ಬೆಂಗಳೂರಿಗೆ ಬಂಪರ್ ಗುಡ್‌ನ್ಯೂಸ್‌: 6 ತಿಂಗಳಲ್ಲಿ ರಸ್ತೆ ಕಾಮಗಾರಿ ಪೂರ್ಣ, 16.7 ಕಿ.ಮೀ. ಸುರಂಗ ಮಾರ್ಗಕ್ಕೆ ಗ್ರೀನ್ ಸಿಗ್ನಲ್‌!

Bengaluru: ಬೆಂಗಳೂರು ನಗರದಲ್ಲಿ ಟ್ರಾಫಿಕ್ ಜಾಮ್ ಕಂಟ್ರೋಲ್‌ಗೆ ಮಾಸ್ಟರ್ ಪ್ಲ್ಯಾನ್ ಮಾಡಿಕೊಳ್ಳಲಾಗಿದೆ. ನಗರದಲ್ಲಿ ಬಿ-ಸ್ಮೈಲ್ ವತಿಯಿಂದ ಕೈಗೆತ್ತಿಕೊಳ್ಳಲಾಗುತ್ತಿರುವ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಸಮಗ್ರ ಯೋಜನೆ ರೂಪಿಸಿ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಸೂಚನೆ ನೀಡಲಾಗಿದೆ ಎಂದು ಗ್ರೇಟರ್ ಬೆಂಗಳೂರು ಅಭಿವೃದ್ಧಿ ಸಚಿವರಾದ ಕೃಷ್ಣ ಬೈರೇಗೌಡ ಅವರು ತಿಳಿಸಿದ್ದಾರೆ. ಇದೇ ವೇಳೆ ಬೆಂಗಳೂರಿನಲ್ಲಿ ಉತ್ತರ-ದಕ್ಷಿಣ ದಿಕ್ಕಿನಲ್ಲಿ 16.7 ಕಿ.ಮೀ. ಉದ್ದದ ಸುರಂಗ ಮಾರ್ಗದ ಬಗ್ಗೆಯೂ ಅವರು ಅಪ್ಡೇಟ್ಸ್‌ ಕೊಟ್ಟಿದ್ದಾರೆ.

ಬೆಂಗಳೂರಿನ ದೀರ್ಘಕಾಲದ ಸಂಚಾರ ದಟ್ಟಣೆ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ಕುರಿತು ಸುದೀರ್ಘ ಚರ್ಚೆ ನಡೆಸಲಾಗಿದೆ. ಬಿ-ಸ್ಮೈಲ್ ವತಿಯಿಂದ ಸಂಚಾರ ಸಮಸ್ಯೆಗಳಿಗೆ ದೀರ್ಘಾವಧಿಯ ಪರಿಹಾರ ಒದಗಿಸಲು ಕೈಗೆತ್ತಿಕೊಳ್ಳಬೇಕಾದ ಕಾರ್ಯಕ್ರಮಗಳ ಕುರಿತು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಈಗಾಗಲೇ ನೀಲನಕ್ಷೆ ರೂಪಿಸಿದ್ದು, ಅನೇಕ ಯೋಜನೆಗಳು ಅನುಷ್ಠಾನದ ಹಂತದಲ್ಲಿವೆ ಎಂದಿದ್ದಾರೆ.

