BTS2020:ಕೈಗಾರಿಕಾ ನೀತಿ ತಂದ ಮೊದಲ ರಾಜ್ಯ ಕರ್ನಾಟಕ- ಶೆಟ್ಟರ್
ಬೆಂಗಳೂರು ನ 19: ರಾಜ್ಯದಲ್ಲಿ ನೂತನ ಕೈಗಾರಿಕೆಗಳನ್ನು ಸೆಳೆಯುಲು ಹಾಗೂ ಕೈಗಾರಿಕೆಗಳ ಅಭಿವೃದ್ದಿಗೆ ಹೆಚ್ಚಿನ ಒತ್ತು ನೀಡುವ ಉದ್ದೇಶದಿಂದ ನಿರ್ದಿಷ್ಟ ವಲಯ ನೀತಿಗಳನ್ನು ಘೋಷಿಸಿರುವ ದೇಶದ ಮೊದಲ ರಾಜ್ಯವಾಗಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವರಾದ ಜಗದೀಶ ಶೆಟ್ಟರ್ ಹೇಳಿದರು.
ಬೆಂಗಳೂರು ತಂತ್ರಜ್ಞಾನ ಸಮಾವೇಶ 2020(BTS2020) ರ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಐಟಿ, ಬಿಟಿ, ಸ್ಟಾರ್ಟ ಅಪ್, ಎವಿಜಿಸಿ, ಈಎಸ್‌ಡಿಎಂ, ಎಲೆಕ್ಟ್ರಿಕ್ ವೆಹಿಕಲ್ ಹೀಗೆ ನಿರ್ದಿಷ್ಟ ವಲಯಕ್ಕೆ ಸಂಬಂಧಿಸಿದಂತೆ ಪ್ರತ್ಯೇಕ ನೀತಿಗಳನ್ನು ರೂಪಿಸಿದ ದೇಶದ ಮೊದಲ ರಾಜ್ಯವಾಗಿದೆ. ಈ ಮೂಲಕ ನಿರ್ದಿಷ್ಟ ಕೈಗಾರಿಕಾ ವಲಯ ಹಾಗೂ ಕ್ಷೇತ್ರಗಳ ಅಭಿವೃದ್ದಿಗೆ ಬೇಕಾದಂತಹ ಕ್ರಮಗಳನ್ನು ಈ ನೀತಿಗಳಲ್ಲಿ ಅಳವಡಿಸಿಕೊಳ್ಳುವ ಮೂಲಕ ಕೈಗಾರಿಕಾಭಿವೃದ್ದಿಗೆ ಅನುಕೂಲ ಮಾಡಿಕೊಡಲಾಗಿದೆ.
ಕರ್ನಾಟಕ ರಾಜ್ಯ ಕೈಗಾರಿಕಾ ಸ್ನೇಹಿ ಕ್ರಮಗಳನ್ನು ಅಳವಡಿಸಿಕೊಳ್ಳುವ ಮೂಲಕ ಕೈಗಾರಿಕಾಭಿವೃದ್ದಿಗೆ ಒತ್ತು ನೀಡುತ್ತಿದೆ. ನೂತನ ಕೈಗಾರಿಕಾ ನೀತಿ, ಕೈಗಾರಿಕಾ ಸೌಲಭ್ಯ ತಿದ್ದುಪಡಿ ಅಧಿನಿಯಮ ರಾಜ್ಯದಲ್ಲಿ ಕೈಗಾರಿಕೆಗಳ ಸ್ಥಾಪನೆಗೆ ಅನುಕೂಲವಾದಂತಹ ಪರಿಸರ ನಿರ್ಮಾಣಕ್ಕೆ ಒತ್ತು ನೀಡಿದೆ. ಇದರ ಪರಿಣಾಮ ಕೋವಿಡ್ ಸಂಕಷ್ಟದ ಸಮಯದಲ್ಲೂ ಕೂಡಾ ರಾಜ್ಯಕ್ಕೆ ಬಂಡವಾಳ ಹರಿದು ಬಂದಿದೆ. 64 ಯೋಜನೆಗಳ ಮೂಲಕ ರಾಜ್ಯದಲ್ಲಿ 1.16 ಲಕ್ಷ ರೂಪಾಯಿಗಳ ಬಂಡವಾಳ ಹೂಡಿಕೆಯಾಗಿದ್ದು, ದೇಶದ ಒಟ್ಟಾರೆ ಶೇಕಡಾ 42 ರಷ್ಟು ಬಂಡವಾಳವನ್ನು ರಾಜ್ಯ ಆಕರ್ಷಿಸಿದೆ.

