• search
 • Live TV
ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

BTS2020:ಕೈಗಾರಿಕಾ ನೀತಿ ತಂದ ಮೊದಲ ರಾಜ್ಯ ಕರ್ನಾಟಕ- ಶೆಟ್ಟರ್

|

ಬೆಂಗಳೂರು ನ 19: ರಾಜ್ಯದಲ್ಲಿ ನೂತನ ಕೈಗಾರಿಕೆಗಳನ್ನು ಸೆಳೆಯುಲು ಹಾಗೂ ಕೈಗಾರಿಕೆಗಳ ಅಭಿವೃದ್ದಿಗೆ ಹೆಚ್ಚಿನ ಒತ್ತು ನೀಡುವ ಉದ್ದೇಶದಿಂದ ನಿರ್ದಿಷ್ಟ ವಲಯ ನೀತಿಗಳನ್ನು ಘೋಷಿಸಿರುವ ದೇಶದ ಮೊದಲ ರಾಜ್ಯವಾಗಿದೆ ಎಂದು ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಸಚಿವರಾದ ಜಗದೀಶ ಶೆಟ್ಟರ್ ಹೇಳಿದರು.

ಬೆಂಗಳೂರು ತಂತ್ರಜ್ಞಾನ ಸಮಾವೇಶ 2020(BTS2020) ರ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಐಟಿ, ಬಿಟಿ, ಸ್ಟಾರ್ಟ ಅಪ್‌, ಎವಿಜಿಸಿ, ಈಎಸ್‌ಡಿಎಂ, ಎಲೆಕ್ಟ್ರಿಕ್‌ ವೆಹಿಕಲ್‌ ಹೀಗೆ ನಿರ್ದಿಷ್ಟ ವಲಯಕ್ಕೆ ಸಂಬಂಧಿಸಿದಂತೆ ಪ್ರತ್ಯೇಕ ನೀತಿಗಳನ್ನು ರೂಪಿಸಿದ ದೇಶದ ಮೊದಲ ರಾಜ್ಯವಾಗಿದೆ. ಈ ಮೂಲಕ ನಿರ್ದಿಷ್ಟ ಕೈಗಾರಿಕಾ ವಲಯ ಹಾಗೂ ಕ್ಷೇತ್ರಗಳ ಅಭಿವೃದ್ದಿಗೆ ಬೇಕಾದಂತಹ ಕ್ರಮಗಳನ್ನು ಈ ನೀತಿಗಳಲ್ಲಿ ಅಳವಡಿಸಿಕೊಳ್ಳುವ ಮೂಲಕ ಕೈಗಾರಿಕಾಭಿವೃದ್ದಿಗೆ ಅನುಕೂಲ ಮಾಡಿಕೊಡಲಾಗಿದೆ.

ಡಿಜಿಟಲ್ ಇಂಡಿಯಾ ನಮ್ಮ ಜೀವನದ ಭಾಗವಾಗಿ ಬದಲಾಗಿದೆ, ಆಡಳಿತದ ಮಾದರಿಯಾಗಿದೆ: ನರೇಂದ್ರ ಮೋದಿ

ಕರ್ನಾಟಕ ರಾಜ್ಯ ಕೈಗಾರಿಕಾ ಸ್ನೇಹಿ ಕ್ರಮಗಳನ್ನು ಅಳವಡಿಸಿಕೊಳ್ಳುವ ಮೂಲಕ ಕೈಗಾರಿಕಾಭಿವೃದ್ದಿಗೆ ಒತ್ತು ನೀಡುತ್ತಿದೆ. ನೂತನ ಕೈಗಾರಿಕಾ ನೀತಿ, ಕೈಗಾರಿಕಾ ಸೌಲಭ್ಯ ತಿದ್ದುಪಡಿ ಅಧಿನಿಯಮ ರಾಜ್ಯದಲ್ಲಿ ಕೈಗಾರಿಕೆಗಳ ಸ್ಥಾಪನೆಗೆ ಅನುಕೂಲವಾದಂತಹ ಪರಿಸರ ನಿರ್ಮಾಣಕ್ಕೆ ಒತ್ತು ನೀಡಿದೆ. ಇದರ ಪರಿಣಾಮ ಕೋವಿಡ್‌ ಸಂಕಷ್ಟದ ಸಮಯದಲ್ಲೂ ಕೂಡಾ ರಾಜ್ಯಕ್ಕೆ ಬಂಡವಾಳ ಹರಿದು ಬಂದಿದೆ. 64 ಯೋಜನೆಗಳ ಮೂಲಕ ರಾಜ್ಯದಲ್ಲಿ 1.16 ಲಕ್ಷ ರೂಪಾಯಿಗಳ ಬಂಡವಾಳ ಹೂಡಿಕೆಯಾಗಿದ್ದು, ದೇಶದ ಒಟ್ಟಾರೆ ಶೇಕಡಾ 42 ರಷ್ಟು ಬಂಡವಾಳವನ್ನು ರಾಜ್ಯ ಆಕರ್ಷಿಸಿದೆ.