Bengaluru

ವೈಟ್ ಟಾಪಿಂಗ್ ರಸ್ತೆ ಕಾಮಗಾರಿ: 6 ತಿಂಗಳಲ್ಲಿ ಬಾಕಿ ಕಾಮಗಾರಿ ಪೂರ್ಣಗೊಳಿಸಿ

ನಗರದಲ್ಲಿ ಹೆಚ್ಚು ಸಂಚಾರ ದಟ್ಟಣೆ ಇರುವ ರಸ್ತೆಗಳು ಹಾಳಾದರೆ ಸಾರ್ವಜನಿಕರಿಗೆ ಹೆಚ್ಚಿನ ತೊಂದರೆ ಉಂಟಾಗುತ್ತದೆ. ಈ ಹಿನ್ನೆಲೆಯಲ್ಲಿ 2016ರಿಂದ ಪ್ರಮುಖ ರಸ್ತೆಗಳಲ್ಲಿ ವೈಟ್ ಟಾಪಿಂಗ್ ಕಾಮಗಾರಿ ಕೈಗೆತ್ತಿಕೊಳ್ಳಲಾಗಿದೆ. ಒಂದು ಕಿ.ಮೀ. ವೈಟ್ ಟಾಪಿಂಗ್ ಕಾಮಗಾರಿಗೆ ಸುಮಾರು 10 ಕೋಟಿ ರೂ. ವೆಚ್ಚವಾಗುತ್ತದೆ. ಅದೇ ಅವಧಿಯಲ್ಲಿ ಡಾಂಬರೀಕರಣವನ್ನು 5-6 ಬಾರಿ ಮಾಡಿದರೆ ಹೆಚ್ಚಿನ ವೆಚ್ಚವಾಗುತ್ತದೆ. ಈ ಹಿನ್ನೆಲೆಯಲ್ಲಿ ದೀರ್ಘಕಾಲ ಬಾಳಿಕೆ ಬರುವ, ಗುಂಡಿ ಮುಕ್ತ ರಸ್ತೆಗಳನ್ನು ನಿರ್ಮಿಸುವ ಉದ್ದೇಶದಿಂದ ವೈಟ್ ಟಾಪಿಂಗ್ ಕಾಮಗಾರಿ ಕೈಗೊಳ್ಳಲಾಗುತ್ತಿದೆ ಎಂದರು. ಈಗಾಗಲೇ 196 ಕಿ.ಮೀ. ವೈಟ್ ಟಾಪಿಂಗ್ ಕಾಮಗಾರಿ ಪೂರ್ಣಗೊಂಡಿದೆ. ಹೊಸದಾಗಿ 126 ಕಿ.ಮೀ. ರಸ್ತೆ ನಿರ್ಮಾಣ ಕಾಮಗಾರಿ ಪ್ರಗತಿಯಲ್ಲಿದ್ದು, ಅದರಲ್ಲಿ 58 ಕಿ.ಮೀ. ಪೂರ್ಣಗೊಂಡಿದೆ. ಉಳಿದ ಕಾಮಗಾರಿಗಳಿಗೆ ವೇಗ ನೀಡಿ ಮುಂದಿನ 6 ತಿಂಗಳಲ್ಲಿ ಪೂರ್ಣಗೊಳಿಸಲು ಸೂಚನೆ ನೀಡಲಾಗಿದೆ ಎಂದಿದ್ದಾರೆ.

ಹೊಸದಾಗಿ 450 ಕಿ.ಮೀ. ರಸ್ತೆಗೆ ವೈಟ್ ಟಾಪಿಂಗ್

ಕರ್ನಾಟಕ ಸರ್ಕಾರವು 2026-27ನೇ ಸಾಲಿನಲ್ಲಿ 3000 ಕೋಟಿ ರೂ. ವೆಚ್ಚದಲ್ಲಿ 450 ಕಿ.ಮೀ. ಉದ್ದದ ವೈಟ್ ಟಾಪಿಂಗ್ ರಸ್ತೆ ನಿರ್ಮಾಣಕ್ಕೆ ಡಿಪಿಆರ್ ಸಿದ್ಧಪಡಿಸಿದೆ. ಎಲ್ಲಾ ಪ್ರಕ್ರಿಯೆಗಳು ಅಂತಿಮ ಹಂತದಲ್ಲಿದ್ದು, ಶೀಘ್ರದಲ್ಲೇ ಟೆಂಡರ್ ಆಹ್ವಾನಿಸಲಾಗುವುದು ಎಂದು ತಿಳಿಸಿದರು.

