ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ನವೆಂಬರ್ 16ರಿಂದ ಬಿಟಿಎಸ್-25 ಬೆಳ್ಳಿಹಬ್ಬ: ಉದ್ಘಾಟನೆಗೆ ಪ್ರಧಾನಿಗೆ ಆಹ್ವಾನ

|
Google Oneindia Kannada News

ಬೆಂಗಳೂರು, ಜೂ. 8: ಜಾಗತಿಕ ಮಟ್ಟದಲ್ಲಿ ಗಮನ ಸೆಳೆದಿರುವ ಬೆಂಗಳೂರು ತಂತ್ರಜ್ಞಾನ ಶೃಂಗಸಭೆ'ಯ (ಬಿಟಿಎಸ್) 25ನೇ ವರ್ಷದ ಸಮಾವೇಶವನ್ನು ಅರ್ಥಪೂರ್ಣವಾಗಿ ಆಚರಿಸುವ ಉದ್ದೇಶದಿಂದ ಜಾಗತಿಕ ನಾವೀನ್ಯತಾ ಸಹಭಾಗಿ (ಜಿಐಎ) ರಾಷ್ಟ್ರಗಳ ಕಾನ್ಸುಲ್ ಜನರಲ್, ಡೆಪ್ಯುಟಿ ಕಾನ್ಸುಲ್ ಜನರಲ್ ಮತ್ತು ಗೌರವ ಕಾನ್ಸುಲ್ ಜನರಲ್ ಗಳೊಂದಿಗೆ ಐಟಿ-ಬಿಟಿ ಸಚಿವ ಡಾ.ಸಿ.ಎನ್ ಅಶ್ವತ್ಥ ನಾರಾಯಣ ಬುಧವಾರ ಸಮಾಲೋಚನೆ ನಡೆಸಿದರು.

ಬಿಟಿಎಸ್-25ರ ಭಾಗವಾಗಿರುವ ಜಾಗತಿಕ ನಾವೀನ್ಯತಾ ಸಹಭಾಗಿ (ಜಿಐಎ) ದೇಶಗಳನ್ನು ಆಹ್ವಾನಿಸಲು ಬುಧವಾರ ಕರೆದಿದ್ದ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಟಿಎಸ್-25 ಸಮಾವೇಶದ ಉದ್ಘಾಟನೆಗೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಆಹ್ವಾನಿಸಲಾಗುವುದು. ರಾಜ್ಯವು ಈಗಾಗಲೇ 30ಕ್ಕೂ ಹೆಚ್ಚು ಜಿಐಎ ಸಹಭಾಗಿಗಳನ್ನು ಹೊಂದಿದ್ದು, 50ಕ್ಕೂ ಹೆಚ್ಚು ಮಹತ್ವದ ಯೋಜನೆಗಳು ಪ್ರಗತಿಯಲ್ಲಿವೆ. ಮುಖ್ಯವಾಗಿ ಅಗ್ರಿಟೆಕ್, ಫಿನ್ಟೆಕ್, ಮೆಡ್-ಟೆಕ್, ಕೃತಕ ಬುದ್ಧಿಮತ್ತೆ, ಮಶೀನ್ ಲರ್ನಿಂಗ್ ಮತ್ತು ಇಂಟರ್ನೆಟ್ ಆಫ್ ಥಿಂಗ್ಸ್ (ಐಒಟಿ) ಕ್ಷೇತ್ರಗಳಲ್ಲಿ ನಾವೀನ್ಯತಾ ಸಹಭಾಗಿತ್ವದ ಒಡಂಬಡಿಕೆಗಳನ್ನು ಮಾಡಿಕೊಳ್ಳಲಾಗಿದೆ' ಎಂದು ಅವರು ತಿಳಿಸಿದರು.

25ನೇ ವರ್ಷದ ಬೆಂಗಳೂರು ತಂತ್ರಜ್ಞಾನ ಸಮಾವೇಶವು ಟೆಕ್4ನೆಕ್ಸ್-ಜೆನ್ ಘೋಷವಾಕ್ಯದೊಂದಿಗೆ ನ.16, 17 ಮತ್ತು 18ರಂದು ಇಲ್ಲಿನ ಅರಮನೆ ಮೈದಾನದಲ್ಲಿ ನಡೆಯಲಿದ್ದು, 48ಕ್ಕೂ ಹೆಚ್ವು ದೇಶಗಳು ಪಾಲ್ಗೊಳ್ಳಲಿವೆ.