ಇನ್ನೋವೇಷನ್‌ ಇಂಡೆಕ್ಸ್‌ ನಲ್ಲಿ ಮೊದಲ ಸ್ಥಾನ

ಇನ್ನೋವೇಷನ್‌ ಇಂಡೆಕ್ಸ್‌ ನಲ್ಲಿ ಮೊದಲ ಸ್ಥಾನ

ಇದಲ್ಲದೆ, ಪ್ರಧಾನಿ ನರೇಂದ್ರ ಮೋದಿ ಅವರ ಆಶಯದಂತೆ ಸ್ಥಳೀಯ ಸಂಪನ್ಮೂಲಗಳನ್ನು ಬಳಸಿಕೊಳ್ಳುವತ್ತ ಹೆಚ್ಚಿನ ಆದ್ಯತೆ ನೀಡಿದೆ. ದೇಶದ ಇನ್ನೋವೇಷನ್‌ ಇಂಡೆಕ್ಸ್‌ ನಲ್ಲಿ ಮೊದಲ ಸ್ಥಾನವನ್ನು ರಾಜ್ಯ ಹೊಂದಿದೆ. ಅಲ್ಲದೆ, ಬೆಂಗಳೂರು ನಗರ ದೇಶದ ಪ್ರಮುಖ ಸಂಶೋಧನೆ ಹಾಗೂ ಅಭಿವೃದ್ದಿಯ ಕೇಂದ್ರಗಳನ್ನು ಹೊಂದಿದೆ. ರಾಜ್ಯ ಸರಕಾರ ಪ್ರಾಡಕ್ಟ್‌ ಸ್ಪೆಸಿಫಿಕ್‌ ಇಂಡಸ್ಟ್ರೀಯಲ್‌ ಕ್ಲಸ್ಟರ್‌ ಡೆವಲಪ್‌ಮೆಂಟ್‌ ಪ್ರೋಗ್ರಾಮ್‌ ನ್ನು ಪ್ರಾರಂಭಿಸಿದ್ದು, ರಾಜ್ಯದ ಎರಡನೇ ಹಾಗೂ ಮೂರನೇ ಹಂತದ ನಗರಗಳಿಗೆ ಕೈಗಾರಿಕೆಗಳನ್ನು ಸೆಳೆಯಲು ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ ಎಂದು ಹೇಳಿದರು.

ಏಪ್ರಿಲ್‌ - ಜೂನ್‌ 2020 ರ ನಡುವೆ ರಾಜ್ಯ ಅತಿಹೆಚ್ಚು ವಿದೇಶಿ ಬಂಡವಾಳ ವನ್ನು ಆಕರ್ಷಿಸಿದೆ. ಇದು ರಾಜ್ಯ ಸರಕಾರ ಕೈಗಾರಿಕೆಗಳ ಅಭಿವೃದ್ದಿಗೆ ಕೈಗೊಂಡಿರುವ ಕ್ರಮಗಳ ಪರಿಣಾಮವಾಗಿದೆ ಎಂದು ಹೇಳಿದರು.

20 ಲಕ್ಷ ಉದ್ಯೋಗಾವಕಾಶಗಳನ್ನು ಕಲ್ಪಿಸುವ ನೀತಿ

20 ಲಕ್ಷ ಉದ್ಯೋಗಾವಕಾಶಗಳನ್ನು ಕಲ್ಪಿಸುವ ನೀತಿ

ರಾಜ್ಯದಲ್ಲಿ 5 ಲಕ್ಷ ಕೋಟಿ ರೂಪಾಯಿಗಳ ಬಂಡವಾಳ ಆಕರ್ಷಣೆ, 20 ಲಕ್ಷ ಉದ್ಯೋಗಾವಕಾಶಗಳನ್ನು ಕಲ್ಪಿಸುವ ಹಾಗೂ ಕೈಗಾರಿಕಾಭಿವೃದ್ದಿಯಲ್ಲಿ ಹಿಂದುಳಿದ ಜಿಲ್ಲೆಗಳ ಅಭಿವೃದ್ದಿಗೆ ಅನುವು ಮಾಡಿಕೊಡುವಂತಹ ನೂತನ ಕೈಗಾರಿಕಾ ನೀತಿ 2020-25 ರಾಜ್ಯವನ್ನು ಇನ್ನಷ್ಟು ಕೈಗಾರಿಕಾ ಸ್ನೇಹಿ ಮಾಡುವತ್ತ ಪ್ರಮುಖ ಹೆಜ್ಜೆಯಾಗಿದೆ, ಇದಕ್ಕೆ ಸಚಿವ ಸಂಪುಟದ ಅನುಮೋದನೆ ದೊರೆತಿರುವುದು ಬಹಳ ಸಂತಸದ ವಿಷಯ ಎಂದು ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಸಚಿವ ಜಗದೀಶ ಶೆಟ್ಟರ್‌ ತಿಳಿಸಿದರು.

