ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬೆಂಗಳೂರಿಗೆ ಶುಕ್ರವಾರದ ಶುಭೋದಯ ಹೇಳಿದ ಮಳೆ

|
Google Oneindia Kannada News

ಬೆಂಗಳೂರು, ನವೆಂಬರ್ 08 : ಶುಕ್ರವಾರ ಮುಂಜಾನೆ ಬೆಂಗಳೂರಿನ ನಿವಾಸಿಗಳಿಗೆ ಮಳೆ ಗುಡ್ ಮಾರ್ನಿಂಗ್ ಹೇಳಿದೆ. ನವೆಂಬರ್ 8ರಿಂದ ಬೆಂಗಳೂರು ಸೇರಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಶುಕ್ರವಾರ ಮುಂಜಾನೆ 5 ಗಂಟೆಗೆ ಬೆಂಗಳೂರು ನಗರದ ವಿವಿಧ ಬಡಾವಣೆಗಳಲ್ಲಿ ಮಳೆ ಆರಂಭವಾಯಿತು. ಸುಮಾರು ಅರ್ಧಗಂಟೆಗಳ ಕಾಲ ಜೋರಾರಿ ಮಳೆ ಸುರಿದಿದ್ದು, ವಾಕಿಂಗ್ ಹೊರಟವರ ಉತ್ಸಾಹಕ್ಕೆ ತಣ್ಣೀರು ಚೆಲ್ಲಿತು.

ಬಾಗಲಕೋಟೆಯಲ್ಲಿ ರಾತ್ರಿ ಮತ್ತೆ ಮಳೆ; ನೀರು ಪಾಲಾದ ಬೆಳೆಬಾಗಲಕೋಟೆಯಲ್ಲಿ ರಾತ್ರಿ ಮತ್ತೆ ಮಳೆ; ನೀರು ಪಾಲಾದ ಬೆಳೆ

Bulbul Cyclone Heavy Rain Lashes Bengaluru

ಜಯನಗರ, ಬಸವನಗುಡಿ, ಎನ್. ಆರ್. ಕಾಲೋನಿ, ಗಾಂಧಿ ಬಜಾರ್ ಸೇರಿದಂತೆ ವಿವಿಧ ಬಡಾವಣೆಗಳಲ್ಲಿ ಮಳೆಯಾಗಿದೆ. ರಸ್ತೆಗಳಲ್ಲಿ ನೀರು ತುಂಬಿ ಕೊಂಡಿದ್ದು, ದ್ವಿ ಚಕ್ರ ವಾಹನ ಸವಾರರು ಪರದಾಡಿದರು. ಮೋಡ ಕವಿದ ವಾತಾವರಣ ಇದ್ದು, ಮತ್ತೆ ಮಳೆಯಾಗುವ ಸಾಧ್ಯತೆ ಇದೆ.

ಬುಲ್‌ಬುಲ್ ಪ್ರಭಾವ, ಕರ್ನಾಟಕದಲ್ಲಿ ಮತ್ತೆ ಮಳೆ ಆರಂಭ ಬುಲ್‌ಬುಲ್ ಪ್ರಭಾವ, ಕರ್ನಾಟಕದಲ್ಲಿ ಮತ್ತೆ ಮಳೆ ಆರಂಭ

ಬುಲ್ ಬುಲ್ ಚಂಡಮಾರುತದ ಪ್ರಭಾವದಿಂದಾಗಿ ರಾಜ್ಯದಲ್ಲಿ ಮಳೆಯಾಗುತ್ತಿದೆ. ದೇಶದ ಪೂರ್ವ ಕರಾವಳಿಗೆ ಸಹ ಚಂಡಮಾರುತದ ಭೀತಿ ಎದುರಾಗಿದ್ದು, ಓಡಿಶಾ ರಾಜ್ಯದ 14 ಜಿಲ್ಲೆಗಳಲ್ಲಿ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ.

ನವೆಂಬರ್ 8ರ ಬಳಿಕ ಕರ್ನಾಟಕದಲ್ಲಿ ಮತ್ತೆ ಭಾರಿ ಮಳೆ ನವೆಂಬರ್ 8ರ ಬಳಿಕ ಕರ್ನಾಟಕದಲ್ಲಿ ಮತ್ತೆ ಭಾರಿ ಮಳೆ

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ಇದರಿಂದಾಗಿ ಬುಲ್ ಬುಲ್ ಚಂಡಮಾರುತ ಸೃಷ್ಟಿಯಾಗಿದೆ. ಇದರಿಂದಾಗಿ ಕರ್ನಾಟಕ ದಕ್ಷಿಣ ಒಳನಾಡು, ಉತ್ತರ ಒಳನಾಡು ಮತ್ತು ಮಲೆನಾಡು ಪ್ರದೇಶಗಳಲ್ಲಿ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಲಾಗಿದೆ.

English summary
Due to Bulbul cyclone effect Bengaluru witnessed heavy rainfalls in early morning hours on Friday, November 8, 2019.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X