ಎಕಾನಮಿ ಮಿಶನ್ ತರಹದ ಉಪಕ್ರಮ

ಎಕಾನಮಿ ಮಿಶನ್ ತರಹದ ಉಪಕ್ರಮ

ಈ ಸಂದರ್ಭದಲ್ಲಿ ಮಾತನಾಡಿದ ಸಚಿವರು, 'ಬೆಂಗಳೂರಿನಲ್ಲಿ ಈಗಾಗಲೇ 40 ಜಾಗತಿಕ ಸಾಮರ್ಥ್ಯ ಕೇಂದ್ರಗಳು (ಜಿಸಿಸಿ) ಇವೆ. ಇನ್ನೂ ಹೆಚ್ಚಿನ ಕಂಪನಿಗಳ ಇಂತಹ ಕೇಂದ್ರಗಳು ಇಲ್ಲಿ ಆರಂಭಗೊಳ್ಳಬೇಕು. ಇದಕ್ಕೆ ಪೂರಕವಾಗಿ ರಾಜ್ಯವು ಸ್ಟಾರ್ಟಪ್ ಕರ್ನಾಟಕ, ಇನ್ನೊವೇಟ್ ಕರ್ನಾಟಕ ಮತ್ತು ಕರ್ನಾಟಕ ಡಿಜಿಟಲ್ ಎಕಾನಮಿ ಮಿಶನ್ ತರಹದ ಉಪಕ್ರಮಗಳನ್ನು ಕೈಗೊಂಡಿದೆ'. ಅಭಿವೃದ್ಧಿ ವಿಚಾರದಲ್ಲಿ ಸುಸ್ಥಿರತೆ, ಕೈಗೆಟುಕುವಿಕೆ, ಪರಿಸರಸ್ನೇಹಿ ತಂತ್ರಜ್ಞಾನ ಮತ್ತು ಮಾಲಿನ್ಯರಹಿತತೆ ಇವುಗಳನ್ನು ಮರೆಯಬಾರದು ಎಂದು ಅವರು ಸಲಹೆ ನೀಡಿದರು.

ಕರ್ನಾಟಕದ ಜತೆ ಸಹಭಾಗಿತ್ವ

ಕರ್ನಾಟಕದ ಜತೆ ಸಹಭಾಗಿತ್ವ

ಈ ಸಂದರ್ಭದಲ್ಲಿ ನಾನಾ ದೇಶಗಳ ರಾಜತಾಂತ್ರಿಕ ಪ್ರತಿನಿಧಿಗಳು ಮಾತನಾಡಿ, ಸೈಬರ್ ಸೆಕ್ಯುರಿಟಿ, ಏರೋಸ್ಪೇಸ್, ರೋಬೋಟಿಕ್ಸ್, ಐಒಟಿ, ಅಗ್ರಿಟೆಕ್, ಫಿನ್ಟೆಕ್, ಮೆಡ್-ಟೆಕ್ ಮುಂತಾದ ಅತ್ಯಾಧುನಿಕ ಕ್ಷೇತ್ರಗಳಲ್ಲಿ ಕರ್ನಾಟಕದ ಜತೆ ಸಹಭಾಗಿತ್ವ ಸ್ಥಾಪನೆಗೆ ಒಲವು ವ್ಯಕ್ತಪಡಿಸಿದರು.