ಬಿಟಿಎಸ್-2020: 300 ಶತಕೋಟಿ ಡಾಲರ್‌ ಡಿಜಿಟಲ್‌ ಆರ್ಥಿಕತೆಯ ಗುರಿ

ಮೂಲಸೌಕರ್ಯಗಳ ಅಭಿವೃದ್ಧಿಯತ್ತ ಗಮನ

ಮೂಲಸೌಕರ್ಯಗಳ ಅಭಿವೃದ್ಧಿಯತ್ತ ಗಮನ

ನೂತನ ಕೈಗಾರಿಕಾ ನೀತಿ 2020-25ರ ಗಮನವು ಕರ್ನಾಟಕ ಕೈಗಾರಿಕಾ ಶಕ್ತಿಯನ್ನು ಬಳಸಿಕೊಂಡು, ಕೈಗಾರೀಕರಣಕ್ಕಾಗಿ ಪರಿಸರವನ್ನು ಶಕ್ತಗೊಳಿಸುವುದು, ಮೂಲಸೌಕರ್ಯಗಳ ಅಭಿವೃದ್ಧಿ, ರಾಜ್ಯದ ಜನರಿಗೆ ವಿಶೇಷವಾಗಿ ಕೈಗಾರಿಕಾ ಅಭಿವೃದ್ಧಿಯಲ್ಲಿ ಹಿಂದುಳಿದ ಜಿಲ್ಲೆಗಳಲ್ಲಿ ಹಾಗೂ ಟಯರ್-2 & ಟಯರ್-3 ನಗರಗಳಲ್ಲಿ ಸಮಾನ ಅವಕಾಶಗಳನ್ನು ಒದಗಿಸುವುದು ಹಾಗೂ ಬಂಡವಾಳ ಹೂಡಿಕೆಯ ಅಭಿವೃದ್ಧಿಯನ್ನು ರಾಜ್ಯದಲ್ಲಿ ಖಾತರಿಪಡಿಸಲಾಗುವುದು ಎಂದು ತಿಳಿಸಿದರು.

'ಬೆಂಗಳೂರು ಟೆಕ್ ಶೃಂಗಸಭೆ 2020'

'ಬೆಂಗಳೂರು ಟೆಕ್ ಶೃಂಗಸಭೆ 2020'

'ಬೆಂಗಳೂರು ಟೆಕ್ ಶೃಂಗಸಭೆ 2020' ನವೆಂಬರ್ 19 ರಿಂದ 21 ರವರೆಗೆ ನಡೆಯಲಿದೆ. ಇದು 23ನೇ ವರ್ಷದ ತಂತ್ರಜ್ಞಾನ ಶೃಂಗಸಭೆಯಾಗಿದೆ. ಕರ್ನಾಟಕ ನಾವೀನ್ಯತೆ ಮತ್ತು ತಂತ್ರಜ್ಞಾನ ಸೊಸೈಟಿ (ಕಿಟ್ಸ್), ಕರ್ನಾಟಕ ಸರ್ಕಾರದ ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ ಮತ್ತು ನವೋದ್ಯಮದ ವಿಷನ್ ಗ್ರೂಪ್, ಭಾರತ ಸಾಫ್ಟ್‌ವೇರ್ ತಂತ್ರಜ್ಞಾನ ಪಾರ್ಕ್ (ಎಸ್‌ಟಿಪಿಐ) ಮತ್ತು ಎಂಎಂ ಆಕ್ಟಿವ್ ಸೈ-ಟೆಕ್ ಕಮ್ಯುನಿಕೇಷನ್ಸ್ ಸಹಯೋಗದಲ್ಲಿ ಕರ್ನಾಟಕ ಸರ್ಕಾರ ಶೃಂಗಸಭೆ ಆಯೋಜಿಸಿದೆ.

ಈ ವರ್ಷದ ಶೃಂಗಸಭೆ ವಿಷಯ 'Next is Now'. 'ಮಾಹಿತಿ ತಂತ್ರಜ್ಞಾನ ಮತ್ತು ಎಲೆಕ್ಟ್ರಾನಿಕ್ಸ್' ಹಾಗೂ 'ಜೈವಿಕ ತಂತ್ರಜ್ಞಾನ' ಕ್ಷೇತ್ರಗಳಲ್ಲಿ ಪ್ರಮುಖ ತಂತ್ರಜ್ಞಾನಗಳು ಮತ್ತು ಆವಿಷ್ಕಾರಗಳ ಪರಿಣಾಮ ಕುರಿತು ಶೃಂಗಸಭೆಯು ಚರ್ಚೆ ನಡೆಸಲಿದೆ. Next is Now ಅಡಿಯಲ್ಲಿ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿನ ಆಯ್ದ ಸ್ಟಾರ್ ಅಪ್ ಕಂಪನಿಗಳು ಪಾಲ್ಗೊಳ್ಳಲಿವೆ.

   Corona ನಿಯಂತ್ರಿಸಲು ಸರ್ಕಾರ ತೆಗೆದುಕೊಂಡ ಕಠಿಣ ನಿರ್ಧಾರ | Oneindia Kannada

   English summary
   Karnataka first state to have own Industrial policy said Industry minister Jagadish Shettar at Karnataka's flagship annual technology event - Bengaluru Tech Summit 2020 (BTS2020) today.
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X