ಇನ್ನೋವೇಷನ್ ಇಂಡೆಕ್ಸ್ ನಲ್ಲಿ ಮೊದಲ ಸ್ಥಾನ
ಇದಲ್ಲದೆ, ಪ್ರಧಾನಿ ನರೇಂದ್ರ ಮೋದಿ ಅವರ ಆಶಯದಂತೆ ಸ್ಥಳೀಯ ಸಂಪನ್ಮೂಲಗಳನ್ನು ಬಳಸಿಕೊಳ್ಳುವತ್ತ ಹೆಚ್ಚಿನ ಆದ್ಯತೆ ನೀಡಿದೆ. ದೇಶದ ಇನ್ನೋವೇಷನ್ ಇಂಡೆಕ್ಸ್ ನಲ್ಲಿ ಮೊದಲ ಸ್ಥಾನವನ್ನು ರಾಜ್ಯ ಹೊಂದಿದೆ. ಅಲ್ಲದೆ, ಬೆಂಗಳೂರು ನಗರ ದೇಶದ ಪ್ರಮುಖ ಸಂಶೋಧನೆ ಹಾಗೂ ಅಭಿವೃದ್ದಿಯ ಕೇಂದ್ರಗಳನ್ನು ಹೊಂದಿದೆ. ರಾಜ್ಯ ಸರಕಾರ ಪ್ರಾಡಕ್ಟ್ ಸ್ಪೆಸಿಫಿಕ್ ಇಂಡಸ್ಟ್ರೀಯಲ್ ಕ್ಲಸ್ಟರ್ ಡೆವಲಪ್‌ಮೆಂಟ್ ಪ್ರೋಗ್ರಾಮ್ ನ್ನು ಪ್ರಾರಂಭಿಸಿದ್ದು, ರಾಜ್ಯದ ಎರಡನೇ ಹಾಗೂ ಮೂರನೇ ಹಂತದ ನಗರಗಳಿಗೆ ಕೈಗಾರಿಕೆಗಳನ್ನು ಸೆಳೆಯಲು ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ ಎಂದು ಹೇಳಿದರು.
ಏಪ್ರಿಲ್ - ಜೂನ್ 2020 ರ ನಡುವೆ ರಾಜ್ಯ ಅತಿಹೆಚ್ಚು ವಿದೇಶಿ ಬಂಡವಾಳ ವನ್ನು ಆಕರ್ಷಿಸಿದೆ. ಇದು ರಾಜ್ಯ ಸರಕಾರ ಕೈಗಾರಿಕೆಗಳ ಅಭಿವೃದ್ದಿಗೆ ಕೈಗೊಂಡಿರುವ ಕ್ರಮಗಳ ಪರಿಣಾಮವಾಗಿದೆ ಎಂದು ಹೇಳಿದರು.

20 ಲಕ್ಷ ಉದ್ಯೋಗಾವಕಾಶಗಳನ್ನು ಕಲ್ಪಿಸುವ ನೀತಿ
ರಾಜ್ಯದಲ್ಲಿ 5 ಲಕ್ಷ ಕೋಟಿ ರೂಪಾಯಿಗಳ ಬಂಡವಾಳ ಆಕರ್ಷಣೆ, 20 ಲಕ್ಷ ಉದ್ಯೋಗಾವಕಾಶಗಳನ್ನು ಕಲ್ಪಿಸುವ ಹಾಗೂ ಕೈಗಾರಿಕಾಭಿವೃದ್ದಿಯಲ್ಲಿ ಹಿಂದುಳಿದ ಜಿಲ್ಲೆಗಳ ಅಭಿವೃದ್ದಿಗೆ ಅನುವು ಮಾಡಿಕೊಡುವಂತಹ ನೂತನ ಕೈಗಾರಿಕಾ ನೀತಿ 2020-25 ರಾಜ್ಯವನ್ನು ಇನ್ನಷ್ಟು ಕೈಗಾರಿಕಾ ಸ್ನೇಹಿ ಮಾಡುವತ್ತ ಪ್ರಮುಖ ಹೆಜ್ಜೆಯಾಗಿದೆ, ಇದಕ್ಕೆ ಸಚಿವ ಸಂಪುಟದ ಅನುಮೋದನೆ ದೊರೆತಿರುವುದು ಬಹಳ ಸಂತಸದ ವಿಷಯ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಜಗದೀಶ ಶೆಟ್ಟರ್ ತಿಳಿಸಿದರು.

