ಬೆಂಗಳೂರು; ಮೆಜೆಸ್ಟಿಕ್‌ನಲ್ಲಿ ಕಟ್ಟಡ ಕುಸಿತ, ಮಾಲೀಕನ ವಿರುದ್ಧ ಕೇಸ್

ಬೆಂಗಳೂರು, ಜುಲೈ 30 : ಬೆಂಗಳೂರು ನಗರದ ಮೆಜೆಸ್ಟಿಕ್‌ನಲ್ಲಿ ಮೂರು ಅಂತಸ್ತಿನ ಕಟ್ಟಡ ಕುಸಿದು ಬಿದ್ದಿತ್ತು. ಪಕ್ಕದಲ್ಲಿದ್ದ ನಿರ್ಮಾಣ ಹಂತದ ಕಟ್ಟಡದ ಮಾಲೀಕನ ವಿರುದ್ಧ ಪೊಲೀಸರು ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ.

Recommended Video

      ಏನಿದು ಹೊಸ ಶಿಕ್ಷಣ ರೀತಿ?ಏನಿದು ಹೊಸ ಸಚಿವಾಲಯ ಬದಲಾವಣೆ? | Oneindia Kannada

      ಮಂಗಳವಾರ ರಾತ್ರಿ ಗಾಂಧಿನಗರದ ಕಪಾಲಿ ಚಿತ್ರಮಂದಿರವಿದ್ದ ಜಾಗದ ಪಕ್ಕದ ಕಟ್ಟಡ ಕುಸಿದು ಬಿದ್ದಿತ್ತು. ಕಪಾಲಿ ಚಿತ್ರಮಂದಿರವನ್ನು ಒಡೆದು ಅಲ್ಲಿ ಮಾಲ್ ನಿರ್ಮಾಣ ಮಾಡಲಾಗುತ್ತಿದೆ. ನಿರ್ಮಾಣ ಹಂತದ ಕಟ್ಟಡದ ಪಕ್ಕದ ಕಟ್ಟಡಗಳು ಕುಸಿದು ಬಿದ್ದಿವೆ.

      ಒಟ್ಟು ಎರಡು ಕಟ್ಟಡಗಳು ಕುಸಿದು ಬಿದ್ದಿವೆ. ಬಿಬಿಎಂಪಿ ಮೇಯರ್ ಮತ್ತು ಆಯುಕ್ತರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.ಎರಡೂ ಕಟ್ಟಡಗಳಲ್ಲಿದ್ದ ಜನರನ್ನು ಮೊದಲೇ ಖಾಲಿ ಮಾಡಿಸಲಾಗಿತ್ತು. ಆದ್ದರಿಂದ, ಯಾವುದೇ ಸಾವು-ನೋವು ಸಂಭವಿಸಿಲ್ಲ.

      Building Collapse Case Against Owner Of Construction Site

      ಉಪ್ಪಾರಪೇಟೆ ಪೊಲೀಸರು ನಿರ್ಮಾಣ ಹಂತದ ಕಟ್ಟಡದ ಮಾಲೀಕರ ವಿರುದ್ಧ ಪ್ರಕರಣ ದಾಖಲು ಮಾಡಿದ್ದಾರೆ. ಪಕ್ಕದ ಕಟ್ಟಡ ಕುಸಿಯಲು ಕಪಾಲಿ ಚಿತ್ರಮಂದಿರವಿದ್ದ ಜಾಗದಲ್ಲಿ ನಡೆಯುತ್ತಿರುವ ಕಾಮಗಾರಿಯೇ ಕಾರಣವಾಗಿದೆ.

      ಕುಸಿದು ಬಿದ್ದ ಕಟ್ಟಡದ ಮಾಲೀಕರಿಗೆ ಆಗಿರುವ ನಷ್ಟವನ್ನು ನಿರ್ಮಾಣ ಹಂತದ ಕಟ್ಟಡದ ಮಾಲೀಕ ತುಂಬಿಕೊಡಬೇಕು ಎಂದು ಬಿಬಿಎಂಪಿ ಸೂಚನೆ ನೀಡಿದೆ. ನಿರ್ಮಾಣ ಹಂತದ ಕಟ್ಟಡದಲ್ಲಿ ನಾಲ್ಕೂ ಕಡೆ ಗೋಡೆ ನಿರ್ಮಿಸುವಂತೆ ಸೂಚಿಸಲಾಗಿತ್ತು. ಆದರೆ, ಮೂರು ಕಡೆ ಮಾತ್ರ ಗೋಡೆ ಕಟ್ಟಲಾಗಿದೆ.

      ಕಪಾಲಿ ಚಿತ್ರಮಂದಿರವಿದ್ದ ಜಾಗದಲ್ಲಿ ಮಾಲ್ ನಿರ್ಮಾಣ ಮಾಡಲು ಸುಮಾರು 60 ಆಳದ ಗುಂಡಿ ತೆಗೆಯಲಾಗಿದೆ. ಇದರಿಂದಾಗಿ ಪಕ್ಕದ ಕಟ್ಟಡ ಕುಸಿದು ಬಿದ್ದಿದೆ. ಸದ್ಯ, ನಿರ್ಮಾಣ ಹಂತದ ಚಟುವಟಿಕೆಯೂ ಸ್ಥಗಿತಗೊಂಡಿದೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+