ಉತ್ತರ-ದಕ್ಷಿಣ ದಿಕ್ಕಿನಲ್ಲಿ 16.7 ಕಿ.ಮೀ. ಉದ್ದದ ಸುರಂಗ ಮಾರ್ಗ

ಬೆಂಗಳೂರು ಉತ್ತರ-ದಕ್ಷಿಣ ದಿಕ್ಕಿನಲ್ಲಿ 16.7 ಕಿ.ಮೀ. ಉದ್ದದ ಸುರಂಗ ಮಾರ್ಗ ನಿರ್ಮಾಣಕ್ಕೆ ಈಗಾಗಲೇ ಟೆಂಡರ್ ಪ್ರಕ್ರಿಯೆ ಪೂರ್ಣಗೊಳಿಸಿ ಸರ್ಕಾರದ ಅನುಮೋದನೆಗೆ ಕಳುಹಿಸಲಾಗಿದೆ. ಸಚಿವ ಸಂಪುಟದ ಅನುಮೋದನೆಯ ಬಳಿಕ ಯೋಜನೆ ಅನುಷ್ಠಾನಗೊಳ್ಳಲಿದೆ. ಇದು ಸಂಕೀರ್ಣ ಹಾಗೂ ಮಹತ್ವದ ಯೋಜನೆಯಾಗಿದ್ದು, ಮುಂದಿನ ದಿನಗಳಲ್ಲಿ ಅದರ ಸಂಪೂರ್ಣ ವಿವರಗಳನ್ನು ಹಂಚಿಕೊಳ್ಳಲಾಗುವುದು. ಮುಂದುವರಿದು ಪೂರ್ವ-ಪಶ್ಚಿಮ ಸುರಂಗ ಮಾರ್ಗ ಯೋಜನೆಯಡಿ ಹಳೆ ಮದ್ರಾಸ್ ರಸ್ತೆಯಿಂದ ಮೈಸೂರು ರಸ್ತೆಯವರೆಗೆ 22 ಕಿ.ಮೀ. ಉದ್ದದ ಸುರಂಗ ಮಾರ್ಗ ನಿರ್ಮಾಣಕ್ಕೆ ಮುಂದಿನ ಹಂತದಲ್ಲಿ ಟೆಂಡರ್ ಆಹ್ವಾನಿಸಲಾಗುವುದು ಎಂದು ತಿಳಿಸಿದ್ದಾರೆ.

150 ಕಿ.ಮೀ. ಎಲಿವೇಟೆಡ್ ಕಾರಿಡಾರ್

ನಗರದ ಸಂಚಾರ ದಟ್ಟಣೆಗೆ ದೀರ್ಘಾವಧಿಯ ಪರಿಹಾರ ಕಲ್ಪಿಸುವ ಉದ್ದೇಶದಿಂದ 150 ಕಿ.ಮೀ. ಉದ್ದದ ಎಲಿವೇಟೆಡ್ ಕಾರಿಡಾರ್‌ಗಳನ್ನು ನಿರ್ಮಿಸುವ ಗುರಿ ಹೊಂದಲಾಗಿದೆ. ಇದರಲ್ಲಿ 75 ಕಿ.ಮೀ. ಉದ್ದದ ಕಾರಿಡಾರ್ ನಿರ್ಮಾಣಕ್ಕೆ ಟೆಂಡರ್ ಕರೆಯಲು ತೀರ್ಮಾನಿಸಲಾಗಿದೆ. ಇದಕ್ಕೆ ಅಗತ್ಯವಿರುವ ಎಲ್ಲಾ ರೀತಿಯ ಪೂರ್ವಸಿದ್ಧತೆಗಳನ್ನು ಕೈಗೊಳ್ಳಲಾಗಿದೆ ಎಂದರು.

