಣ ಕ್ರಮ ತೆಗೆದುಕೊಳ್ಳುತ್ತಿಲ್ಲ? ಅವರನ್ನು ಜೈಲಿಗೆ ಹಾಕುವ ಅಥವಾ ಗಡಿಪಾರು ಮಾಡುವ ಉದ್ದೇಶಕ್ಕೆ ನಾನು ಸಂಪೂರ್ಣ ಬೆಂಬಲ ನೀಡುತ್ತೇನೆ. ನಿಮ್ಮ ಸರ್ಕಾರ ಅದನ್ನು ಮಾಡುವಂತೆ ಮಾಡಿ' ಎಂದು ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ.

English summary
BTM Layout Congress MLA Ramalinga Reddy on Friday hits back at BJP MP Tejasvi Surya on his remark of Rohingya Muslims obtaining voter ID illegally.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X