2017ರಲ್ಲೇ ಜಿಐಎ ಉಪಕ್ರಮ

2017ರಲ್ಲೇ ಜಿಐಎ ಉಪಕ್ರಮ

ಇದಕ್ಕೆ ಪೂರಕವಾಗಿ ಸ್ಪಂದಿಸಿದ ಸಚಿವರು, ಜಾಗತಿಕ ಮಟ್ಟದ ಕಂಪನಿಗಳೊಂದಿಗೆ ಸಹಭಾಗಿತ್ವ ಹೊಂದಲೆಂದೇ ಕರ್ನಾಟಕವು 2017ರಲ್ಲೇ ಜಿಐಎ ಉಪಕ್ರಮ ಆರಂಭಿಸಿದೆ. ತಂತ್ರಜ್ಞಾನ ದಲ್ಲಿ ಮುಂಚೂಣಿಯಲ್ಲಿ ಇರುವ ರಾಷ್ಟ್ರಗಳೊಂದಿಗೆ ಬಹುಪಕ್ಷೀಯ ಒಪ್ಪಂದ ಮಾಡಿಕೊಳ್ಳುವ ಮೂಲಕ ರಾಜ್ಯದ ಆರ್ಥಿಕತೆಯನ್ನು ಬಲಪಡಿಸುವುದು ಇದರ ಉದ್ದೇಶವಾಗಿದೆ. ಭಾರತದಲ್ಲಿರುವ 100 ಯೂನಿಕಾರ್ನ್ ಕಂಪನಿಗಳ ಪೈಕಿ 39 ಬೆಂಗಳೂರಿನಲ್ಲೇ ಇವೆ. ನಾವೀನ್ಯತಾ ಸಹಭಾಗಿತ್ವಕ್ಕೆ ಬೇಕಾದ ಸಂಶೋಧನೆ ಮತ್ತು ಅಭಿವೃದ್ಧಿ ಕಾರ್ಯ ಪರಿಸರವೂ ನಮ್ಮಲ್ಲಿದೆ. ಕಳೆದ ವರ್ಷ (2021-22) ಭಾರತಕ್ಕೆ 83.57 ಶತಕೋಟಿ ಡಾಲರ್ ವಿದೇಶಿ ನೇರ ಹೂಡಿಕೆ ಹರಿದುಬಂದಿದೆ. ಇದರಲ್ಲಿ ಶೇ.38ರಷ್ಟು ಹೂಡಿಕೆ ರಾಜ್ಯದಲ್ಲೇ ಆಗಿದೆ ಎಂದು ಅವರು ಹೇಳಿದರು.

ಕೆನಡಾದ ಬೆನೊಯ್ಟ್ ಪ್ರಿಫೊಂಟೈನ್ ಭಾಗಿ

ಕೆನಡಾದ ಬೆನೊಯ್ಟ್ ಪ್ರಿಫೊಂಟೈನ್ ಭಾಗಿ

ಪತ್ರಿಕಾಗೋಷ್ಠಿಯಲ್ಲಿ ರಾಜ್ಯ ಸರಕಾರದ ಐಟಿ ವಿಷನ್ ಗ್ರೂಪ್ ಮುಖ್ಯಸ್ಥ ಕ್ರಿಸ್ ಗೋಪಾಲಕೃಷ್ಣನ್, ಐಟಿ-ಬಿಟಿ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಇ.ವಿ.ರಮಣ ರೆಡ್ಡಿ, ಆಸ್ಟ್ರೇಲಿಯಾದ ಕಾನ್ಸುಲ್ ಜನರಲ್ ಸಾರಾ ಕಿರ್ಲ್ಯೂ, ಕೆನಡಾದ ಬೆನೊಯ್ಟ್ ಪ್ರಿಫೊಂಟೈನ್, ಡೆನ್ಮಾರ್ಕಿನ ಎಸ್ಕ್ ಬೋ ರೋಸನ್ಬರ್ಗ್, ಫಿನ್ಲೆಂಡಿನ ಮಿಕಾ ಟಿರೋನೆನ್, ಫ್ರಾನ್ಸಿನ ಥಿಯರಿ ಬರ್ತೆಲೋಟ್, ಜರ್ಮನಿಯ ಅಕಿಂ ಬರ್ಕಾರ್ಟ್, ಇಸ್ರೇಲಿನ ಟ್ಯಾಮಿ ಬೆನ್ಹೈಮ್, ಸ್ವಿಜರ್ಲೆಂಡಿನ ಜೋನಸ್ ಬ್ರುನ್ಸ್ವಿಗ್ ಮತ್ತು ಐನೈಟೆಡ್ ಕಿಂಗ್ಡಮ್ ನ ಅನ್ನಾ ಶಾಟ್ಬೋಲ್ಟ್ ಪಾಲ್ಗೊಂಡಿದ್ದರು.

Recommended Video

Suresh Kumar: ಹೊರಟ್ಟಿ ಗೆಲುವು ನಿಶ್ಚಿತ- ಶಿಕ್ಷಣ ಸಚಿವ ನಾಗೇಶ | OneIndia Kannada

English summary
The 25th Bangalore Technology Conference will be held at the Palace Ground here on November 16, 17 and 18 with the announcement of the Tech 4 Nex-Gen, which will be attended by 48 HV countries.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X