ಪ್ರಮುಖ ರಸ್ತೆಗಳ ಅಭಿವೃದ್ಧಿಗೆ ಸಮಗ್ರ ಯೋಜನೆ

ನಗರದ ಸಂಚಾರ ದಟ್ಟಣೆಯನ್ನು ಪರಿಣಾಮಕಾರಿಯಾಗಿ ಕಡಿಮೆಗೊಳಿಸಲು ಸಮಗ್ರ ಪರಿಹಾರ ಯೋಜನೆಗಳನ್ನು ಅನುಷ್ಠಾನಗೊಳಿಸಬೇಕಾಗಿದೆ. ಈ ನಿಟ್ಟಿನಲ್ಲಿ ವೈಟ್ ಟಾಪಿಂಗ್ ರಸ್ತೆಗಳು, ಸುರಂಗ ಮಾರ್ಗಗಳು ಹಾಗೂ ಎಲಿವೇಟೆಡ್ ಕಾರಿಡಾರ್‌ಗಳನ್ನು ನಿರ್ಮಿಸಲಾಗುತ್ತಿದೆ. ಎಲಿವೇಟೆಡ್ ಹಾಗೂ ಸುರಂಗ ಮಾರ್ಗಗಳು ನಿರ್ಮಾಣವಾದ ನಂತರ ಪ್ರವೇಶ ಮತ್ತು ನಿರ್ಗಮನ (ಎಂಟ್ರಿ-ಎಕ್ಸಿಟ್) ಪಾಯಿಂಟ್‌ಗಳಲ್ಲಿ ಸಂಚಾರ ದಟ್ಟಣೆ ಉಂಟಾಗದಂತೆ ರಸ್ತೆ ಜಾಲವನ್ನು ಅಭಿವೃದ್ಧಿಪಡಿಸಿ ಸೂಕ್ತ ಪರಿಹಾರ ಕ್ರಮಗಳನ್ನು ರೂಪಿಸಬೇಕು. ಈ ಸಂಬಂಧ ಅಧಿಕಾರಿಗಳಿಗೆ ಅಗತ್ಯ ನಿರ್ದೇಶನಗಳನ್ನು ನೀಡಲಾಗಿದೆ ಎಂದರು.

ಬೆಂಗಳೂರಿನ ಸಂಚಾರ ದಟ್ಟಣೆ ಸಮಸ್ಯೆಗೆ ಶಾಶ್ವತ ಪರಿಹಾರ ಒದಗಿಸಲು 275 ಕಿ.ಮೀ. ಮೆಟ್ರೋ ಜಾಲ ನಿರ್ಮಿಸುವ ಗುರಿ ಹೊಂದಲಾಗಿದೆ. ಇದರ ಜೊತೆಗೆ ಸಾರ್ವಜನಿಕ ಬಸ್ ಸಾರಿಗೆಗೂ ಹೆಚ್ಚಿನ ಆದ್ಯತೆ ನೀಡಬೇಕಾಗಿದೆ. ಹೊರ ವರ್ತುಲ ರಸ್ತೆಯ ಮರುವಿನ್ಯಾಸಕ್ಕಾಗಿ 450 ಕೋಟಿ ರೂ. ವೆಚ್ಚದ ಸಮಗ್ರ ಯೋಜನೆ ರೂಪಿಸಲಾಗಿದೆ. ಮೆಟ್ರೋ ಕಾಮಗಾರಿಯೊಂದಿಗೆ ಈ ಯೋಜನೆಯನ್ನು ಏಕಕಾಲದಲ್ಲಿ ಆರಂಭಿಸಿದರೆ ಸಾರ್ವಜನಿಕರಿಗೆ ಹೆಚ್ಚಿನ ತೊಂದರೆ ಉಂಟಾಗುವ ಸಾಧ್ಯತೆ ಇದೆ. ಆದ್ದರಿಂದ ಸಂಚಾರಿ ಪೊಲೀಸರೊಂದಿಗೆ ಚರ್ಚಿಸಿ ಸೂಕ್ತ ಸಮಯದಲ್ಲಿ ಕಾಮಗಾರಿ ಆರಂಭಿಸಲಾಗುವುದು ಎಂದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+