ಬಜೆಟ್ 2021; ನಮ್ಮ ಮೆಟ್ರೋ 2ಎ ಮತ್ತು 2ಬಿ ಯೋಜನೆ ವಿಸ್ತರಣೆ

ಬೆಂಗಳೂರು, ಫೆಬ್ರವರಿ 01; " ನಮ್ಮ ಮೆಟ್ರೋ ಯೋಜನೆಗೆ 15,000 ಕೋಟಿ ಅನುದಾನ ನೀಡುವುದಾಗಿ" ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಬೆಂಗಳೂರು ನಗರಕ್ಕೆ ಕೊಡುಗೆ ಘೋಷಣೆ ಮಾಡಿದರು.

ಸೋಮವಾರ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2021ನೇ ಸಾಲಿನ ಬಜೆಟ್ ಮಂಡನೆ ಮಾಡುತ್ತಿದ್ದಾರೆ. ಬೆಂಗಳೂರು ನಗರದಲ್ಲಿ 2ಎ ಮತ್ತು 2ಬಿ ಯೋಜನೆ ವಿಸ್ತರಣೆ ಮಾಡುವುದಾಗಿ ಘೋಷಣೆ ಮಾಡಲಾಗಿದೆ.

ಕೇಂದ್ರ ಬಜೆಟ್ 2021ರಲ್ಲಿ ಬೆಂಗಳೂರು ನಗರದಲ್ಲಿ ನಮ್ಮ ಮೆಟ್ರೋ 2ಎ ಮತ್ತು 2ಬಿ ಯೋಜನೆಯ ವಿಸ್ತರಣೆ ಘೋಷಣೆ ಮಾಡಲಾಗಿದೆ. ಇದರಿಂದಾಗಿ ಒಟ್ಟು 58.19 ಕಿ. ಮೀ. ಮಾರ್ಗ ನಿರ್ಮಾಣದ ಗುರಿ ಹೊಂದಲಾಗಿದೆ. ಇದಕ್ಕಾಗಿ 14,788 ಕೋಟಿ ರೂ. ಅನುದಾನ ಮೀಸಲಿಡಲಾಗಿದೆ.

Budget 15000 Crore Boost For Namma Metro Project

ಬೆಂಗಳೂರು ನಗರದಲ್ಲಿ ಬಿಎಂಆರ್‌ಸಿಎಲ್ ನಮ್ಮ ಮೆಟ್ರೋ ಯೋಜನೆ ನಿರ್ವಹಣೆಯನ್ನು ಮಾಡುತ್ತಿದೆ. 2ಎ ಮತ್ತು 2ಬಿ ಯೋಜನೆಯ ಅಡಿ ಬೆಂಗಳೂರು ನಗರದ ಹೊರ ವಲಯದಲ್ಲಿ ಮೆಟ್ರೋ ರೈಲು ಮಾರ್ಗ ನಿರ್ಮಾಣವಾಗಲಿದೆ.

ಈಗಾಗಲೇ ಬೆಂಗಳೂರು ನಗರದಲ್ಲಿ ನಮ್ಮ ಮೆಟ್ರೋ 1ನೇ ಹಂತದಲ್ಲಿ ಹಸಿರು ಮತ್ತು ನೇರಳೆ ಮಾರ್ಗದಲ್ಲಿ ಮೆಟ್ರೋ ರೈಲುಗಳು ಸಂಚಾರ ನಡೆಸುತ್ತಿವೆ. ಒಂದನೇ ಹಂತ ವಿಸ್ತರಿತ ಮಾರ್ಗದ ಕಾಮಗಾರಿಗಳು ಸಹ ನಡೆಯುತ್ತಿವೆ.

2ನೇ ಹಂತದ ಮಾರ್ಗದ ಕಾಮಗಾರಿಗಳು ನಡೆಯತ್ತಿವೆ. ಎರಡನೇ ಹಂತದ ವಿಸ್ತರಿತ ಮಾರ್ಗದಲ್ಲಿ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸಹ ಮೆಟ್ರೋ ಸಂಪರ್ಕ ಕಲ್ಪಿಸಲಾಗುತ್ತದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+