ಮೂಲಸೌಕರ್ಯಗಳ ಅಭಿವೃದ್ಧಿಯತ್ತ ಗಮನ
ನೂತನ ಕೈಗಾರಿಕಾ ನೀತಿ 2020-25ರ ಗಮನವು ಕರ್ನಾಟಕ ಕೈಗಾರಿಕಾ ಶಕ್ತಿಯನ್ನು ಬಳಸಿಕೊಂಡು, ಕೈಗಾರೀಕರಣಕ್ಕಾಗಿ ಪರಿಸರವನ್ನು ಶಕ್ತಗೊಳಿಸುವುದು, ಮೂಲಸೌಕರ್ಯಗಳ ಅಭಿವೃದ್ಧಿ, ರಾಜ್ಯದ ಜನರಿಗೆ ವಿಶೇಷವಾಗಿ ಕೈಗಾರಿಕಾ ಅಭಿವೃದ್ಧಿಯಲ್ಲಿ ಹಿಂದುಳಿದ ಜಿಲ್ಲೆಗಳಲ್ಲಿ ಹಾಗೂ ಟಯರ್-2 & ಟಯರ್-3 ನಗರಗಳಲ್ಲಿ ಸಮಾನ ಅವಕಾಶಗಳನ್ನು ಒದಗಿಸುವುದು ಹಾಗೂ ಬಂಡವಾಳ ಹೂಡಿಕೆಯ ಅಭಿವೃದ್ಧಿಯನ್ನು ರಾಜ್ಯದಲ್ಲಿ ಖಾತರಿಪಡಿಸಲಾಗುವುದು ಎಂದು ತಿಳಿಸಿದರು.

'ಬೆಂಗಳೂರು ಟೆಕ್ ಶೃಂಗಸಭೆ 2020'
'ಬೆಂಗಳೂರು ಟೆಕ್ ಶೃಂಗಸಭೆ 2020' ನವೆಂಬರ್ 19 ರಿಂದ 21 ರವರೆಗೆ ನಡೆಯಲಿದೆ. ಇದು 23ನೇ ವರ್ಷದ ತಂತ್ರಜ್ಞಾನ ಶೃಂಗಸಭೆಯಾಗಿದೆ. ಕರ್ನಾಟಕ ನಾವೀನ್ಯತೆ ಮತ್ತು ತಂತ್ರಜ್ಞಾನ ಸೊಸೈಟಿ (ಕಿಟ್ಸ್), ಕರ್ನಾಟಕ ಸರ್ಕಾರದ ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ ಮತ್ತು ನವೋದ್ಯಮದ ವಿಷನ್ ಗ್ರೂಪ್, ಭಾರತ ಸಾಫ್ಟ್‌ವೇರ್ ತಂತ್ರಜ್ಞಾನ ಪಾರ್ಕ್ (ಎಸ್‌ಟಿಪಿಐ) ಮತ್ತು ಎಂಎಂ ಆಕ್ಟಿವ್ ಸೈ-ಟೆಕ್ ಕಮ್ಯುನಿಕೇಷನ್ಸ್ ಸಹಯೋಗದಲ್ಲಿ ಕರ್ನಾಟಕ ಸರ್ಕಾರ ಶೃಂಗಸಭೆ ಆಯೋಜಿಸಿದೆ.
ಈ ವರ್ಷದ ಶೃಂಗಸಭೆ ವಿಷಯ 'Next is Now'. 'ಮಾಹಿತಿ ತಂತ್ರಜ್ಞಾನ ಮತ್ತು ಎಲೆಕ್ಟ್ರಾನಿಕ್ಸ್' ಹಾಗೂ 'ಜೈವಿಕ ತಂತ್ರಜ್ಞಾನ' ಕ್ಷೇತ್ರಗಳಲ್ಲಿ ಪ್ರಮುಖ ತಂತ್ರಜ್ಞಾನಗಳು ಮತ್ತು ಆವಿಷ್ಕಾರಗಳ ಪರಿಣಾಮ ಕುರಿತು ಶೃಂಗಸಭೆಯು ಚರ್ಚೆ ನಡೆಸಲಿದೆ. Next is Now ಅಡಿಯಲ್ಲಿ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿನ ಆಯ್ದ ಸ್ಟಾರ್ ಅಪ್ ಕಂಪನಿಗಳು ಪಾಲ್ಗೊಳ್ಳಲಿವೆ.
