ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬೆಂಗಳೂರಿನ ಏರ್‌ಪೋರ್ಟ್‌ನಲ್ಲಿ ಸಜೀವ ಗುಂಡುಗಳು ಪತ್ತೆ

|
Google Oneindia Kannada News

ಬೆಂಗಳೂರು, ಜನವರಿ 8: ಬೆಂಗಳೂರಿನ ಕೆಂಪೇಗೌಡ ಏರ್‌ಪೋರ್ಟ್‌ನಲ್ಲಿ ಇಂದು ಎರಡು ಸಜೀವ ಗುಂಡುಗಳು ಪತ್ತೆಯಾಗಿದ್ದು, ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು.

ಪ್ರಯಾಣಿಕರ ಬ್ಯಾಗ್​ಗಳನ್ನು ತಪಾಸಣೆ ಮಾಡುವಾಗ ಬ್ಯಾಗ್​ನಲ್ಲಿ ಎರಡು ಸಜೀವ ಗುಂಡುಗಳು ಪತ್ತೆಯಾಗಿವೆ. ಆ ಬ್ಯಾಗ್​ನ ಮಾಲೀಕರಾದ ಅಮೆರಿಕ ಮಿಲಿಟರಿ ಸಿಬ್ಬಂದಿಯನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ .

ಕೆಂಪೇಗೌಡ ಏರ್‌ಪೋರ್ಟ್‌ನಲ್ಲಿ ಮನರಂಜನಾ ತಾಣ: ವಿಶೇಷತೆಯೇನು?ಕೆಂಪೇಗೌಡ ಏರ್‌ಪೋರ್ಟ್‌ನಲ್ಲಿ ಮನರಂಜನಾ ತಾಣ: ವಿಶೇಷತೆಯೇನು?

ಈಗಾಗಲೇ ಇರಾನ್ ಮತ್ತು ಅಮೆರಿಕ ನಡುವೆ ಯುದ್ಧದ ವಾತಾವರಣ ಸೃಷ್ಟಿಯಾಗಿದೆ. ಈ ಹಿನ್ನೆಲೆಯಲ್ಲಿ ಬೇರೆ ದೇಶಗಳಲ್ಲೂ ಆತಂಕ ಎದುರಾಗಿದೆ. ಹೀಗಾಗಿ, ಅಮೆರಿಕದ ಮಿಲಿಟರಿಯಲ್ಲಿ ಕೆಲಸ ಮಾಡುತ್ತಿರುವ ಮಂಗಳೂರಿನ ವ್ಯಕ್ತಿಯ ವಿಚಾರಣೆಯನ್ನು ಮುಂದುವರೆಸಿರುವ ಪೊಲೀಸರು ತಾಯಿ ಮತ್ತು ಮಗನನ್ನು ವಶಕ್ಕೆ ಪಡೆದಿದ್ದಾರೆ.

Bullet Found In Bengaluru International Airport

ಮಂಗಳೂರು ಮೂಲದ ವ್ಯಕ್ತಿ ತಾನು ಅಮೆರಿಕ ಮಿಲಿಟರಿಯಲ್ಲಿ ಕೆಲಸ ಮಾಡುತ್ತಿರುವುದಾಗಿ ಹೇಳಿಕೊಂಡಿದ್ದಾರೆ. ತಾನು ಅಮೆರಿಕ ಮಿಲಿಟರಿಯಲ್ಲಿ ಕೆಲಸ ಮಾಡುತ್ತಿದ್ದು, ರಜೆ ಹಾಕಿ ಊರಿಗೆ ಬಂದಿದ್ದಾಗಿ ತಿಳಿಸಿದ್ದಾರೆ.

ಬೆಂಗಳೂರು ಏರ್​ಪೋರ್ಟ್​ಗೆ ಆಗಮಿಸಿದ ತಾಯಿ-ಮಗನ ಬ್ಯಾಗ್​ನಲ್ಲಿ 2 ಬುಲೆಟ್​ಗಳು ಪತ್ತೆಯಾಗಿದ್ದು, ಆ ಇಬ್ಬರನ್ನು ವಶಕ್ಕೆ ಪಡೆದಿರುವ ಪೊಲೀಸರು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ.

ಮಿಲಿಟರಿಯಿಂದ ಬ್ಯಾಗ್ ಪ್ಯಾಕ್ ಮಾಡಿಕೊಂಡು ಬರುವಾಗ ಕಣ್ತಪ್ಪಿನಿಂದ 2 ಗುಂಡುಗಳು ಬ್ಯಾಗ್​ನೊಳಗೆ ಬಿದ್ದಿವೆ ಎಂದು ಹೇಳಿದ್ದಾರೆ.

English summary
Bullet Found In American Military Employee Bag At Bengaluru International Aiport On Wednesday.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X