-
Property Mutation: ಆಸ್ತಿ ನೋಂದಣಿ ನಂತರ ಶೇ.98ರಷ್ಟು ಖಾತೆಗಳು ಸ್ವಯಂ ಚಾಲಿತವಾಗಿ ಬದಲಾವಣೆ: ಸಚಿವ ಕೃಷ್ಣ ಬೈರೇಗೌಡ -
Gold Price Today: ಯುಗಾದಿಗೂ ಮೊದಲೇ ಚಿನ್ನದ ದರದಲ್ಲಿ ಭಾರೀ ಇಳಿಕೆ; ಆಭರಣ ಪ್ರಿಯರಿಗೆ ಇಂದೇ ಹಬ್ಬ -
Karnataka: ಧಾರ್ಮಿಕ ಮೆರವಣಿಗೆ, ಜಯಂತಿಗಳಲ್ಲಿ DJ ಸದ್ದಿಗೆ ಬ್ರೇಕ್? 'ಐಟಂ ಸಾಂಗ್' ಬ್ಯಾನ್ ಮಾಡಲು ರಾಜ್ಯ ಸರ್ಕಾರ ಒಲವು -
ಉನ್ನತ ಶಿಕ್ಷಣಕ್ಕೆ ಭಾರತದ ಯಾವ ನಗರ ಬೆಸ್ಟ್? QS ರ್ಯಾಂಕಿಂಗ್ ಪಟ್ಟಿಯಲ್ಲಿದೆ ಬೆಂಗಳೂರು ಸೇರಿದಂತೆ 4 ನಗರಗಳ ಹೆಸರು -
ಯುದ್ಧದ ಬಿಸಿ: ಬೆಂಗಳೂರಿಗೆ ಅರಬ್ ರಾಷ್ಟ್ರಗಳ ವಿಮಾನ ಸಂಚಾರ ಕಡಿತ; ರಾಜ್ಯ ಟ್ರಾವೆಲ್ಸ್ ಮಾಲೀಕರಲ್ಲಿ ಆತಂಕ -
Gold Price: ಯುಗಾದಿಗೆ ಚಿನ್ನಪ್ರಿಯರಿಗೆ ಶುಭ ಸುದ್ದಿ: ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ, ಬೆಳ್ಳಿ ದರ 15,000 ರೂ.ಕುಸಿತ -
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
SSLC ಪರೀಕ್ಷೆ-1 ಆರಂಭ: ಮಲ್ಲೇಶ್ವರಂನ ಕೆಪಿಎಸ್ ಶಾಲೆಗೆ ಸಚಿವ ಮಧು ಬಂಗಾರಪ್ಪ ಭೇಟಿ, ವಿದ್ಯಾರ್ಥಿಗಳಿಗೆ ಶುಭಹಾರೈಕೆ -
"ಕೆಡಿ" ಸಿನಿಮಾದ ಹಾಡು ಅಶ್ಲೀಲವಾಗಿದ್ರೆ ಕೂಡಲೇ ಎಲ್ಲ ಕಡೆ ತೆರವು ಮಾಡಿ: ಸೆನ್ಸಾರ್ ಮಂಡಳಿಗೆ ಕೇಂದ್ರ ಸರ್ಕಾರ ಸೂಚನೆ -
Bengaluru Second Airport: ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣ: ದೆಹಲಿಯಲ್ಲಿ ಕೇಂದ್ರ ಸಚಿವರ ಭೇಟಿಯಾದ ಡಿ.ಕೆ.ಶಿವಕುಮಾರ್ -
Nora Fatehi: ಸರ್ಸೆ ನಿನ್ನ ಸೆರಗ ಹಾಡು ವಿವಾದ: ಹೇಳಿದ್ದೊಂದು- ಮಾಡಿದ್ದು ಇನ್ನೊಂದು, ನನ್ನ ನಂಬಿ ಪ್ಲೀಸ್ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral












Click it and Unblock the Notifications